ಕಲಬುರಗಿ: ಎಐಸಿಸಿ ಅಧ್ಯಕ್ಷರಾಗಿ ಮೊದಲ ಬಾರಿಗೆ ತಮ್ಮ ತವರು ಜಿಲ್ಲೆ ಕಲಬುರಗಿಗೆ ಮಲ್ಲಿಕಾರ್ಜುನ ಖರ್ಗೆ ಆಗಮಿಸುವ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಇದನ್ನು ಕಲ್ಯಾಣ ಕ್ರಾಂತಿ ಕಾರ್ಯಕ್ರಮ ಎಂದು ಕಾಂಗ್ರೆಸ್‍ನವರು ಕರೆದಿದ್ದಾರೆ.
ಶುಕ್ರವಾರದಿಂದಲೇ ಕಾಂಗ್ರೆಸ್ ಪಕ್ಷದ ಪ್ರಮುಖರು ಕಲಬುರಗಿಗೆ ಆಗಮಿಸಿದ್ದು, ಇಡೀ ನಗರ ಖರ್ಗೆ ಅವರ ಬ್ಯಾನರ್, ಪ್ಲೆಕ್ಸ್, ಬಂಟಿಂಗ್ಸ್‍ಗಳಿಂದ ರಾರಾಜಿಸುತ್ತಿದೆ. ಪಕ್ಷದ ವರಿಷ್ಠರದ ರಣದೀಪ್ ಸುರ್ಜಿವಾಲ, ರಾಜ್ಯ ಉಸ್ತುವರಿ ಶ್ರೀಧರ ಬಾಬು, ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಿ.ಕೆ. ಶಿವಕುಮಾರ, ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ, ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಸತೀಶ ಜಾರಕಿಹೊಳಿ, ಅಲಿಂ ಅಹ್ಮದ್, ಸೇರಿದಂತೆ ಅನೇಕ ಮುಖಂಡರು ಆಗಮಿಸಲಿದ್ದಾರೆ.
ನಗರದ ಎನ್.ವಿ. ಮೈದಾನದಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದು, ಈಗಗಲೇ ವೇದಿಕೆ ಸಿದ್ಧಗೊಂಡಿದೆ. ಪತ್ರಕರ್ತರಿಗೆ, ವಿಐಪಿಗಳಿಗೆ ವಿಶೇಷ ಆಸನದ ವ್ಯವಸ್ಥೆ ಮಾಡಲಾಗಿದೆ. ಖರ್ಗೆ ಅಭಿನಂದನಾ ಸಮಾರಂಭದಲ್ಲಿ ಲಕ್ಷಾಂತರ ಜನ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಲಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…