ಕಲಬುರಗಿ: ಇಲ್ಲಿನ ಕಥೆಗಾರ ಹಾಘೂ ನಾಟಕಕಾರ ಮಹಾಂತೇಶ ನವಲಕಲ್ ಅವರ ಪಂಚಾವರಂ ಕೃತಿಗೆ ಶಿವಮೊಗ್ಗದ ಕರ್ನಾಟಕ ಸಂಘ ಕೊಡಮಾಡುವ ಕೆ.ವಿ. ಸುಬ್ಬಣ್ಣ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ಈಚೆಗೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಾಟಕಕಾರ ಮಹಾಂತೇಶ ನವಲಕಲ್ ಅವರಿಗೆ 10, 000 ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು. ಖ್ಯಾತ ಕವಯತ್ರಿ ಸವಿತಾ ನಾಗಭೂಷಣ್ ಮಾತನಾಡಿ, ಕಾವ್ಯ, ಕಥೆ, ನಾಟಕ, ಕಟ್ಟುವಾಗಿನ ಸಂದರ್ಭದಲ್ಲಿ ಲೇಖಕ ಎದುರಿಸುವ ಬಿಕ್ಕಟ್ಟಿನ ಬಗ್ಗೆ ಸವಿಸ್ತಾರವಾಗಿ ಹೇಳಿದರು.
ಪ್ರಶಸ್ತಿ ವಿತರಿಸುವ ಮುಂಚೆ ಲೇಖಕರೊಂದಿಗೆ ಸಂವಾದ ಏರ್ಪಡಿಸಲಾಗಿತ್ತು. ಡಾ. ಲವ ಅವರು ಪಂಚಾವರಂ ನಾಟಕದ ಘನತೆಯ ಬಗ್ಗೆ ಹೇಳಿದರು. ನಾಟಕಕಾರ ಮಹಾಂತೇಶ್ ನವಲಕಲ್ ಮಾತನಾಡಿ ಈ ನಾಟಕ ಹೆಚ್ಚು ಶ್ರಮ ಕೇಳಿದೆ. ಬಯಲಾಟದ ಸ್ವರೂಪ ನನಗೆ ಸಹಾಯ ಮಾಡಿತು ಎಂದು ಹೇಳಿದರು.
ಕರ್ನಾಟಕ ಸಂಘದ ಅಧ್ಯಕ್ಷ ಸುಂದರರಾಜನ್ ಮಾತನಾಡಿದರು. ಸಂಘದ ಕಾರ್ಯದರ್ಶಿ ಆಶಾಲತಾ ಪ್ರಾಸ್ತಾವಿಕ ಮಾತನಾಡಿದರು. ಚನ್ನೇಶ ಹೊನ್ನಾಳಿ ನಿರೂಪಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…