ಕಲಬುರಗಿ: ಇಲ್ಲಿನ ಮಹಾಜನ ಫೌಂಡೇಶನ್ ಚಾರಿಟೇಬಲ್ ಮತ್ತು ವೆಲ್ ಫೇರ್ ಟ್ರಸ್ಟ್ ವತಿಯಿಂದ ಡಿ.11ರಂದು ಸಂಜೆ 4ಕ್ಕೆ ನೆಹರು ಗಂಜ್ ಸಮೀಪದ ಲಾಹೋಟಿ ಕಲ್ಯಾಣ ಮಂಟಪದಲ್ಲಿ ಸುಮಾರು 1600 ಮಹಾನಗರ ಪೌರ ಕಾರ್ಮಿಕರಿಗೆ ಗೌರವ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಸಮಾರಂಭದ ಸ್ವಾಗತ ಸಮಿತಿ ಅಧ್ಯಕ್ಷ ವಿಜಯಕುಮಾರ ಹಲಕರ್ಟಿ ತಿಳಿಸಿದರು.
ಕಲಬುರಗಿಯ ಮಹಾನಗರ ಪಾಲೆಯಲ್ಲಿ ಕೆಲಸ ಮಾಡುವ ಪೌರ ಕಾರ್ಮಿಕರಿಗೆ ಗೌರವ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಈಗಾಗಲೇ ಎಲ್ಲ ಪೌರ ಕಾರ್ಮಿಕರ ಹೆಸರುಗಳನ್ನು ಪಟ್ಟಿ ಮಾಡಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸುಲಲ ಮಠದ ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮೀಜಿ, ಮಾತೋಶ್ರೀ ಡಾ.ದಾಕ್ಷಾಯಿಣಿ ಎಸ್.ಅಪ್ಪ, ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ವೀರಭದ್ರ ಶಿವಾಚಾರ್ಯರು, ಅಭಿನವ ಸಿದ್ದಲಿಂಗ ಶಿವಾಚಾರ್ಯರು, ಡಾ.ರಾಜಶೇಖರ ಶಿವಾಚಾರ್ಯರು, ಗುರುಪಾದಲಿಂಗ ಮಹಾಸ್ವಾಮೀಜಿ, ಡಾ.ಅಪ್ಪಾರಾವ್ ದೇವಿಮುತ್ತ್ಯಾ, ಮಹ್ಮದ್ ಯಾದುಲ್ಲಾ ಹುಸೇನಿ ಅವರು ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.
ಮಾಜಿ ಸಚಿವ ಎಸ್.ಕೆ.ಕಾಂತಾ ಅವರು ಉದ್ಘಾಟಕರಾಗಿ ಪಾಲ್ಗೊಳ್ಳಲಿದ್ದು, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಟ್ರಸ್ಟಿ ಶಿವಕಾಂತ ಮಹಾಜನ್, ಮಾಜಿ ಶಾಸಕ ವೈ.ಸಂಪಂಗಿ, ಶಾಸಕ ಸುಭಾಷ ಗುತ್ತೇದಾರ್, ಪಾಲಿಕೆ ಆಯುಕ್ತ ಭುವನೇಶ ದೇವದಾಸ ಪಾಟೀಲ್, ಉಪ ಕಾರ್ಮಿಕ ಆಯುಕ್ತ ಡಿ.ಜಿ.ನಾಗೇಶ, ಕರ್ನಾಟಕ ದ್ವಿದಳ ದಾನ್ಯ ಅಧ್ಯಕ್ಷ ವಿದ್ಯಾಸಾಗರ ಶಾಬಾದಿ, ಸರಕಾರಿ ನೌಕರರ ಸಂಘದ ಅಧ್ಯಕ್ಷ ರಾಜು ಲೇಂಗಟಿ, ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಅರುಣಕುಮಾರ ಪಾಟೀಲ್, ಕಾರ್ಯದರ್ಶಿ ಡಾ.ಶ್ರೀಶೈಲ ಘೂಳಿ, ಅಖಿಲ ಭಾರತ ವೀರಶೈವ ಮಹಾಸಭೆಯ ಮಹಿಳಾ ಜಿಲ್ಲಾಧ್ಯಕ್ಷೆ ಡಾ.ಸುಧಾ ಹಾಲಕಾಯಿ ಸೇರಿದಂತೆ ಅನೇಕರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.
ಕಲ್ಯಾಣರಾವ್ ಪಾಟೀಲ್ ಮಳಖೇಡ, ಪ್ರವೀಣ ತೆಗನೂರ, ಅಮೃತ ಸಾಗರ, ಶಿವಾನಂದ ಮಠಪತಿ, ಈಶ್ವರ ಗುಂಡಗುರ್ತಿ, ಶೋಭಾ ಘಂಟಿ ಇತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…