ಬಿಜೆಪಿ ಗೆಲುವು ಶಾಸಕ ಸುಭಾಷ್ ಆರ್ ಗುತ್ತೇದಾರ ಹರ್ಷ

0
11

ಆಳಂದ: ಎರಡು ರಾಜ್ಯಗಳ ವಿಧಾನ ಸಭೆ ಚುನಾವಣೆ ಹಾಗೂ ಇತರೆ ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮತದಾರರು ಅಭೂತಪೂರ್ವ ಬೆಂಬಲ ನೀಡಿರುವುದಕ್ಕೆ ಶಾಸಕ ಸುಭಾಷ್ ಆರ್ ಗುತ್ತೇದಾರ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರದ ಬಗ್ಗೆ ಜನ ಉತ್ತಮ ಅಭಿಪ್ರಾಯ ಹೊಂದಿದ್ದಾರೆ ಎನ್ನುವುದಕ್ಕೆ ಈ ಫಲಿತಾಂಶವೇ ಸಾಕ್ಷಿಯಾಗಿದೆ ಅಲ್ಲದೇ ಜನ ಯಾವತ್ತೂ ಅಭಿವೃದ್ಧಿ ರಾಜಕಾರಣವನ್ನು ಬಯಸುತ್ತಾರೆ ಎನ್ನುವುದು ಇದರಿಂದ ಸಾಬೀತಾಗಿದೆ ಎಂದು ಹೇಳಿದ್ದಾರೆ.

Contact Your\'s Advertisement; 9902492681

ಗುಜರಾತನಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ ಆದರೆ ಹಿಮಾಚಲ ಪ್ರದೇಶದಲ್ಲಿಯೂ ಮತಗಳಿಕೆ ಪ್ರಮಾಣ ಹೆಚ್ಚಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತದಾದ್ಯಂತ ಡಬಲ್ ಇಂಜಿನ್ ಸರ್ಕಾರಗಳು ಗೆಲ್ಲುತ್ತಿವೆ. ಮತದಾರರು ಪ್ರತಿಪಕ್ಷಗಳ ತುಷ್ಟೀಕರಣ ರಾಜಕಾರಣಕ್ಕಿಂತ ಬಿಜೆಪಿಯ ಅಭಿವೃದ್ಧಿ ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಇಟ್ಟಿರುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here