ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ಧೂಳಿಪಟ | ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಈಶ್ವರ ಖಂಡ್ರೆ

ಕಲಬುರಗಿ: ಕಲ್ಯಾಣ ಕರ್ನಾಟಕದ ಎಲ್ಲ 41 ಕ್ಷೇತ್ರಗಳಲ್ಲಿ ಬಿಜೆಪಿ ಧೂಳಿಪಟವಾಗಲಿದ್ದು ರಾಜ್ಯದಲ್ಲಿ ಈ ಸಲ ಕಾಂಗ್ರೆಸ್ ಪಕ್ಷ ಆಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ಪಕ್ಷ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದರು.

ಕಲಬುರಗಿಯ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ಬಿಜೆಪಿ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲವಾಗಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ.‌ ದಿನಬಳಕೆ‌ ವಸ್ತುಗಳ ಬೆಲೆ ಗಗನಕ್ಕೇರಿದೆ. ಜನಸಾಮಾನ್ಯರ ಸಂಕಟ ಹೇಳದಾಗಿದೆ. ನಿರುದ್ಯೋಗದ ಸಮಸ್ಯೆ ಕಾಡುತ್ತಿದೆ. ನಮ್ಮ ಅಧಿಕಾರಾವಧಿಯಲ್ಲಿ ಆರ್ಟಿಕಲ್ 371 (j) ಅಡಿಯಲ್ಲಿ ಹಲವಾರು ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಂಡಿದ್ದೆವು. ಆದರೆ ಬಿಜೆಪಿ ಸರ್ಕಾರ ನೇಮಕಾತಿ ಮಾಡಿಕೊಳ್ಳದೆ ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯವೆಸಗಿದೆ. ಈ ಎಲ್ಲ ಅಂಶಗಳ ಕುರಿತು ಜನಸಾಮಾನ್ಯರಿಗೆ ಮನವರಿಕೆ ಮಾಡಿಕೊಡಲು ಕಲ್ಯಾಣ ಕರ್ನಾಟಕ ಕ್ರಾಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಇದೇ ದಿನಾಂಕ 10 ರಂದು ಸನ್ಮಾನ ಮಾಡಲಿದ್ದೇವೆ. ಈ ಸಮಾರಂಭಕ್ಕೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಂದ ಕನಿಷ್ಠ 3 ಲಕ್ಷ ಜನರು ಭಾಗವಹಿಸಲಿದ್ದಾರೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು. ಅಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಬರಲಿರುವ ಖರ್ಗೆ ಅವರು ಗಂಜ್ ಪ್ರದೇಶದ ನಗರೇಶ್ವರ ಶಾಲೆಯಿಂದ ಜಗತ್ ಸರ್ಕಲ್ ವರೆಗೆ ಮೆರವಣಿಗೆಯಲ್ಲಿ ಬರಲಿದ್ದಾರೆ. ಆ ನಂತರ ಕಾರ್ಯಕ್ರಮ ನಡೆಯುವ ಎನ್ ವಿ ಶಾಲೆಯ ಆವರಣಕ್ಕೆ ಆಗಮಿಸಲಿದ್ದಾರೆ ಎಂದು‌ ವಿವರಿಸಿದರು.

ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ ಖಂಡ್ರೆ ಅವರು ಹಿಮಾಚಲದಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ಅಲ್ಲಿ ಮೋದಿಯ ಮ್ಯಾಜಿಕ್ ಕೆಲಸ ಮಾಡಿಲ್ಲ. ಆದರೆ ಗುಜರಾತ್ ನಲ್ಲಿ ಅಭ್ಯರ್ಥಿ ಗಳಿಗೆ ಹೆದರಿಸಿ ಬೆದರಿಸಿ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡು ಹೆಚ್ಚಿನ ಸೀಟುಗಳನ್ನು ಬಿಜೆಪಿ ಗೆದ್ದಿದೆ. ಆದರೆ ಗುಜರಾತ್ ಫಲಿತಾಂಶ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.

ಈ ಮಧ್ಯೆ ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ ಮೋದಿಯವರು ಕಾರ್ಪೋರೇಷನ್ ಚುನಾವಣೆ ಮಟ್ಟದಲ್ಲಿ ಪ್ರಚಾರ ಮಾಡಿದ್ದಾರೆ. ಸುಮಾರು 27 ವರ್ಷ ಅಧಿಕಾರದಲ್ಲಿದ್ದರೂ ಕೂಡಾ ಅಲ್ಲಿನ ಮುಖ್ಯಮಂತ್ರಿಗಳನ್ನು ಸೈಡಿಗೆ ಸರಿಸಿ ತಾವೇ ಪ್ರಚಾರ ಮಾಡಿದ್ದಾರೆ. ಪ್ರಧಾನಿ ತಮ್ಮ ಸ್ವಂತ ನೆಲದಲ್ಕಿ ಚುನಾವಣೆ ಗೆದ್ದಿರುವುದು ಮಹಾನ್ ಸಾಧನೆಯಲ್ಲ. ಅಲ್ಲಿ ತ್ರಿ ಎಂ ಗಳು ಕೆಲಸ ಮಾಡಿವೆ. ಮನಿ, ಮೋದಿ ಹಾಗೂ ಮಸಲ್ ಕೆಲಸ ಮಾಡಿದ್ದು ಸ್ವಾಭಾವಿಕವಾಗಿ ಮೋದಿ ಪ್ರಭಾವ ಕೆಲಸ ಮಾಡಿದೆ ಎಂದರು.

ಹಿಮಾಚಲದಲ್ಲಿ ನೀವು ಗೆದ್ದಿರುವುದರಿಂದ ಈಗ ಇವಿಎಂ ಮಷೀನ್ ಮೇಲೆ ನಂಬಿಕೆ ಬಂದಿದೆಯಾ ? ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಾಜಿ‌ ಸಚಿವ ಶರಣಪ್ರಕಾಶ್ ಪಾಟೀಲ ಉತ್ತರಿಸಿ ಕಾಂಗ್ರೆಸ್ ಒಂದು ಪಕ್ಷವಾಗಿ ಇವಿಎಂ ಬಗ್ಗೆ ತಕರಾರು ಎತ್ತಿಲ್ಲ ಆದರೆ ನಾಯಕರುಗಳು ವೈಯಕ್ತಿಕವಾಗಿ ಅಪಸ್ವರ ಎತ್ತಿರಬಹುದು. ಎಂದರು. ಹಿಮಾಚಲದಲ್ಲಿ ಬಿಜೆಪಿ ಸೋತಿರುವುದು ಹೇಗೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನೇ ಕೇಳಬೇಕು ಯಾಕೆಂದರೆ ಅದು ಅವರ ತವರು ರಾಜ್ಯ ಎಂದು ಕಿಚಾಯಿಸಿದರು.

ಸಚೇತಕರಾದ ಅಜಯ್ ಸಿಂಗ್, ಶಾಸಕರಾದ ಎಂ ವೈ ಪಾಟೀಲ, ಮಾಜಿ ಎಂ ಎಲ್ ಸಿಗಳಾದ ಶರಣಪ್ಪ ಮಟ್ಟೂರು, ಅಲ್ಲಮಪ್ರಭು ಪಾಟೀಲ, ಶರಣುಮೋದಿ, ಬಸರೆಡ್ಡಿ ಪಾಟೀಲ ಅನಪೂರ, ಶಿವಾನಂದ ಪಾಟೀಲ ಸೇರಿದಂತೆ ಮತ್ತಿತರಿದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

52 mins ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

1 hour ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

1 hour ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

1 hour ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

1 hour ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420