ಕಲಬುರಗಿ: ರಾಮನಗರ ಜಿಲ್ಲೆಯ ಬಿಡದಿಯ ಮೆ. ಟೋಯೋಟೊ ಕೀರ್ಲೋಸ್ಕರ್ ಮೋಟಾರ್ಸ್ ಪ್ರೈ ಲಿಮಿಟೆಡ್ದಲ್ಲಿ ಐ.ಟಿ.ಐ ವೃತ್ತಿಯಲ್ಲಿ ಫಿಟ್ಟರ್, ಇಲೆಕ್ಟ್ರಿಷಿಯನ್ ಎಂ.ಎಂ.ವ್ಹಿ, ಎಂ.ಡಿ, ಟರ್ನರ್, ವೆಲ್ಡರ್ ಮತ್ತು ಟೂಲ್ ಆಂಡ ಡೈ ಮೇಕರ್ ಟ್ರೇಡ್ಗಳಲ್ಲಿ ಪಾಸಾದ ಹಾಗೂ ಪೂರಕ ಪರೀಕ್ಷೆಗೆ ಹಾಜರಾಗಿರುವ ವಯೋಮಿತಿ 18 ರಿಂದ 25 ವರ್ಷದೊಳಗಿನ ತರಬೇತಿದಾರರಿಗೆ ಇದೇ ಡಿಸೆಂಬರ್ 8 ರಂದು ಬೆಳಿಗ್ಗೆ 9 ಗಂಟೆಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ)ಯಲ್ಲಿ ಕ್ಯಾಂಪಸ್ ಸಂದರ್ಶನವನ್ನು ಏರ್ಪಡಿಸಲಾಗಿದೆ ಎಂದು ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಭಾವಚಿತ್ರ-2, ಆಧಾರ ಕಾರ್ಡ್, ಹಾಗೂ ಇತರೆ ದಾಖಲಾತಿಗಳೊಂದಿಗೆ ಕಲಬುರಗಿ ಎಂ.ಎಸ್.ಕೆ.ಮಿಲ್ ರಸ್ತೆಯಲ್ಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ) ಇಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಸೂಚನಾ ಫಲಕವನ್ನು ಹಾಗೂ ಮೊಬೈಲ್ ಸಂಖ್ಯೆ 7259272146 ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…