ಕಲಬುರಗಿ: ಕಾಂಗ್ರೆಸ್ ಮುಖಂಡರು ಹಾಗೂ ಮಾಜಿ ಎಂಎಲ್ಸಿಗಳು ಆಗಿರುವ ಅಲ್ಲಂಪ್ರಭು ಪಾಟೀಲ್ ನೆಲೋಗಿ ಇವರು ಈಚೆಗೆ ನವ ದೆಹಲಿಗೆ ಭೇಟಿ ನೀಡಿ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರು. ಈ ಭೇಟಿಯಲ್ಲಿ ಅಲ್ಲಂಪ್ರಭು ಪಾಟೀಲರು ಕಲಬುರಗಿ ನಗರ ಸೇರಿದಂತೆ ಜಿಲ್ಲೆಯ ರಾಜಕೀಯ ಬೆಳವಣಿಕೆಗಳನ್ನು ವಿಸ್ತೃತವಾಗಿ ರಾಜಕಾರಣದ ಅನೇಕ ವಿಷಯಗಳನ್ನು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಡಾ. ಮಲ್ಲಿಕಾರ್ಜುನ ಖರ್ಗೆ ಅವರೊಟ್ಟಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರೂ ಇದ್ದರು.