ಕಲಬುರಗಿ: ನಗರದ ಎನ್‍ವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೋಗ್ ಶೇಟಿ ಸೈನ್ಸ್ ಸೆಂಟರ್ ಹಾಗೂ ನೂತನ ವಿದ್ಯಾಲಯ ಸೊಸೈಟಿಯಿಂದ 2022-23ನೇ ಸಾಲಿನ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಯಿತು.
ಈ ವೇಳೆ ಡಾ.ರಂಗನಾಥ ಯಕ್ಕುಂದಿ ಚಾಲನೆ ನೀಡಿ ಮಾತನಾಡಿದರು. ದೇಶದ ಪ್ರಗತಿಗೆ ವಿಜ್ಞಾನ ಅತ್ಯವಶ್ಯಕ, ವಿಜ್ಞಾನವಿಲ್ಲದೇ ದೇಶದ ಅಭಿವೃದ್ಧಿ ಅಸಾಧ್ಯ. ಆದ್ದರಿಂದ ವಿಜ್ಞಾನ ವಸ್ತು ಪ್ರದರ್ಶನದಂತಹ ಕಾರ್ಯಕ್ರಮಗಳು ಉಪಯುಕ್ತ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಅಧ್ಯಕ್ಷ ಡಾ.ಗೌತಮ್ ಎನ್‍ವಿ ಸಂಸ್ಥೆಯ ಜಾಗೀರದಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಸಸ್ಯಶಾಸ್ತ್ರ ಪ್ರಾಣಿಶಾಸ್ತ್ರ ರಸಾಯನಶಾಸ್ತ್ರ ಐತಿಹಾಸಿಕ ಮತ್ತು ಭೌಗೋಳಿಕ ಹಾಗೂ ವೈಜ್ಞಾನಿಕ ಮಾದರಿಗಳು ಇದ್ದವು ವಿದ್ಯಾರ್ಥಿಗಳು ಹಾಗೂ ಪಾಲಕರು ವಿಜ್ಞಾನದ ಮಾದರಿಗಳನ್ನು ವೀಕ್ಷಿಸಿದರು.
ಶ್ರೀಕಾಂತ ಕುಲಕರ್ಣಿ, ಡಾ.ಕಿಶೋರ ದೇವಳಗಾಂವಕರ್, ಸುಧಾ ಕರಲಗಿಕರ್, ಉದಯಕುಮಾರ, ಸುರೇಂದ್ರ ಸಿದ್ದಾಪುರಕರ್, ರಮೇಶ, ವಿಜಯಕುಮಾರ ಪಾಟೀಲ್ ಹಾಗೂ ಇತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…