ಹೈದರಾಬಾದ್ ಕರ್ನಾಟಕ

ಕಸಾಪ: ಮಹಾಪರಿನಿರ್ವಾಣ ದಿನ |`ಮೌಢ್ಯ ಮೀರಿದ ನಡೆ ನಮ್ಮದಾಗಲಿ’ ವಿಶೇಷ ಕಾರ್ಯಕ್ರಮ

ಕಲಬುರಗಿ: ಸಮಾಜಕ್ಕೆ ಮಾನವೀಯ ಮೌಲ್ಯಗಳ:ನ್ನು ಕಾಲಕಾಲಕ್ಕೆ ಬಿತ್ತರಿಸಿ, ಮೂಢನಂಬಿಕೆ, ಕಂದಾಚಾರಗಳಿಮದ ಕಂಗೆಟ್ಟ ಜನತೆಗೆ ಪ್ರೀತಿ-ಸ್ನೇಹಗಳ ಸಿಂಚನ ಮಾಡಿದವರು ಬುದ್ಧ, ಬಸವ ಹಾಗೂ ಡಾ. ಅಂಬೇಡ್ಕರ್ ಅವರಾಗಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಸುವರ್ಣ ಸಭಾ ಭವನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದಂಗವಾಗಿ `ಮೌಢ್ಯ ಮೀರಿದ ನಡೆ ನಮ್ಮದಾಗಲಿ’ ವಿಶೇಷ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಮಾತನಾಡಿದ ಅವರು, ಡಾ. ಬಿ.ಆರ್.ಅಂಬೇಡ್ಕರ್ ಅವರು ಕೇವಲ ದಲಿತರ ಪರ ಮಾತ್ರವಲ್ಲ, ಬದಲಾಗಿ ಎಲ್ಲ ಸಮಾಜ ಬಾಂಧವರ ಶ್ರೇಯೋಭಿವೃದ್ಧಿಗೆ ಆಲೋಚನೆ ಮಾಡಿದ ಶ್ರೇಷ್ಠ ಸಮಾಜ ಚಿಂತಕ. ಹಾಗಾಗಿ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಆಳವಡಿಸಿಕೊಳ್ಳಬೇಕಾಗಿದೆ ಎಂದು ಮಾರ್ಮಿಕವಾಗಿ ಹೇಳಿದರು.

ನ್ಯಾಯವಾದಿಗಳಾದ ಮಲ್ಲಿಕಾರ್ಜುನ ಕೋಟೆ ಹಾಗೂ ವಿನೋದ ಜೇನವೇರಿ ಮಾತನಾಡಿ, ಸಾಮಾಜಿಕ ನ್ಯಾಯ, ಸಮ ಸಮಾಜದ ಪ್ರತಿಪಾದನೆಯ ಮೂಲಕ ಎಲ್ಲರಿಗೂ ಸಮಾನವಾದ ಹಕ್ಕುಗಳನ್ನು ಕಲ್ಪಿಸಲು ಶ್ರಮಿಸಿದಜಗತ್ತಿನ ಶ್ರೇಷ್ಠ ಸಾಮಾಜಿಕ ಚಿಂತಕ ಡಾ. ಅಂಬೇಡ್ಕರ್ ಅವರು. ಬಡತನದಲ್ಲಿ ಹುಟ್ಟಿ ಅನೇಕ ಶೋಷಣೆ, ದೌರ್ಜನ್ಯಗಳನ್ನು ಅನುಭವಿಸಿ ಶೋಷಿತರ ಪರವಾಗಿ ದನಿ ಎತ್ತಿದ ಮಹಾನ್ ನಾಯಕರಾದವರು ಡಾ.ಅಂಬೇಡ್ಕರ್ ಅವರು ಎಂದು ಹೇಳಿದರು.

ನಿವೃತ್ತ ಇಂಜಿನೀಯರ್ ಹಣಮಂತರೆಡ್ಡಿ, ಜಿಲ್ಲಾ ಕಸಾಪ ದ ರವೀಂದ್ರಕುಮಾರ ಭಂಟನಳ್ಳಿ, ಶರಣರಾಜ ಛಪ್ಪರಬಂದಿ, ರಾಜೇಂದ್ರ ಮಾಡಬೂಳ, ಮಂದಾಕಿನಿ ಪೂಜಾರಿ, ಪದ್ಮಾವತಿ ನಾಯಕ, ಸಂತೋಷ ಕುಡಳ್ಳಿ ಕಾಳಗಿ, ಗಣೇಶ ಚಿನ್ನಾಕಾರ, ಸಿದ್ಧಾರಾಮ ಹಂಚನಾಳ, ಅಂಬಾರಾಯ ಬಿರಾದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

7 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

17 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

17 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

17 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago