ಬಿಸಿ ಬಿಸಿ ಸುದ್ದಿ

ಆರ್ಟಿಕಲ್ 371 (J) ಜಾರಿಗೆ ಬರಲು ಖರ್ಗೆ ಅವರ‌ ಅವಿರತ ಶ್ರಮ ಕಾರಣ: ಸಿದ್ದರಾಮಯ್ಯ

ಕಲಬುರಗಿ: ಎಐಸಿಸಿ ಅಧ್ಯಕ್ಷರಾಗಲು ಮಲ್ಲಿಕಾರ್ಜುನ ಖರ್ಗೆ ಅವರು ಪ್ರಯತ್ನಿಸಲಿಲ್ಲ ಆದರೆ ಅಧ್ಯಕ್ಷಗಿರಿ ಅದಾಗಿಯೇ ಹುಡುಕಿಕೊಂಡು ಬಂದಿದೆ ಇದು ನಿಷ್ಢಾವಂತ ಕಾರ್ಯಕರ್ತನಿಗೆ ಸಂದ ಗೆಲುವು‌. ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಕಲಬುರಗಿ ಯಲ್ಲಿ ನಡೆದ ಕಲ್ಯಾಣ ಕ್ರಾಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಸೋನಿಯಾ, ರಾಹುಲ್ ಹಾಗೂ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನತ್ತೆ ಗತವೈಭವಕ್ಕೆ ಮರಳಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ಜನಪರ ಸರ್ಕಾರ ಸ್ಥಾಪನೆ ಮಾಡಿದಾಗ ಲೇ ಖರ್ಗೆ ಅವರಿಗೆ ಕೊಡಬಹುದಾದ ನಿಜವಾದ ಕೊಡುಗೆ ಹಾಗೂ ಅಭಿಮಾನ ಎಂದರು.

ಕಕ ಭಾಗದಲ್ಲಿ‌ಕಳೆದ ಸಲ 21 ಸ್ಥಾನ ಗೆದ್ದಿತ್ತು. ಮುಂಬರುವ ಚುನಾವಣೆಯಲ್ಲು ಕಕ‌ಭಾಗದ ಒಟ್ಟು 41 ಸ್ಥಾನಗಳ ಪೈಕಿ ಕನಿಷ್ಠ 30 ಸ್ಥಾನ ಗೆಲ್ಲಬೇಕು ಅದಕ್ಕೆ‌ನೀವು ತಯಾರಾಗಬೇಕು. ರಾಜ್ಯದಲ್ಲಿ ಅನೈತಿಕ ಸರ್ಕಾರ‌ ಇದೆ. ಅದೆ ಅನೈತಿಕತೆ ಮುಂದುವರೆದಿದೆ. ರಾಜ್ಯದ ಇತಿಹಾಸದಲ್ಲೇ ಗುತ್ತಿಗೆದಾರರು ಯಾವ ಸರ್ಕಾರವನ್ನು 40% ಕಮಿಷನ್ ಎಂದಿರಲಿಲ್ಲ. ವಿಧಾನಸೌಧ ಗೋಡೆಗಳು ಲಂಚ ಲಂಚ ಲಂಚ ಅಂದು ಕೂಗುತ್ತಿವೆ. ಬೊಮ್ಮಾಯಿ‌ ಸರ್ಕಾರ ಲಂಚದ ಕೂಪವಾಗಿದೆ. ವರ್ಗಾವಣೆ, ಪದೋನ್ನತಿಗೆ ಲಂಚ ಕೊಡಬೇಕಾಗಿದೆ. ಅಧಿಕಾರಿಗಳು ಅನಿವಾರ್ಯವಾಗಿ ಲಂಚಕೊಟ್ಟ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದಾರೆ. ಇಂತಹ ಭ್ರಷ್ಟ ಸರ್ಕಾರ‌ಇರಬೇಕಾ ? ಇರಬಾರ್ದು. ನೀವೆಲ್ಲ ಬಿಜೆಪಿ ಸರ್ಕಾರ ಬರದಂತೆ ಮಾಡಬೇಕು ಎಂದು ಮನವಿ ಮಾಡಿದರು.

ಖರ್ಗೆ ಅವರು ಸರ್ಕಾರದ ಮೇಲೆ ನಿರಂತರ ಒತ್ತಡ ತಂದು ಈ‌ ಭಾಗಕ್ಕೆ ಆರ್ಟಿಕಲ್ 371 (J) ಜಾರಿಗೆ ತಂದರು. ಆದರೆ‌ ಬಿಜೆಪಿ ಸರ್ಕಾರ ಈ ಭಾಗಕ್ಕೆ ಕೇವಲ ಹೆಸರು ಬದಲಾವಣೆ ಮಾಡಿದರು ಎಂದು ಕುಟುಕಿದರು. ಆದರೆ, ನಾನು ಸಿಎಂ ಆಗಿದ್ದಾಗ ಆರ್ಟಿಕಲ್ 371(J) ಜಾರಿಗೆ ತರಲು ಎಚ್ ಕೆ ಪಾಟೀಲ ನೇತೃತ್ವದ ಸಮಿತಿ ಮಾಡಿದ್ದೆ. ಯಾವ ಅಧ್ವಾನಿ ಇದನ್ನು ಜಾರಿಗೆ ತರಲು ಆಗಲ್ಲ ಎಂದಿದ್ದರೋ ಅದನ್ನೇ ‌ಜಾರಿಗೆ ತರಲು ಖರ್ಗೆ ಅವಿರತ ಶ್ರಮ ವಹಿಸಿದ್ದರು.

ನಮ್ಮ ಕಾಲದಲ್ಲಿ 36,000 ಹುದ್ದೆ ತುಂಬಿದ್ದೇವೆ ಆದರೆ ಈ ಬೇಜವಾಬ್ದಾರಿ ಸರ್ಕಾರ ಒಂದೇ ಒಂದು ಹುದ್ದೆ ತುಂಬಲಿಲ್ಲ ಎಂದು ಹರಿಹಾಯ್ದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಭಾಗದ ಅಭಿವೃದ್ದಿಗೆ 5000 ಕೋಟಿ ನೀಡುತ್ತೇವೆ ಜೊತೆಗೆ ಖಾಲಿ ಇರುವ ಹುದ್ದೆಗಳನ್ನು ತುಂಬುತ್ತೇವೆ ಎಂದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

59 mins ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

11 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

11 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

11 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago