ಮಕ್ಕಳಿಗೆ ಶಿಸ್ತು ಮತ್ತು ಸೇವಾ ಮನೋಭಾವ ಕಲಿಸಿ-ರಾಜಾ ಮದನಗೋಪಾಲ ನಾಯಕ

0
53

ಸುರಪುರ: ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಪ್ರಧಾನ ಗುರುಗಳಿಗೆ ಮಾಹಿತಿ ಶಿಬಿರ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಅಧ್ಯಕ್ಷ ಹಾಗು ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕ ಮಾತನಾಡಿ,ಶಿಕ್ಷಕರು ಮಕ್ಕಳಲ್ಲಿ ಶಿಸ್ತು ಮತ್ತು ಸೇವಾ ಮನೋಭಾವನೆ ಬೆಳಸಿ,ಇದರಿಂದ ಮಕ್ಕಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಕಲಿಸಿದಂತಾಗಲಿದೆ.ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮಕ್ಕಳಲ್ಲಿ ದೇಶಭಿಮಾನ ಮತ್ತು ಸಮಾಜ ಮುಖಿ ಚಿಂತನೆ ಬೆಳೆಯಲಿದೆ,ಇಂದು ನಡೆಯುವ ಶಿಬಿರದಲ್ಲಿನ ವಿಷಯವನ್ನು ಆಯಾ ಶಾಲೆಗಳಲ್ಲಿ ಪ್ರಧಾನ ಗುರುಗಳು ಮಕ್ಕಳಲ್ಲಿ ಬೆಳೆಸುವ ಮೂಲಕ ಮಕ್ಕಳಲ್ಲಿ ನೈತಿಕ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಿದಂತಾಗಲಿದೆ ಎಂದರು.

Contact Your\'s Advertisement; 9902492681

ಇದೇ ಸಂದರ್ಭದಲ್ಲಿ ಮಂಗಳವಾರ ನಿಧನರಾದ ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಶ್ರದ್ದಾಂಜಲಿ ಸಲ್ಲಿಸಿ ಎರಡು ನಿಮಿಷಗಳ ಮೌನಾಚರಣೆ ನಡೆಸಲಾಯಿತು.ನಂತರ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಕ್ರೀಯಾ ಯೋಜನೆಗಳ ಕುರಿತ ಪುಸ್ತಕ ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೈಹಿಕ ಶಿಕ್ಷಣಾಧಿಕಾರಿ ಬಿಆರ್ ಪೊಲೀಸ್ ಪಾಟೀಲ ವಹಿಸಿದ್ದರು.ವೇದಿಕೆಯಲ್ಲಿ ಬಸವರಾಜ ಜಮದ್ರಖಾನಿ,ಜಯಲಲಿತ ಪಾಟೀಲ,ಶಿಕ್ಷಕರ ಸಂಘದ ಅಧ್ಯಕ್ಷ ಸೋಮರಡ್ಡಿ ಮಂಗಿಹಾಳ,ಶರಣಬಸವ ದೇವರಗೋನಾಲ,ಅಪ್ಪಣ್ಣ ಕುಲಕರ್ಣಿ,ಶಾಂತಪ್ಪ ಅಗ್ನಿ,ಜಾಕೀರ್ ಹುಸೇನ,ಬಿಆರ್ಪಿ ಖಾದರ ಪಟೇಲ್,ಎಪಿಎಫ್‌ನ ಅನ್ವರ ಜಮಾದಾರ್,ಗೀತಾರಾಣಿ ಉಪಸ್ಥಿತರಿದ್ದರು.

ಸಮಾರೋಪ ಸಮಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಅಮರೇಶ ಕುಂಬಾರ,ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮೌನೇಶ ಕಂಬಾರ ಭಾಗವಹಿಸಿದ್ದರು. ರಾಜಶೇಖರ ದೇಸಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಶ್ರೀಶೈಲ ಯಂಕಂಚಿ ನಿರೂಪಿಸಿದರು.ತಾಲ್ಲುಕಿನ ಎಲ್ಲಾ ಶಾಲೆಗಳ ಪ್ರಧಾನ ಗುರುಗಳು ಹಾಗು ಸಿಆರ್‌ಪಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here