ಯಡ್ರಾಮಿ : ಇಜೇರಿ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ರಚಿತ ಸಂವಿಧಾನ ಅರ್ಪಿತ ದಿನದ ಅಂಗವಾಗಿ ಸಂವಿಧಾನ ಸಮರ್ಪಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಜೇವರ್ಗಿ ತಾಲೂಕಿನ ಮಾಜಿ ವಕೀಲರ ಸಂಘದ ಜಂಟಿ ಕಾರ್ಯದರ್ಶಿಯಾದ ರಾಜಶೇಖರ್ ಎಸ್ ಶಿಲ್ಪಿ ನೋಟರಿ ವಕೀಲರು ಭಾರತ ಸರ್ಕಾರ ಮಾತನಾಡಿ ಸಮಾಜದಲ್ಲಿ ಶೋಷಣೆಯನ್ನು ಅನುಭವಿಸುತ್ತಿರುವ ಹೆಣ್ಣು ಮಕ್ಕಳ ಸಲುವಾಗಿ ಪ್ರಪ್ರಥಮ ಬಾರಿಗೆ ಧ್ವನಿ ಎತ್ತಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಸ್ತ್ರೀಯರ ಪರ ಕಾಳಜಿಯನ್ನು ಹೊಂದಿದ ಮಹಾನ್ ಪುರುಷ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹತ್ತಾರು ದೇಶಗಳ ಸಂವಿಧಾನಗಳನ್ನು ನಿರಂತರವಾಗಿ ಅಧ್ಯಯನ ಮಾಡಿ ಎರಡು ವರ್ಷ 11 ತಿಂಗಳು 18 ದಿನಗಳ ಕಾಲ ಸುದೀರ್ಘವಾಗಿ ಸಮಯ ತೆಗೆದುಕೊಂಡು ಭಾರತ ಸಂವಿಧಾನವನ್ನು ಬರೆದುಕೊಟ್ಟರು ಎಂದು ತಿಳಿಸಿದರು.
ಈ ದೇಶದಲ್ಲಿ ಸಮಸ್ತ ಜಾತಿ ವರ್ಗದ ಜನರಿಗೆ ಕಾನೂನು ಬದ್ಧವಾಗಿ ಸಮಾನವಾದ ಅಧಿಕಾರ ಹಾಗೂ ಹಕ್ಕುಗಳನ್ನು ನೀಡುವ ಜೊತೆ ಸಮಾನವಾದ ಬಾಳ್ವೆ ಬೆಳಕನ್ನು ಚೆಲ್ಲಿದಂತಹ ಮಹಾನ್ ಪುರುಷ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಾಕ್ಟರೇಟ್ ಪಡೆದಂತ ಮಹಮ್ಮದ್ ಇನೂಸ ಅವರನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ಸೈದಪ್ಪ ಈಜೇರಿ, ಸೈದಪ್ಪ ಮುಡಗೋಳ, ಚಂದ್ರಕಾಂತ್ ಯಂಕಂಚಿ, ಮರಿಯಪ್ಪ ,ಜೈರಾಜಾಮ, ರವಿ, ಶೃತಿ ,ಸೈದಪ್ಪ ,ಎ.ಲ್.ಐ.ಸಿ ಬಸವರಾಜ್ ಕಟ್ಟಿಮನಿ ,ಶರಣು ಕಟ್ಟಿಮನಿ,ಈಶ್ವರ ಕಟ್ಟಿಮನಿ ಸೇರಿದಂತೆ ಗ್ರಾಮದ ನೂರಾರು ಸಾರ್ವಜನಿಕರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…