ಕೊಪ್ಪಳ: ನಗರದ ಪದಕಿ ಲೇಔಟಿನ ಸಿರಿಗನ್ನಡ ವೇದಿಕೆಯ ಕಾರ್ಯಾಲಯದಲ್ಲಿ ಜರುಗಿದ ಸಭೆಯಲ್ಲಿ ಸರ್ವಾನುಮತದಿಂದ ಸಾಂಸ್ಕೃತಿಕ ರಾಯಭಾರಿ ಮಹೇಶಬಾಬು ಸುರ್ವೆ ರವರನ್ನು ಪ್ರಥಮ ಬಾರಿಗೆ ಜರುಗುವ ಕೊಪ್ಪಳ ಜಿಲ್ಲಾ ಸಿರಿಗನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆಯ ಕಾರ್ಯಕಾರಿ ಸಭೆಯಲ್ಲಿ ಚರ್ಚಿಸಿ ಡಾ. ಮಹಾತೇಂಶ ಮಲ್ಲನಗೌಡರ್ ಸುವೆ೯ಯವರ ಹೆಸರು ಸೂಚಿಸಿದರು. ನಾಗರಾಜ ಅಂಗಡಿ ಅನೂಮೊದಿಸಿದರು. ಸಭೆಯಲ್ಲಿ ಸರ್ವ ಸದಸ್ಯರು ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದರು.
ಸಿರಿಗನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕರಾದ ಮಹೇಶಬಾಬು ಸುರ್ವೆರವರ ಅಧ್ಯಕ್ಷತೆಯಲ್ಲಿ ಇದೇ ಅಗಸ್ಟ 25 ರಂದು ಕೊಪ್ಪಳದ ಸಾಹಿತ್ಯ ಭವನದಲ್ಲಿ ಸಾಹಿತ್ಯ, ಸಾಂಸ್ಕೃತಿಕ, ಜಾನಪದ ವೈಶಿಷ್ಠೆತೆಗಳು ಜರುಗಲಿವೆ. ಜೊತೆಗೆ ಉಪನ್ಯಾಸ, ಲೇಖರ ಕೃತಿಗಳಿಗೆ ಸಾಹಿತ್ಯ ಪ್ರಶಸ್ತಿ, ರಂಗ ಸನ್ಮಾನ, ಸಿರಿಗನ್ನಡ ಕವಿಗೊಷ್ಠಿ, ಪ್ರತಿಭಾ ಪುರಸ್ಕಾರ, ವಸ್ತು ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಧಾನ ಕಾರ್ಯದರ್ಶಿ ಮಂಜುನಾಥ ಚಿತ್ರಗಾರ ತಿಳಿಸಿದ್ದಾರೆ.
ಸಭೆಯ ಅಧ್ಯಕ್ಷತೆಯನ್ನು ಜಿ.ಎಸ್.ಗೋನಾಳರವರು ವಹಿಸಿದ್ದರು. ಸಭೆಯಲ್ಲಿ ಶ್ರೀನಿವಾಸ ಚಿತ್ರಗಾರ, ಉಮೇಶ ಪೂಜಾರ, ಮಹೇಶ ಮನ್ನಾಪುರು. ಪಿ.ಬಿ.ಪಾಟೀಲ್, ವೈ.ಬಿ.ಜೂಡಿ, ವಿದ್ಯಾಧರ ಮೇಘರಾಜ, ಮಹ್ಮದ ಪೀರಸಾಬ, ಶಾಂತಪ್ಪ ಪಟ್ಟಣ್ಣಶಟ್ಟರ್, ಜಗದೀಶ್, ಪಕ್ಕೀರಪ್ಪ ಗೋಟೂರು ಸೇರಿದಂತೆ ಇತರರು ಇದ್ದರು. ಶಿಲ್ಪಾಮ್ಯಾಗೇರಿ ಸ್ವಾಗತಿಸಿ ಹಾಗೂ ವಂದಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…