ಬಿಸಿ ಬಿಸಿ ಸುದ್ದಿ

ಕೊಪ್ಪಳ: ‘ಕಲಿಕೋಪಕರಣ ಮೇಳ’

ಕೊಪ್ಪಳ: ಜಿಲ್ಲೆಯ ಕುಕನೂರ ತಾಲ್ಲೂಕಿನ ಯರೇಹಂಚಿನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿನ್ನಾಳ ಕ್ಲಸ್ಟರ್ ಮಟ್ಟದ ಕಲಿಕೋಪಕರಣ ಮೇಳ ಮತ್ತು ಶಿಕ್ಷಕರ ಸಮಾಲೋಚನೆ ಸಭೆಯನ್ನು ಶುಕ್ರವಾರ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ತಿರುಕಪ್ಪ ಕಮತರ ವಹಿಸಿದ್ದರು. ಕುಕನೂರ ವಲಯದ ಬಿ.ಆರ್.ಪಿ ನೋಡಲ್ ಅಧಿಕಾರಿ ಮಹೇಶ್ ಅಸೂಟಿ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ವಿಶೇಷ ಉಪನ್ಯಾಸಕರಾಗಿ ಯಡಿಯಾಪೂರ ಸಿ.ಆರ್.ಪಿ. ಮಂಜುನಾಥಯ್ಯ ತೆಗ್ಗಿನಮನಿ ಆಗಮಿಸಿದರು. ಸತೀಶ್ ಚೆನ್ನಪ್ಪಗೌಡರ ಕಾರ್ಯಕ್ರಮ ನಿರೂಪಿಸಿದರು. ಬಿನ್ನಾಳ ವಲಯದ ಸಂಪನ್ಮೂಲ ವ್ಯಕ್ತಿ ಶಿವಕುಮಾರ ಹೊಸಮನಿ ರವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಲಿಕೋಪಕರಣಗಳು ಮಕ್ಕಳ ಕಲಿಕೆಯನ್ನು ಹಾಗೂ ಶಿಕ್ಷಕರು ಬೋಧಿಸುವ ಕೌಶಲ್ಯವನ್ನು ಗಟ್ಟಿಗೊಳಿಸುತ್ತವೆ, ಎಂದು ಅಭಿಪ್ರಾಯವನ್ನು ಪಟ್ಟರು.

ಶಾಲೆಯ ಮುಖ್ಯ ಶಿಕ್ಷಕ ಶರಣಪ್ಪ ಸಾದರ ಅವರು ಸ್ವಾಗತಿಸಿದರು. ಶ್ರೀನಿವಾಸ ತಟ್ಟಿ ವಂದಿಸಿದರು. ಕಾರ್ಯಕ್ರಮದಲ್ಲಿ ಬಿನ್ನಾಳ ಕ್ಲಸ್ಟರ್ ನ ಎಲ್ಲಾ ಶಿಕ್ಷಕರು ಇದ್ದರು.

emedialine

Recent Posts

ಸಮಸ್ತ ಲಿಂಗಾಯತರ ಪ್ರಗತಿಗೆ ಲಿಂಗಾಯತ ಸ್ವತಂತ್ರ ಧರ್ಮ ಅಗತ್ಯ: ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…

48 mins ago

ವಿಭಾಗ ಮಟ್ಟದ ದಾಸ ಸಾಹಿತ್ಯ ಸಮ್ಮೇಳನದಲ್ಲಿ ವೈದ್ಯ ಶ್ರೀ ಪುರಸ್ಕೃತ ಡಾ. ಶರಣಬಸಪ್ಪ ಕ್ಯಾತನಾಳ ಪುರಸ್ಕಾರ

ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…

1 hour ago

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

3 hours ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

3 hours ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

5 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

6 hours ago