ಬೆಳಗಾವಿ: ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಸ್ಥಾಪಿಸಲಾಗಿರುವ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಪಠ್ಯಪುಸ್ತಕ ಕೊಡಿಸುವಂತೆ ಕೇಳಿದಳು.
ಒಂದು ಕ್ಷಣ ಆಶ್ಚರ್ಯಚಕಿತಗೊಂಡ ಮುಖ್ಯಮಂತ್ರಿಗಳು, ನಾಳೆ ಸಂಜೆಯೊಳಗೆ ಅಗತ್ಯ ಪಠ್ಯಪುಸ್ತಕಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.
ಹಿರಣ್ಯಕೇಶಿ ನದಿ ಪ್ರವಾಹದಿಂದ ನಿರಾಶ್ರಿತರಾಗಿರುವ ಸಂಕೇಶ್ವರ ಪಟ್ಟಣದ ರಾಮಚಿತ್ರ ಮಂದಿರದಲ್ಲಿ ಸ್ಥಾಪಿಸಿರುವ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಸಿ.ಎ. ಮೊದಲ ವರ್ಷದ ವಿದ್ಯಾರ್ಥಿನಿ ಸೀಮಾ ಇಂಗಳಿ ಪಠ್ಯಪುಸ್ತಕ ನೀರಿನಲ್ಲಿ ಹಾಳಾಗಿರುವುದರಿಂದ ಓದುವುದಕ್ಕೆ ತೊಂದರೆಯಾಗಿದೆ ಎಂದು ಅಹವಾಲು ಹೇಳಿಕೊಂಡಳು.