ಕಲಬುರಗಿ: ಐದು ವರ್ಷದ ಹಸುಗೂಸಿನ ಮೇಲೆ 40 ವರ್ಷದ ವ್ಯಕ್ತಿಯೋರ್ವ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಚಿತ್ತಾಪುರ ತಾಲ್ಲೂಕಿನ ವಾಡಿ ವ್ಯಾಪ್ತಿಯ ಪ್ರದೇಶದಲ್ಲಿ ನಡೆದಿದೆ.
ಗ್ರಾಮದ ಹೊರ ವಲಯದ ಜಮೀನಿನಲ್ಲಿ ತಾಯಿಯೊಂದಿಗೆ ಕೃಷಿ ಕೆಲಸಕ್ಕೆ ಬಾಲಕಿ ಹೋಗಿದ್ದಳು ಎನ್ನಲಾಗಿದ್ದು, ನಿರ್ಜನ ಪ್ರದೇಶದ ಸದ್ಬಳಕೆಗೆ ಮುಂದಾದ ಅದೇ ತಾಂಡಾದ ಆರೋಪಿ ಕುಮಾರ ತಾನು ಜಾಧವ, ಚಾಕಲೇಟ್ ಕೊಡುವ ನೆಪದಲ್ಲಿ ಬಾಲಕಿಯನ್ನು ತೊಗರಿ ಹೊಲದೊಳಗೆ ಕರೆದೋಯ್ದಿದ್ದಾನೆ.
ಈ ವೇಳೆ ಬಾಲಕಿಯ ಮೇಲೆ ಅತ್ಯಾಚಾರವೆಸಗಲು ಮುಂದಾದಾಗ ಬಾಲಕಿ ಜೋರಾಗಿ ಕಿರುಚಿದ್ದಾಳೆ. ಪರಿಣಾಮ ಅಕ್ಕಪಕ್ಕದ ಹೊಲದಲ್ಲಿ ಕಾಯಕ ನಿರತ ಕೃಷಿಕರು ಹಾಗೂ ಸಮೀಪದಲ್ಲಿದ್ದ ಬಾಲಕಿಯ ತಾಯಿ ಓಡಿ ಬಂದು ಬಾಲಕಿಯನ್ನು ರಕ್ಷಿಸಿದ್ದಾರೆ.
ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯನ್ನು ಹಿಡಿದು ಸಾರ್ವಜನಿಕರು ಸ್ಥಳದಲ್ಲೇ ಸ್ಥಳಿಸಿದ ಪ್ರಸಂಗ ನಡೆದಿದೆ. ಕಾರ್ಮಿಕ ಸಂಘಟನೆಯ ಮುಖಂಡರು ಸಂತ್ರಸ್ತೆ ಬಾಲಕಿಯ ಕುಟುಂಬದ ಬೆಂಬಲಕ್ಕೆ ನಿಂತಿದ್ದು, ಪ್ರಕರಣ ವಾಡಿ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಡಿವೈಎಸ್ಪಿ ಉಮೇಶ ಚಿಕ್ಕಮಠ, ಸಿಪಿಐ ಪ್ರಕಾಶ ಯಾತನೂರ, ಪಿಎಸ್ ಐ ಮಹಾಂತೇಶ ಪಾಟೀಲ ವಿಚಾರಣೆ ನಡೆಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…