ವಿವಿಧ ಬೇಡಿಕೆಗಳ ಒತ್ತಾಯಿಸಿ ಗ್ರಾಪಂ ಎದುರು ಧರಣಿ

0
33

ಶಹಾಬಾದ: ತಾಲೂಕಿನ ಹೊನಗುಂಟಾ ಗ್ರಾಪಂಯಲ್ಲಿ ಜಲಜೀವನ ಮಿಷನ್ ಕಾಮಗಾರಿ ಅವೈಜ್ಞಾನಿಕ ಮತ್ತು ಕಳಪೆ ಕಾಮಗಾರಿ ನಡೆಸಿದ ಗುತ್ತಿಗೆದಾರ ಹಾಗೂ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕೈಗೊಳ್ಳಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಬುಧವಾರ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕಾಧ್ಯಕ್ಷ ರಾಯಪ್ಪ ಹುರಮುಂಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಗ್ರಾಮದಲ್ಲಿ ಜಲಜೀವನ ಮಿಷನ್ ಕಾಮಗಾರಿ ಅವೈಜ್ಞಾನಿಕ ಮತ್ತು ಕಳಪೆ ಕಾಮಗಾರಿ ನಡೆಇದೆ.ಈ ಕಾಮಗಾರಿಯಲ್ಲಿ ಗುತ್ತಿಗೆದಾರ ಹಾಗೂ ಅಧಿಕಾರಿಗಳು ಸಂಪೂರ್ಣ ಶಾಮೀಲಾಗಿದ್ದಾರೆ. ಆದ್ದರಿಂದ ಗುತ್ತಿಗೆದಾರ ಹಾಗೂ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಕಾರ್ಯಪಾಲಕ ಅಭಿಯಂತರ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಕಲಬುರಗಿ ವಿಭಾಗದವರಿಗೆ ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರು ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ.ಅಲ್ಲದೇ ಕಾಂಗಾರಿ ಪೂರ್ಣಗೊಳಿಸದೇ ಇದ್ದರೂ ಬಿಲ್ ಪಾವತಿಯಾಗಿದೆ ಎಂದು ಆರೋಪಿಸಿದರು.

Contact Your\'s Advertisement; 9902492681

ಉದ್ಯೋಗ ಖಾತ್ರಿ ಸಮರ್ಪಖ ಜಾರಿಯಾಗಬೇಕು. ಗ್ರಾಮದಲ್ಲಿ ಮಹಿಳೆಯರಿಗೆ ಮಹಿಳಾ ಶೌಚಾಲಯ ನಿರ್ಮಿಸಿ ಒಡಬೇಕು. ಸುಮಾರು 5 ವರ್ಷಗಳಿಂದ ಪಾಳು ಬಿದ್ದಿರುವ ಸರಕಾರಿ ಆರೋಗ್ಯ ಉಪಕೇಂದ್ರವನ್ನು ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಾಣ ಮಾಡಬೇಕು. ಸ್ವಸಹಾಯ ಸಂಘ ಹಾಗೂ ಸ್ತ್ರೀ ಶಕ್ತಿ ಸಂಘಗಳಿಗೆ ಸ್ವಯಂ ಉದ್ಯೋಗಕ್ಕೆ ಬ್ಯಾಂಕ್‍ನಿಂದ ಆರ್ಥಿಕ ಸಹಾಯ ಒದಗಿಸಬೇಕು.ಉದ್ಯೋಗ ಖಾತ್ರಿ ಯೋಜನೆಯಲ್ಲಿನ ಜಾಬ ಕಾರ್ಡನಲ್ಲಿ ಆಗಿರುವ ತೊಂದರೆಯನ್ನು ಸರಿಪಡಿಸಬೇಕು ಹಾಗೂ ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಕೆಲಸ ನೀಡಬೇಕೆಂದು ಒತ್ತಾಯಿಸಿದರು.

ನಂತರ ಪ್ರತಿಭಟನೆಯ ಸ್ಥಳಕ್ಕೆ ಆಗಮಿಸಿದ ತಾಪಂ ಯೋಜನಾಧಿಕಾರಿ ಈರಣ್ಣ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಸಿಐಟಿಯು ತಾಲೂಕಾಧ್ಯಕ್ಷೆ ಶೇಖಮ್ಮ ಕುರಿ,ಕಾಳಗಿ ಕೆಪಿಆರ್‍ಎಸ್ ಕಾರ್ಯದರ್ಶಿ ದಿಲೀಪ ನಾಗೂರೆ,ಕಾಶಿನಾಥ ಬಂಡಿ, ಕಟ್ಟಡ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ನಾಗಪ್ಪ ರಾಯಚೂರಕರ್, ನಾಗಂಂ ಕೊಳಕೂರ, ಮಲ್ಲಮ್ಮ ಹಲಕರ್ಟಿ,ಮಲ್ಲಪ್ಪ ಬೆಣ್ಣೂರ್,ಮಹಾದೇವಿ ಕಿಂಡ್ರಿ, ಶರಣಮ್ಮ, ಉಮಾದೇವಿ ಹರಗಣ, ಸಿದ್ದಮ್ಮ ಬನ್ನೆಪ್ಪ, ಶರಣು ಬನ್ನೆಪ್ಪ ಸೇರಿದಂತೆ ಅನೇಕರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here