ಬಿಸಿ ಬಿಸಿ ಸುದ್ದಿ

ಎಐವೈಎಫ್  ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ  ಹೋರಾಟ ಸಮಿತಿ ಅಸ್ತಿತ್ವಕ್ಕೆ

ಕಲಬುರಗಿ: ಇತ್ತೀಚೆಗೆ ಕಲಬುರಗಿ, ಯಾದಗಿರ, ರಾಯಚೂರು, ಬೀದರ, ಇತರ ಜಿಲ್ಲೆಗಳಿಂದ ಹಲವಾರು ಅಭ್ಯರ್ಥಿಗಳು ಸೇರಿ  ನಗರದಲ್ಲಿ ಕರೆದ ಸಭೆಯಲ್ಲಿ ಸುಧೀರ್ಘವಾಗಿ ಚರ್ಚಿಸಿ ಬರುವ ದಿನಗಳಲ್ಲಿ ಹಂತ ಹಂತವಾದ ಹೋರಾಟ ಮಾಡಿ ನ್ಯಾಯ ಪಡೆಯಬೇಕೆ೦ದು ತಿಮಾ೯ನಿಸಲಾಯಿತು.

ಕರ್ನಾಟಕ ರಾಜ್ಯದ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಮದುವೆಯಾದ ಅಭ್ಯರ್ಥಿಗಳಿಗೆ ಗಂಡನ ಆದಾಯ ಪ್ರಮಾಣ ಪತ್ರ ನೀಡದ ಕಾರಣ  ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಹೆಸರು ಕೈ ಬಿಟ್ಟಿರುವುದಕ್ಕೆ ಅಖಿಲ ಭಾರತ ಯುವಜನ ಒಕ್ಕೂಟ (ಎಐವೈಎಫ್)  ತೀವ್ರವಾಗಿ ಖಂಡಿಸುತ್ತದೆ.

ಬರುವ ಅಧಿವೇಶನದಲ್ಲಿ ಚರ್ಚಿಸಿ ಅನ್ಯಾಯವಾದ ಅಭ್ಯರ್ಥಿಗಳಿಗೆ ನ್ಯಾಯ ಕೊಡಿಸಬೇಕು. ಆಡಳಿತ ಹಾಗೂ ವಿರೋಧ ಪಕ್ಷದ ಜನಪ್ರತಿನಿಧಿಗಳಿಗೆ ಮನವಿ ಪತ್ರ  ನೀಡಬೇಕೆಂದು ಹಾಗೂ ಒಂದು ವೇಳೆ ನ್ಯಾಯ ದೊರೆಯದಿದ್ದರೆಬರುವ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಸ್ವರೂಪದ ಹೋರಾಟ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಜನಪರ ಹೋರಾಟಗಾರ,ನ್ಯಾಯವಾದಿ ಹಣಮಂತರಾಯ ಎಸ್ ಅಟ್ಟೂರ ಸರ್ವಾನುಮತದಿಂದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಲೀಲಾ ಹಿರೇಮಠ, ನಿರ್ಮಲಾ ವಿಲಾಸ, ಪ್ರಧಾನ ಕಾರ್ಯದರ್ಶಿಯಾಗಿ, ಶೃತಿ ಪಾಟೀಲ, ಸಹ ಕಾರ್ಯದರ್ಶಿಯಾಗಿ ಅಂಬಿಕಾ ಜಿ ಪೂಜಾರಿ,ಖಜಾಂಚಿಯಾಗಿ ಉಮಾದೇವಿ ಬಿ.ಮದಗುಣಕಿ, ಸಂಘಟನಾ ಕಾರ್ಯದರ್ಶಿಗಳಾಗಿ ಸಂತೋಷ ದೊಡ್ಡಮನಿ, ಪೂಜಾ ವಿಠಲ ಕುಂಬಾರ, ಕಾನೂನು ಸಲಹೆಗಾರರಾಗಿ, ನ್ಯಾಯವಾದಿ ಭೀಮಾಶಂಕರ ಮಾಡ್ಯಾಳ, ಆಯ್ಕೆಯಾದರು.

ಸಂಚಾಲನ ಸಮಿತಿಯ ಸದಸ್ಯರಾಗಿ ಶಾರದಾ ವಿಶ್ವಕರ್ಮ ಯಾದಗಿರ, ಊರ್ಮಿಳ ಗಾಯಕ್ವಾಡ ಬೀದರ್, ವಾಣಿಶ್ರೀ ರೆಡ್ಡಿ,ಸದಸ್ಯರಾಗಿ, ರಾಗಿದ್ದಾರೆ.ಸಭೆಯಲ್ಲಿ, ಹೋರಾಟಗಾರರಾದ ಪ್ರಭುದೇವ ಯಳಸಂಗಿ,ಅಸ್ಲಾಂ ಶೇಖ್, ವಿಠಲ ಕುಂಬಾರ ಸೇರಿದಂತೆ, ಹಲವಾರು ಜನ ಭಾಗವಹಿಸಿದ್ದರು. ಅಭ್ಯರ್ಥಿಗಳು  ರಾಜ್ಯದ ಸುಮಾರು 2500 ಅಭ್ಯರ್ಥಿಗಳಲಿೢ, ಕಲ್ಯಾಣ ಕರ್ನಾಟಕ ವಿಭಾಗದ 189 ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ.

ನೇಮಕಾತಿ ವಿಷಯದ ಬಗ್ಗೆ ಸರ್ವೋಚ್ಚ ನ್ಯಾಯಾಲಯವು ಹಲವಾರೂ ಪ್ರಕರಣಗಳಲ್ಲಿ ಮದುವೆಯಾದ ಮಹಿಳೆಯರು ತಾಯಿ ತಂದೆಯ ಆದಾಯ ಹಾಗೂ ಜಾತಿ ಪ್ರಮಾಣ ಪತ್ರ ನೀಡಿದರೆ ಸಾಕು ಗಂಡನ ಆದಾಯ ಪ್ರಮಾಣ ಪತ್ರ ಹಾಗೂ ಜಾತಿ ಪ್ರಮಾಣ ಪತ್ರ ನೀಡುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟವಾಗಿ ತೀರ್ಪು ನೀಡಿದೆ. ಸರಕಾರ ಮಾಡಿದ ತಪ್ಪನ್ನುಸರಿಪಡಿಸಿಕೊ೦ಡು ಆಹ೯ತೆಯಿರುವ ಅಭ್ಯರ್ಥಿಗಳಿಗೆ ಸರಕಾರ ನೇಮಕಾತಿ ಮಾಡಿಕೊಳ್ಳಬೇಕು ಎಂದು ಸರ್ವಾನುಮತದಿಂದ ನಿರ್ಣಯಿಸಲಾಯಿತು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago