ಆಧುನಿಕ ಜಗತ್ತಿನಲ್ಲಿ ಹೆಣ್ಣಿನ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿವೆ

ಕಲಬುರಗಿ: ಮಹಿಳೆ ಜೀವನದ ಎಲ್ಲ ಕ್ಷೇತ್ರದಲ್ಲಿಯೂ ಬಲಿಷ್ಠಳಾಗಿ ಕಾರ್ಯನಿರ್ವಹಿಸುತ್ತಿದ್ದಾಳೆ. ವೈಯಕ್ತಿಕ ಮತ್ತು ವೃತ್ತಿ ಜೀವನದಲ್ಲಿ ತನ್ನ ಜವಬ್ದಾರಿಗಳನ್ನು ಸರಿಯಾದ ರೀತಿಯಲ್ಲಿ ಸಾಗಿಸುತ್ತಿದ್ದಾಳೆ. ಹೆಣ್ಣು ಎಲ್ಲ ರೀತಿಯಲ್ಲೂ ಸಮರ್ಥಳಾದರೂ, ಅವಳ ಮೇಲಿನ ದೌರ್ಜನ್ಯ, ಹಿಂಸೆ ಕಡಿಮೆಯಾಗುತ್ತಿಲ್ಲ. ಈ ಆಧುನಿಕ ಜಗತ್ತಿನಲ್ಲಿ ಹೆಣ್ಣಿನ ಮೇಲಿನ ದೌರ್ಜನ್ಯ ಮತ್ತು ಹಿಂಸೆ ದಿನಕ್ರಮೇಣ ಹೆಚ್ಚಾಗುತ್ತಿವೆ ಎಂದು ಹಿಂಗುಲಾಂಬಿಕಾ ಆಯುರ್ವೇದ ವೈದ್ಯಕೀಯ ಕಾಲೇಜನ ಪ್ರಾಧ್ಯಾಪಕರಾದ ಡಾ. ನಿರ್ಮಲಾ ಕೆಳಮನಿ ಅಭಿಪ್ರಾಯವ್ಯಕ್ತಪಡಿಸಿದರು.

ಶರಣಬಸವ ವಿಶ್ವವಿದ್ಯಾಲಯದ ಕಂಪ್ಯೂಟರ ಸೈನ್ಸ್ ಇಂಜಿನಿಯರಿಂಗ್ ಮಹಿಳೆಯರ ವಿಭಾಗದ ಸಭಾಂಗಣದಲ್ಲಿ ಆಂತರಿಕ ದೂರು ಸಮಿತಿಯ ಅಡಿಯಲ್ಲಿ ಭಾನುವಾರ ಆಯೋಜಿಸಿದ್ದ ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಇತಿಹಾಸ ಪುಟಗಳನ್ನು ಮೆಲಕು ಹಾಕಿದಾಗ ಹೆಣ್ಣಿಗೆ ಶ್ರೇಷ್ಠ ಸ್ಥಾನವಿತ್ತು. ಉತ್ತಮ ಸಂಸ್ಕøತಿ ಇತ್ತು ಆ ಸಂಸ್ಕøತಿ ಇಂದು ಮರೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಮಹಿಳೆಯರು ತಮ್ಮ ವ್ಯಕ್ತಿತ್ವವನ್ನು ಸದಾಕಾಪಾಡಿಕೊಳ್ಳಬೇಕು ತಮ್ಮ ಜೀವನದ ಮೌಲ್ಯಗಳನ್ನು ಅರಿತುಕೊಂಡು ಜೀವನ ನಡೆಸಬೇಕು. ಯುವಜನತೆ ಜೀವನದ ಉತ್ಸಾಹ ಕಳೆದುಕೊಳ್ಳಬಾರದು. ಉತ್ತಮ ಸಂಸ್ಕøತಿ ಬೆಳಸಿಕೊಳ್ಳಬೇಕು. ತಮ್ಮ ಜೀವನದ ಜವಬ್ದಾರಿಗಳನ್ನು ಅರಿತುಕೊಂಡು ಜೀವನ ಸಾಗಿಸಬೇಕು ಆಗ ಮಾತ್ರ ದೌರ್ಜನ್ಯಗಳನ್ನು ನಿರ್ಮೂಲನೆಗೊಳಿಸಲು ಸಾಧ್ಯ ಎಂದರು.

ಶರಣಬಸವ ವಿಶ್ವವಿದ್ಯಾಲಯದ ಡೀನ್ ಡಾ. ಲಕ್ಷ್ಮಿ ಪಾಟೀಲ ಮಾಕಾ, ಐಸಿಸಿ ಕಮಿಟಿ ಚೆರಮನ್ ಡಾ. ಸುಜತಾ ಮಲ್ಲಾಪೂರೆ, sಸಂಚಾಲಕ ಡಾ. ಸ್ವಾತಿ ಕಲಶೆಟ್ಟಿ, ಸದಸ್ಯರಾದ ಡಾ. ಸುನಿತಾ ಬಿ ಪಾಟೀಲ, ಡಾ. ಜಗದೇವ ಕುಮಾರ ಪಾಟೀಲ, ಪ್ರೊ. ವೀರಶೆಟ್ಟಿ, ಅಮೃತಾ ವಿದ್ಯಾರ್ಥಿ ಅಭಿಷೇಕ ಸೇರಿದಂತೆ ಇತರರು ಇದ್ದರು. ಪ್ರೊ. ಸೃಷ್ಠಿ ನಿರೂಪಿಸಿದರು. ವಿದ್ಯಾರ್ಥಿನಿ ಉಷಾ ಪ್ರಾರ್ಥನೆ ಗೀತೆ ಹಾಡಿದರು.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

2 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

13 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

15 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

16 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

16 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

16 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420