ಬಿಸಿ ಬಿಸಿ ಸುದ್ದಿ

ಮೆದುಳು ಜ್ವರ ತಡೆಗಟ್ಟುವ ನಿಟ್ಟಿನಲ್ಲಿ ಪಾಲಕರು ಪೋಷಕರು ಮಕ್ಕಳಿಗೆ ಲಸಿಕೆ ಹಾಕಿ

ಕಲಬುರಗಿ: ಮೆದುಳು ಜ್ವರ ತಡೆಗಟ್ಟುವ ನಿಟ್ಟಿನಲ್ಲಿ ಪಾಲಕ-ಪೋಷಕರು ತಮ್ಮ ಮಕ್ಕಳಿಗೆ ಲಸಿಕೆಯನ್ನು ತಪ್ಪದೇ ಹಾಕಿಸಬೇಕೆಂದು ಎಂದು ಜಿ.ಪಂ.ಮುಖ್ಯಕಾರ್ಯನಿರ್ವಾಣಾಧಿಕಾರಿ ಡಾ.ಗಿರೀಶ ಡಿ ಬದೋಲೆ ಅವರು ತಿಳಿಸಿದರು.

ಸೋಮವಾರದಂದು ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ಜೀವನ ಪ್ರಕಾಶ ಶಾಲೆಯಲ್ಲಿ ಮೆದುಳು ಜ್ವರಕ್ಕೆ ಜಪಾನೀಸ್ ಎನ್ಸಿಫಲಾಟಿಸ್‍ಲಸಿಕೆ ಅಭಿಯಾನ 1 ರಿಂದ 15 ವರ್ಷದ ಮಕ್ಕಳಿಗೆ ಲಸಿಕೆ ಚಾಲನೆ ನೀಡಿ ಮಾತನಾಡಿದರು.

ಇದೇ ಡಿ. 5 ರಿಂದ 25ರ ವರೆಗೆ ಕಲಬುರಗಿ ಜಿಲ್ಲೆಯಾದ್ಯಂತ 1 ರಿಂದ 15 ವರ್ಷದೊಳಗಿನ ಮಕ್ಕಳಿಗೆ ಉಚಿತವಾಗಿ ಜಪಾನೀಸ್ ಎನ್ಸಿಫಲಾಟಿಸ್ ಲಸಿಕೆ ನೀಡಲು ಅಭಿಯಾನ ಹಮ್ಮಿಕೊಂಡಿದೆ.ಲಸಿಕೆ ಸುರಕ್ಷಿತವಾಗಿದ್ದು, ಪಾಲಕ-ಪೋಷಕರಲ್ಲಿ ಯಾವುದೇ ಭಯ, ಗೊಂದಲ ಬೇಡ ಇದರಿಂದ ಯಾವುದೇ ಅಡ್ಡ್ ಪರಿಣಾಮ ಆಗುವುದಿಲ್ಲ ಎಂದು ಹೇಳಿದರು.

ಇದು ಒಂದು ಅಂಟುರೋಗವಾಗಿದ್ದು, ಯಾರು ಇದರ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು ತಮ್ಮ ಸಮೀಪದ ಸರ್ಕಾರಿ ಆಸ್ಪತ್ರೆಗಳಿಗೆ ಹೋಗಿ ಮಕ್ಕಳಿಗೆ ಲಸಿಕೆ ತಪ್ಪದೇ ಹಾಕಿಸಬೇಕೆಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕ ಡಾ.ಶಂಕ್ರಪ್ಪ ಮೈಲಾರಿ ಉದ್ಫಾಟಿಸಿ ಮಾತನಾಡಿ, ಇದು ಒಂದು ಮಾರಕ ರೋಗವಾಗಿದ್ದು, ಕೂಲೆಕ್ಸ್ ಸೂಳ್ಳೆಗಳ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಯಾರು ಮಕ್ಕಳು ಇದರ ಬಗ್ಗೆ ನಿರ್ಲಕ್ಷ್ಯವಹಿಸಬಾರದು ಲಸಿಕೆಯನ್ನು ಪ್ರತಿಯೊಬ್ಬರು ಹಾಕಿಕೊಳ್ಳಬೇಕು. ಸರ್ಕಾರಿ ಆಸ್ಪತ್ರೆ, ತಾಲೂಕುಮಟ್ಟದಲ್ಲಿ ಸಮುದಾಯ ಕೇಂದ್ರಗಳಲ್ಲಿ ಶಾಲೆಗಳಲ್ಲಿ ಲಸಿಕೆಯನ್ನು ತಪ್ಪದೇ ಹಾಕಿಸಿಕೊಳ್ಳಬೇಕೆಂದು ಹೇಳಿದರು.

ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಮಾಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಾದ್ಯಂತ ಲಸಿಕೆಯನ್ನು ಹಾಕಬೇಕು. ಇದು ಒಂದು ಅಂಟುರೋಗವಾಗಿದ್ದು, ಇದರ ಬಗ್ಗೆ ಮಕ್ಕಳು ಮತ್ತು ಪಾಲಕರು ಭಯಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಡಿಸೆಂಬರ್ 5 ರಿಂದ 25 ರವರೆಗೆ ಮೂರು ವಾರಗಳ ಶಾಲಾ ಮಕ್ಕಳಿಗೆ ಲಸಿಕಾ ಕೇಂದ್ರಗಳನ್ನು ಆಯೋಜಿಸಿದೆ ಜೆ.ಇ. ಲಸಿಕೆಯನ್ನು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ಅಳವಡಿಸಿ 9 ರಿಂದ 12 ತಿಂಗಳಲ್ಲಿ ಮೊದಲ ಡೋಸ್ ಹಾಗೂ 16-24 ತಿಂಗಳಿಗೆ ಎರಡನೇ ಡೋಸ ಲಸಿಕೆ ನೀಡಲಾಗುವುದು ಎಂದರು.

ಆರ್.ಸಿ.ಎಚ್. ಅಧಿಕಾರಿ ಪ್ರಭುಲಿಂಗ ಮಾನಕರ ಅವರು ಸ್ವಾಗತಿಸಿ ಮಾತನಾಡಿ, ಇತ್ತೀಚೆಗೆ ಗುಜರಾತ್, ಮಹಾರಾಷ್ಟ್ರದಲ್ಲಿ ಮೆದುಳು ಜ್ವರ ಕಂಡಬಂದ ಹಿನ್ನೆಲೆಯಲ್ಲಿ ಕರ್ನಾಟಕದ ಆಯ್ದ 10 ಜಿಲ್ಲೆಗಳಾದ ಕಲಬುರಗಿ, ಬಾಗಲಕೋಟೆ, ಗದಗ, ಹಾವೇರಿ, ಉಡುಪಿ, ತುಮಕೂರು, ಹಾಸನ, ದಕ್ಷಿಣ ಕನ್ನಡ, ರಾಮನಗರ ಹಾಗೂ ಯಾದಗಿರಿಗಳಲ್ಲಿ ತೀವ್ರ ನಿಗಾ ವಹಿಸಿ ಅಭಿಯಾನ ಹಮ್ಮಿಕೊಂಡಿದೆ ಎಂದರು.

ಕಲಬುರಗಿ ಜಿಲ್ಲೆಯಲ್ಲಿ 1-6 ವರ್ಷದ 1,88,927 ಮಕ್ಕಳು, 6-15 ವರ್ಷದ 5,28,745 ಮಕ್ಕಳು, ಶಾಲೆಯಿಂದ ಹೊರಗುಳಿದ 6,022 ಮಕ್ಕಳು ಸೇರಿ ಒಟ್ಟು 7,20,188 ಮಕ್ಕಳಿಗೆ ಲಸಿಕಾಕರಣದ ಗುರಿ ಹೊಂದಲಾಗಿದೆ. 441 ಅಪಾಯಕಾರಿ ಪ್ರದೇಶಗಳನ್ನು ಗುರುತಿಸಲಾಗಿದೆ. ಇದಕ್ಕಾಗಿ 590 ಲಸಿಕಾ ತಂಡ ರಚಿಸಲಾಗಿದ್ದು, 5,523 ಸೆಷನ್‍ಗಳಲ್ಲಿ ಲಸಿಕೆ ನೀಡಲಿದ್ದಾರೆ. 3,033 ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಬಳಸಿಕೊಳ್ಳಲಾಗುತ್ತಿದೆ. ಲಸಿಕಾ ತಂಡಗಳ ಮೇಲೆ ಮೇಲ್ವಿಚಾರಕರಾಗಿ 148 ಜನ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಜೀವನ ಪ್ರಕಾಶ ಶಾಲೆಯ ಮಕ್ಕಳಾದ ಗುರುದೇವಿ, ಮಲ್ಲಿಕಾರ್ಜುನ ಅವರಿಗೆ ಲಸಿಕೆಯನ್ನು ಹಾಕಲಾಯಿತು. ಇದೇ ಸಂದರ್ಭದಲ್ಲಿ ಪೋಸ್ಟರ್‍ಗಳನ್ನು ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ಜನ್ ಡಾ. ಅಂಬಾರಾಯ ರುದ್ರವಾಡಿ, ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಚಂದ್ರಕಾಂತ ನರಿಬೋಳ, ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ವಿವೇಕಾನಂದ ರೆಡ್ಡಿ, ಡಿ.ಎಲ್.ಓ. ಡಾ. ರಾಜುಕುಮಾರ ಕುಲಕರ್ಣಿ, ಡಾ.ವಿವೇಕಾನಂದ ಟೆಂಗಳಿ, ಡಾ.ಶರಣಬಸಪ್ಪ ಖ್ಯಾತನಾಳ, ಡಾ. ಮಾರುತಿ ಕಾಂಬಳೆ, ಬಿ.ಇ.ಓ. ಶಂಕ್ರಮ್ಮ, ಪ್ರೌಢಶಾಲೆಯ ಪ್ರಾರ್ಚಾಯರಾದ ಅಮರೇಶ್ವರ ಶೇಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸೋಮು ರಾಠೋಡ ಸೇರಿದಂತೆ ಆಪ್ತ ಸಮಾಲೋಚಕರಾದ ಕಂಬಳಿ ಮಠ ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದಿಗಳು ಹಾಗೂ ಶಾಲೆಯ ಮಕ್ಕಳು ಭಾಗವಹಿಸಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

4 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

4 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

22 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago