ಕಲಬುರಗಿ: ಸರ್ಕಾರಿ ನೌಕರಿ ಪಡೆಯುವುದು, ದೀರ್ಘ ಕಾಲ ನೌಕರಿ ಮಾಡುವುದೇ ದೊಡ್ಡ ಸಾಧನೆಯಲ್ಲ. ಬದಲಿಗೆ ದೊರೆತ ಹುದ್ದೆಗೆ ಪ್ರಾಮಾಣಿಕತೆ, ನಿಷ್ಠೆ ಹಾಗೂ ಕರ್ತವ್ಯಬದ್ಧತೆಯಿಂದ ಸೇವೆ ಸಲ್ಲಿಸುವುದು ಮುಖ್ಯ. ಅಂತಹ ಸೇವೆ ನಿಜಕ್ಕೂ ಸಾರ್ಥಕತೆ, ಆತ್ಮತೃಪ್ತಿ ಪಡೆಯಲು ಸಾಧ್ಯವಿದೆ ಎಂದು ನಿವೃತ್ತ ಉಪನ್ಯಾಸಕಿ ಚಂದ್ರಪ್ರಭ ಕಮಲಾಪುರಕರ್ ಅಭಿಪ್ರಾಯಪಟ್ಟರು.
ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪಿಯು ಕಾಲೇಜಿನಲ್ಲಿ ಗುರುವಾರ ತಮಗೆ ಏರ್ಪಡಿಸಲಾಗಿದ್ದ ವಯೋನಿವೃತ್ತ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನವನ್ನು ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.
ಶಿಕ್ಷಕ ಮತ್ತು ವೈದ್ಯ ವೃತ್ತಿ ಬಹಳ ಜವಾಬ್ದಾರಿಯುತವಾಗಿದೆ. ವಿದ್ಯಾರ್ಥಿಗಳಲ್ಲಿ ದೇವರನ್ನು ಕಾಣುವ ಪ್ರವೃತ್ತಿ ಶಿಕ್ಷಕರದಾಗಿರಬೇಕು. ವಿದ್ಯಾರ್ಥಿಗಳು ಕಾಟಾಚಾರಕ್ಕೆ ಶಾಲಾ-ಕಾಲೇಜಿಗೆ ಬರದೆ, ನಿರಂತರವಾದ ಅಧ್ಯಯನ ಮಾಡಿ, ಉತ್ತಮ ಫಲಿತಾಂಶ ಪಡೆಯಬೇಕು. ತಂದೆ-ತಾಯಿ, ಗುರು-ಹಿರಿಯರಿಗೆ ಗೌರವ ನೀಡಬೇಕು. ಹುಟ್ಟು-ಸಾವಿನ ಮಧ್ಯದ ಅವಧಿಯನ್ನು ಸುವರ್ಣ ಅಕ್ಷರಗಳಲ್ಲಿ ಬರೆದಿಡುವಂತೆ ಬದುಕಿದ್ದೇ ಆದರೆ, ಅವರು ಜೀವನದ ಫಲಿತಾಂಶದಲ್ಲಿ ಉತ್ತೀರ್ಣರಾದಂತೆ ಎಂದು ಅನೇಕ ವಿಚಾರಗಳನ್ನು ಹೇಳಿದರು.
ಕಾಲೇಜಿನ ಪ್ರಾಚಾರ್ಯ ಮಹಮ್ಮದ್ ಅಲ್ಲಾಉದ್ದೀನ್ ಸಾಗರ, ಸಿಬಿಸಿ ಉಪಾಧ್ಯಕ್ಷ ರವೀಂದ್ರ ವೈ.ಕೋಳಕೂರ್ ಮಾತನಾಡುತ್ತಾ, ಕಮಲಾಪುರಕರ್ ಅವರು ಬಹಳ ಅಮೂಲ್ಯವಾದ ಸೇವೆಯಲ್ಲಿ ಸಲ್ಲಿಸಿದ್ದಾರೆ. ಅವರು ಮಾತೃಹೃದಯಿಯಾಗಿದ್ದರು. ಕರ್ತವ್ಯಬದ್ಧತೆ, ಶಿಸ್ತು, ಪ್ರಾಮಾಣಿಕ ವ್ಯಕ್ತಿ ಇವರಾಗಿದ್ದಾರೆ. ವಿದ್ಯಾರ್ಥಿಗಳ ಮನಮುಟ್ಟುವಂತೆ ಬೋಧನಾ ಕಾರ್ಯ ಮಾಡುತ್ತಿದ್ದರು. ನಾನು ಅನೇಕ ಬೀಳ್ಕೊಡುಗೆ ಸಮಾರಂಭಗಳಲ್ಲಿ ಭಾಗವಹಿಸಿದ್ದೇನೆ. ಆದರೆ ಇದೊಂದು ಅಪರೂಪದ, ಮಾದರಿ ಕಾರ್ಯಕ್ರಮವಾಗಿದೆ. ಸೇವೆಗೆ ಗೌರವ ನೀಡುವುದು ಜವಬ್ದಾರಿಯುತ ಸಮಾಜದ ಆದ್ಯ ಕರ್ತವ್ಯವಾಗಿದೆ ಎಂದರು.
ಉಪನ್ಯಾಸಕರು, ಸ್ಥಳೀಯ ಪ್ರೌಢಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳಿಂದ ಅನಿಸಿಕೆ ಜರುಗಿತು. ಕಾಲೇಜಿನ ಉಪನ್ಯಾಸಕರಾದ ರವೀಂದ್ರಕುಮಾರ ಬಟಗೇರಿ, ಶರಣಮ್ಮ ಭಾವಿಕಟ್ಟಿ, ನಯಿಮಾ ನಾಹಿದ್, ಎಚ್.ಬಿ.ಪಾಟೀಲ, ಶಂಕ್ರೆಪ್ಪ ಹೊಸದೊಡ್ಡಿ, ಪ್ರಕಾಶ ಪಾಟೀಲ, ರೇಣುಕಾ ಚಿಕ್ಕಮೇಟಿ, ಪ್ರ.ದ.ಸ ನೇಸರ ಎಂ.ಬೀಳಗಿಮಠ, ನಿಯೋಜಿತ ಉಪನ್ಯಾಸಕರಾದ ಸಿದ್ದಾರೂಡ ಬಿರಾದಾರ, ದೇವೇಂದ್ರಪ್ಪ ಬಡಿಗೇರ್, ಜಮೀಲ್ ಅಹಮ್ಮದ್, ಅತಿಥಿ ಉಪನ್ಯಾಸಕರಾದ ರಂಜಿತಾ ಠಾಕೂರ್, ಸಮೀನಾ ಬೇಗಂ, ನುಝಹತ್ ಪರ್ವಿನ್ ಬೇಗಂ, ಪ್ರಮುಖರಾದ ಶೋಭಾ ಸಿ.ಹಿರೇಮನಿ, ಕಾರ್ತಿಕ ಕೋಮಟವಾರ್, ಪ್ರೀತಿ ಜೆ.ಯೆರೆಜಿನ್ನಾ, ಶಾಂತಾ ಭೀಮಶೇನರಾವ್, ಸುಜಾತಾ ದೇಶಪಾಂಡೆ, ಮಹೇಶಕುಮಾರ ಚಿಂಚೋಳಿಕರ್, ದೇವೇಂದ್ರಪ್ಪ, ಜಯಶ್ರೀ ಪಾಟೀಲ, ದೇವೀಂದ್ರ, ಸಹಾಯಕರಾದ ಬಾಗಣ್ಣ ಹರನೂರ್, ರೆಹಮಾನ್ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…