ಕಲಬುರಗಿ: ಮಹಾರಾಷ್ಟ್ರದ ಬಸ್‌ಗೆ ಮಸಿ ಬಳಿದು ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಶುಕ್ರವಾರ ಅಫಜಲಪೂರ ತಾಲ್ಲೂಕಿನ ಬಳೂರ್ಗಿ ಗ್ರಾಮದಲ್ಲಿ ನಡೆದಿದೆ.
ಮಹಾರಾಷ್ಟ್ರದಿಂದ ಬಂದ ಬಸ್‌ನ್ನು ತಡೆದ ಕನ್ನಡಪರ ಹೋರಾಟಗಾರರು ಮಹಾರಾಷ್ಟ್ರದ ಬಸ್‌ಗಳಿಗೆ ಮಸಿ ಬಳಿದು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಹಾರಾಷ್ಟ್ರ ಬಸ್‌ಗೆ ಬೆಳಗಾವಿ, ಅಕ್ಕಲಕೋಟೆ, ಸೊಲ್ಲಾಪುರ, ಜತ್ ನಮ್ಮದೇ ಎಂದು ಭಿತ್ತಿಪತ್ರ ಅಂಟಿಸಿ ಕನ್ನಡಪರ ಹೋರಾಟಗಾರರು ಘೋಷಣೆ ಕುಗಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ರವೀಂದ್ರ ಜಮಾದಾರ್ ಮಾತನಾಡಿ, ಮಹಾರಾಷ್ಟ್ರ ಸರ್ಕಾರ ಪದೇ ಪದೇ ಗಡಿ ವಿಚಾರಕ್ಕೆ ಕಾಲು ಕೆರೆದು ಜಗಳಕ್ಕೆ ಬರುತ್ತಿದ್ದು, ರಾಜ್ಯದ ಸಾರಿಗೆ ಬಸ್‌ಗಳಿಗೆ ಮಸಿ ಬಳಿಯವುದು ಸೇರಿದಂತೆ ಇತರೆ ಕೀಳು ಮಟ್ಟದ ಕೆಲಸಗಳನ್ನು ಮಾಡಿ ಕನ್ನಡಿಗರಿಗೆ ಅವಮಾನ ಮಾಡುವ ಕೆಲಸ ನಿರಂತರವಾಗಿ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ಮುಂದೆ ಯಾವುದೇ ಕಾರಣಕ್ಕೂ ಯಾವುದೇ ಅವಮಾನ ಸಹಿಸಿಕೊಳ್ಳುವುದಿಲ್ಲ. ಏಟಿಗೆ ಎದಿರೇಟು ನೀಡಲು ನಾವು ಸಿದ್ಧರಿದ್ದೇವೆ. ಇನ್ನು ಮುಂದೇನಾದರೂ ಬಾಲ ಬಿಚ್ಚಿದರೆ ಅವರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…