ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರಿಗೆ ಶಾಸಕ ಪ್ರಿಯಾಂಕ್ ಖರ್ಗೆ ಆಪ್ತರಿಂದ ಕೊಲೆ ಸಂಚು ರೂಪಿಸಿರುವುದರಿಂದ ಈ ಪ್ರಕರಣವನ್ನು ಸಿಐಡಿ ಅಥವಾ ಸಿಬಿಐಗೆ ವಹಿಸಬೇಕು ಹಾಗೂ ಸರ್ಕಾರ ಅವರಿಗೆ ಸೂಕ್ತ ರಕ್ಷಣೆ ಕಲ್ಪಿಸುವಂತೆ ಆಗ್ರಹಿಸಿ ಮಣಿಕಂಠ ರಾಠೋಡ್ ಗೆಳೆಯರ ಬಳಗದಿಂದ ಮಂಗಳವಾರ ನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿದ ಮಣಿಕಂಠ ರಾಠೋಡ್ ಬೆಂಬಲಿಗರು ಕೈಯಲ್ಲಿ ಫ್ಲೆಕ್ಸ್ ಹಿಡಿದು, ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಹರಿಹಾಯುತ್ತ ಜಿಲ್ಲಾಧಿಕಾರಿ ಕಚೇರಿವರೆಗೆ ಆಗಮಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯ ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ರಾಜು ಕಪನೂರ ವಿರುದ್ಧ ದಾಖಲಾಗಿರುವ ಅಕ್ರಮ ಪಿಸ್ತೂಲ್ ಜೊತೆ 30 ಗುಂಡು ಖರೀದಿಸಿದ ಪ್ರಕರಣವು ಶಾಸಕ ಪ್ರಿಯಾಂಕ್ ಖರ್ಗೆ ಕುಮ್ಮಕ್ಕಿನಿಂದಲೇ ನಡೆದಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಹೀಗಾಗಿ ಪ್ರಿಯಾಂಕ್ ಖರ್ಗೆಯವರನ್ನು ಸಹ ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು, ಮಣಿಕಂಠ ರಾಠೋಡ್ ಅವರಿಗೆ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು. ಸಹಸ್ರಾರು ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…