ಕಲಬುರಗಿ: ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 499 ಅಂಗನವಾಡಿ ಕೇಂದ್ರಗಳಲ್ಲಿ ದಾಖಲಾದ ಫಲಾನುಭವಿಗಳಿಗೆ 2022ರ ನವೆಂಬರ್ ತಿಂಗಳಿಗೆ ಪೂರಕ ಪೌಷ್ಠಿಕ ಆಹಾರ ಸಾಮಗ್ರಿಗಳನ್ನು ಸರಬರಾಜು ಮಾಡಲು ರೂಟ್ ಮ್ಯಾಪನ್ನ್ನು ಸಿದ್ಧಪಡಿಸಿ ಇದೇ ಡಿಸೆಂಬರ್ 2 ರಿಂದ 9ರ ವರೆಗೆ ಕಲಬುರಗಿ(ನಗರ) ಯೋಜನೆಯ ಅಂಗನವಾಡಿ ಕೇಂದ್ರಗಳಿಗೆ ಆಹಾರ ಸಾಮಗ್ರಿ ಸರಬರಾಜು ಮಾಡಲಾಗುತ್ತಿದೆ ಎಂದು ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.