ಸುರಪುರ: ಇದೇ ರವಿವಾರ 11ನೇ ತಾರೀಖು ರೈತರಿಗೆ ಬಡ್ಡಿ ರಹಿತ ಸಾಲ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರ್ಗಿ ಯಾದಗಿರಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಡಾ:ಸುರೇಶ ಸಜ್ಜನ್ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ,ನಗರದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ರವಿವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತಿಮ್ಮಾಪುರ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಬಾದ್ಯಾಪುರ ಈ ಎರಡು ಸಂಘಗಳ ಪ್ರಾರಂಭೋತ್ಸವ,ರೈತರಿಗೆ ಬಡ್ಡಿ ರಹಿತ ಸಾಲ ವಿತರಣೆ,ಯಶಸ್ವಿನಿ ಯೋಜನೆಯ ನೊಂದಣಿ ಕಾರ್ಡ್ ವಿತರಣೆ,ಸ್ತ್ರೀ ಶಕ್ತಿ ಸಂಘಗಳ ಸದಸ್ಯತ್ವ ನೊಂದಣಿ ಗುರುತಿನ ಚೀಟಿ ವಿತರಣೆ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ಜ್ಯೋತಿ ಸಂಜೀವಿನಿ ಕಾರ್ಡ್ ವಿತರಣೆ,ಕರ್ನಾಟಕ ಸರ್ಕಾರದ ಸಹಕಾರ ರತ್ನ ಪ್ರಶಸ್ತಿ ಪುರಸ್ಕøತರಿಗೆ,ಹಿರಿಯ ಉದ್ಯಮಿಗಳಿಗೆ ಸಹಕಾರಿಗಳಿಗೆ ಸನ್ಮಾನ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಶಾಸಕ ನರಸಿಂಹ ನಾಯಕ (ರಾಜುಗೌಡ) ಉದ್ಘಾಟಿಸಲಿದ್ದು,ಕಲಬುರ್ಗಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಸೇಡಂ ಶಾಸಕರಾದ ರಾಜಕುಮಾರ ಪಾಟೀಲ ತೇಲ್ಕೂರ ರೈತರಿಗೆ ಸಾಲ ವಿತರಿಸುವರು.ಹಿರಿಯ ಉದ್ಯಮಿ ಹಾಗೂ ಸಮಾಜ ಸೇವಕ ಎಸ್.ಪಿ ದಯಾನಂದ ಅವರು ಯಶಸ್ವಿ ಯೋಜನೆಯ ಕಾರ್ಡ್ ವಿತರಿಸುವರು,ಎ.ಪಿ.ಎಂ.ಸಿ ವರ್ತಕರ ಸಂಘದ ಅಧ್ಯಕ್ಷ ಕಿಶೋರ ಚಂದ್ ಜೈನ್ ಜ್ಯೋತಿ ಸಂಜೀವಿನಿ ಕಾರ್ಡ್ ವಿತರಿಸುವರು,ಕಲಬುರ್ಗಿ ಯಾದಗಿರಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಶರಣಬಸಪ್ಪ ಅಷ್ಟಗಿ ಸ್ತ್ರೀಶಕ್ತಿ ಸಂಘಗಳ ಕಾರ್ಡ್ ವಿತರಿಸುವರು,ಸಹಕಾರಿ ಪಿತಾಮರ ಭಾವಚಿತ್ರಕ್ಕೆ ಗುರುನಾಥರೆಡ್ಡಿ ಹಳಿಸಗರ,ಅಪೇಕ್ಸ್ ಬ್ಯಾಂಕ್ ನಿರ್ದೇಶಕ ಶಿವಾನಂದ ಮಾನಕರ್ ಮಾಲಾರ್ಪಣೆ ಮಾಡಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಡಾ:ಸುರೇಶ ಸಜ್ಜನ್ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಬಾಪುಗೌಡ ಪಾಟೀಲ್,ಸಿದ್ರಾಮರಡ್ಡಿ ಪಾಟೀಲ್ ಕೋಳೂರು,ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಶರಣಬಸಪ್ಪ ಬೆಣ್ಣೂರ,ಡಿವೈಎಸ್ಪಿ ಮಂಜುನಾಥ ಟಿ,ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ,ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ರಾಮನಗೌಡ ಪಾಟೀಲ್,ನಗರಸಭೆ ಅಧ್ಯಕ್ಷೆ ಸುಜಾತಾ ವಿ ಜೇವರ್ಗಿ,ಜಿ.ಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯತ (ತಾತಾ),ಸಿದ್ದನಗೌಡ ಪಾಟೀಲ್ ಕೆಂಭಾವಿ,ಬಸನಗೌಡ ಯಡಿಯಾಪುರ, ಯಾದಗಿರಿ ತಾ.ಒ.ಹು.ಮಾ.ಸ.ಸಂಘದ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ,ರಿಕ್ರಿಯೇಷನ್ ಕ್ಲಬ್ ಅಧ್ಯಕ್ಷ ರಾಜಾ ಮುಕುಂದ ನಾಯಕ,ಹೆಚ್.ಸಿ ಪಾಟೀಲ್,ಕಿಷ್ಟಪ್ಪ ಸಾಹುಕಾರ ಹುಣಸಗಿ,ಬಸವರಾಜ ಸ್ಥಾವರಮಠ,ಮಲ್ಲಿಕಾರ್ಜುನ ಕಡೆಚೂರ,ವೆಂಕಟೇಶ ನಾಯಕ ಬೈರಿಮಡ್ಡಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ತಿಮ್ಮಾಪುರ ಕೃ.ಪ.ಸ.ಸಂಘದ ಉಪಾಧ್ಯಕ್ಷ ಮಲ್ಲಿಕಾರ್ಜುನ ಕಡೆಚೂರ,ಕೃ.ಪ.ಸ.ಸಂಘ ಬಾದ್ಯಾಪುರ ಅಧ್ಯಕ್ಷರಾದ ವೆಂಕಟೇಶ ನಾಯಕ ಬೈರಿಮಡ್ಡಿ ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…