ಕಲಬುರಗಿ: ಸಾಮಾಜಿಕ ನ್ಯಾಯಕ್ಕೆ ವೀರಶೈವ ಲಿಂಗಾಯತ ಸಮಾಜದ ಕೊಡುಗೆ ಅಪಾರ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಗರ ಮತ್ತು ಗ್ರಾಮಾಂತರ ಯುವ ಘಟಕದ ವತಿಯಿಂದ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರು ಐಟಿ-ಬಿಟಿ ಕ್ಷೇತ್ರದಲ್ಲಿ ಹೆಸರು ಮಾಡಿರಬಹುದು. ಆದರೆ ಈ ಕ್ಷೇತ್ರಕ್ಕೆ ಅಪಾರ ಸಂಖ್ಯೆಯ ಎಂಜಿನಿಯರ್‍ಗಳನ್ನು ಹಾಗೂ ವಿಜ್ಞಾನಿಗಳನ್ನು ನಮ್ಮ ಸಮಾಜದ ಮಠಗಳು ನೀಡಿವೆ. ಅನುಭವ ಮಂಟಪದ ಮೂಲಕ ಜಾತಿ ರಹಿತ, ಸಮ ಸಮಾಜವನ್ನು ನಿರ್ಮಿಸಲು ಯತ್ನಿಸಿದ ಬಸವಾದಿ ಶರಣರ ಪರಂಪರೆಯನ್ನು ವೀರಶೈವ ಲಿಂಗಾಯತ ಸಮಾಜದ ಮಠಗಳು ಇಂದಿಗೂ ಮುಂದುವರೆಸಿಕೊಂಡು ಹೊರಟಿವೆ ಎಂದರು.
ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರು, ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತಲೂ ಅಧಿಕ ಅಂಕಗಳನ್ನು ಪಡೆದ 231 ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ವಿತರಣೆ ಮಾಡಿದರು.
ಮುಖ್ಯ ಅತಿಥಿಯಾಗಿದ್ದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿ, ಸಮಾಜದ ವಿದ್ಯಾರ್ಥಿನಿಯರಿಗಾಗಿ ನಿರ್ಮಿಸಲಾಗಿರುವ ವಸತಿ ನಿಲಯದ ನಿರ್ವಹಣೆ ಮಡುವುದು ಬಹಳ ಮುಖ್ಯ. ಕೆಕೆಆರ್‍ಡಿಬಿಯ 90 ಲಕ್ಷ ರೂ. ಅನುದಾನದಲ್ಲಿ ನಗರದ ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪುತ್ಥಳಿ ಆವರಣದಲ್ಲಿ ಸುಂದರೀಕರಣ ಕಾರ್ಯ ನಡೆದಿದ್ದು, ಸಮಾಜದ ಕಲ್ಯಾಣ ಕಾರ್ಯಗಳಿಗೆ ಸಿಎ ಸೈಟ್ ಕೂಡ ಒದಗಿಸಲಾಗುವುದು ಎಂದು ತಿಳಿಸಿದರು.
ಶ್ರೀ ಶರಣಬಸವೇಶ್ವರ ಸಂಸ್ಥಾನದ ಡಾ. ದಾಕ್ಷಾಯಿಣಿ ಅವ್ವಾಜಿ, ಚಿರಂಜೀವಿ ದೊಡ್ಡಪ್ಪ ಅಪ್ಪಾ, ಮುಗಳನಾಗಾಂವಿಯ ಕಟ್ಟಿಮನಿ ಹಿರೇಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯರು, ಚವದಾಪುರಿ ಮಠದ ರಾಜಶೇಖರ ಶಿವಾಚಾರ್ಯರು, ಮಾದನಹಿಪ್ಪರಗಾದ ಅಭಿನವ ಶಿವಲಿಂಗ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದರು.
ಶಾಸಕರಾದ ಎಂ.ವೈ. ಪಾಟೀಲ, ಬಿ.ಜಿ.ಪಾಟೀಲ್, ಮಾಜಿ ಶಾಸಕರಾದ ಅಲ್ಲಮಪ್ರಭು ಪಾಟೀಲ, ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಕ್ರೆಡಲ್ ಅಧ್ಯಕ್ಷ ಚಂದು ಪಾಟೀಲ, ಬಸವ ಸಮಿತಿ ಅಧ್ಯಕ್ಷೆ ಡಾ.ವಿಲಾಸವತಿ ಖೂಬಾ, ಗುರಮ್ಮ ಸಿದ್ಧಾರೆಡ್ಡಿ, ಅಪ್ಪಾರಾವ್ ಅಕ್ಕೋಣಿ, ಶ್ರೀಶೈಲ ಘೂಳಿ ವೇದಿಕೆಯಲ್ಲಿದ್ದರು.
ತೊಗರಿ ಮಂಡಳಿ ಅಧ್ಯಕ್ಷ ವಿದ್ಯಾಸಾಗರ ಶಾಬಾದಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ್ ಯಡ್ರಾಮಿ, ಕರ್ನಾಟಕ ಮಾಧ್ಯಮ ಮಾನ್ಯತಾ ಸಲಹಾ ಮಂಡಳಿ ಸದಸ್ಯ ಹಣಮಂತರಾವ್ ಭೈರಾಮಡಗಿ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುರೇಶ್ ಸಜ್ಜನ್, ಶಿವನಾಥ ಪಾಟೀಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಮಹಾಸಭಾ ಜಿಲ್ಲಾಧ್ಯಕ್ಷ ಶರಣಕುಮಾರ್ ಮೋದಿ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಾಸಭಾ ಜಿಲ್ಲಾ ಘಟಕದ ಉಪಾಧ್ಯಕ್ಷ ಸಿದ್ದುಗೌಡ ಅಫಜಲಪುರ ಸ್ವಾಗತಿಸಿದರು. ಗೌರೀಶ ಪಾಟೀಲ್ ನಿರೂಪಿಸಿದರು.
ಸಮಾಜಮುಖಿ ಚಿಂತನೆಗಳ ಮೂಲಕ ಇಡೀ ಜಗತ್ತಿನಲ್ಲಿ ಅದ್ಭುತ ಕೆಲಸಗಳನ್ನು ಮಾಡುತ್ತಿರುವ ವೀರಶೈವ-ಲಿಂಗಾಯತ ಸಮಾಜವನ್ನು ಕೇಂದ್ರ ಸರಕಾರ ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡಬೇಕು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಹಾಸಭಾ ವತಿಯಿಂದ ಪ್ರತಿ ಪ್ರತಿಭಾನ್ವಿತ ವಿದ್ಯಾರ್ಥಿಗೆ ತಲಾ ರೂ.2500ದಂತೆ ಒಟ್ಟು 5000 ವಿದ್ಯಾರ್ಥಿಗಳಿಗೆ ರೂ. 5 ಕೋಟಿ ನೀಡಿ ಹುರಿದುಂಬಿಸಲಾಗುತ್ತಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…