ಕಲಬುರಗಿ : ಕನ್ನಡನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘ ನಿಯಮಿತ, ಕಲಬುರಗಿ ವತಿಯಿಂದ ಕಲ್ಯಾಣ ಕರ್ನಾಟಕ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಲೇಖಕರ ಪುಸ್ತಕಗಳಿಗೆ ಪ್ರಶಸ್ತಿಗಳನ್ನು ಕೊಡುವ ಯೋಜನೆಯನ್ನು ರೂಪಿಸಲಾಗಿದೆ. ಈಗಾಗಲೇ ಕಳೆದ ಎಂಟು ವರ್ಷಗಳಿಂದ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಅದರಂತೆ ಈಗ 2021 ರಲ್ಲಿ ಪ್ರಥಮ ಮುದ್ರಣವಾದ ಕವನ ಸಂಕಲನ, ಕಥಾ ಸಂಕಲನ, ಕಾದಂಬರಿ, ಮಹಿಳಾ ಸಾಹಿತ್ಯ, ಹಾಗೂ ಸಂಕೀರ್ಣ ಕೃತಿಗಳನ್ನು ಅಹ್ವಾನಿಸಲಾಗಿದೆ.

ಲೇಖಕರು ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೀದರ ಜಿಲ್ಲೆಗಳ ನಾಗರಿಕರಾಗಿರಬೇಕು. ಕನ್ನಡನಾಡು ಪ್ರಕಾಶನದ ಪುಸ್ತಕಗಳನ್ನು ಮತ್ತು ಸಂಘದ ಆಡಳಿತ ಮಂಡಳಿ ಸದಸ್ಯರ ಮಸ್ತಕಗಳು ಹಾಗೂ ಸಂಪಾದಿತ ಪುಸ್ತಕಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ. ಪ್ರಶಸ್ತಿಗಳು 5,000=00 ನಗದು, ಪ್ರಮಾಣ ಪತ್ರವನ್ನು ಒಳಗೊಡಿರುತ್ತದೆ. 2021ರಲ್ಲಿ ಪ್ರಕಟವಾದ ಉತ್ತಮ ಕಥಾಸಂಕಲನ, ಉತ್ತಮ ಕವನ ಸಂಕಲನ, ಉತ್ತಮ ಕಾದಂಬರಿ, ಮಹಿಳಾ ಸಾಹಿತ್ಯ ಮತ್ತು ಸಂಕೀರ್ಣ ವಿಭಾಗದಲ್ಲಿ ಉತ್ತಮ ಕೃತಿಗೆ ಪ್ರಶಸ್ತಿ ನೀಡಲಾಗುವುದು.

ಪುಸ್ತಕಗಳನ್ನು ಸಲ್ಲಿಸಲು ಕೊನೆಯ ದಿನಾಂಕ 25-12-2022, ತಮ್ಮ ಕೃತಿಯ ಮೂರು ಪ್ರತಿಗಳನ್ನು ಅಧ್ಯಕ್ಷರು “ಕನ್ನಡನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘ ನಿಯಮಿತ” ಜಿ.2 ವಿ. ವಿ.ಹಾಸ್ಟೇಲ್ ಕಾಂಪ್ಲೆಕ್ಸ್ ಸೇಡಂ ರಸ್ತೆ ಕಲಬುರಗಿ.-585105. ಈ ವಿಳಾಸಕ್ಕೆ ಖುದ್ದಾಗಿ ಇಲ್ಲವೆ ಅಂಚೆ ಮೂಲಕ ಕಳಿಸಿಕೊಡಲು ಕೋರಲಾಗಿದೆ.

ಈ ಪ್ರಶಸ್ತಿಯ ನೀಡಿಕೆಯಲ್ಲಿ ನಿರ್ಣಾಯಕರ ನಿರ್ಣಯವೇ ಅಂತಿಮ ಈ ಕುರಿತು ಪತ್ರ ವ್ಯವಹಾರ ಇಲ್ಲವೇ ವಿಚಾರಣೆಗೆ ಅವಕಾಶವಿಲ್ಲ. ಪ್ರಶಸ್ತಿಗೆ ಬಂದ ಪುಸ್ತಕಗಳನ್ನು ಹಿಂದುರಿಗಿಸಲಾಗುವುದಿಲ್ಲ.  ವಿವರಗಳಿಗಾಗಿ ಶ್ರೀ ಅಪ್ಪಾರಾವ ಅಕ್ಕೋಣಿ-9448570985 ಅಥವಾ ಡಾ. ಸ್ವಾಮಿರಾವ ಕುಲಕರ್ಣಿ- 9448333539 ಡಾ.ಶರಣಬಸಪ್ಪ ವಡ್ಡನಕೇರಿ 9741169055 ಇವರನ್ನು ಸಂಪರ್ಕಿಸಬಹುದಾಗಿದೆ.

emedialine

Recent Posts

ಸದ್ಗುಣ ಮೈಗೂಡಿಸಿ ಪ್ರಗತಿಪರ ಬದುಕು ಕಟ್ಟೋಣ : ಬಸವರಾಜ್ ಪಾಟೀಲ್ ಸೇಡಂ

ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…

1 hour ago

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

15 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

15 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

15 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

15 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420