ಬಿಸಿ ಬಿಸಿ ಸುದ್ದಿ

ಅಭಿವೃದ್ಧಿಯ ಇನ್ನೊಂದೆ ಹೆಸರೇ ಬಿಜೆಪಿ: ಕೇಂದ್ರ ಸಚಿವ ಭಗವಂತ ಖೂವಾ

ಕಲಬುರಗಿ: ದೇಶದಲ್ಲಿ, ರಾಜ್ಯದಲ್ಲಿ, ಗ್ರಾಮಮಟ್ಟದ ಆಡಳಿತದಲ್ಲಿ ಬಿಜೆಪಿ ಇದೆ. ನಾವು ನೀಡಿದ ಭರವಸೆಯಂತೆ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕು. ಹಾಗೂ ಜನರ ಕಲ್ಯಾಣಕ್ಕಾಗಿ ಕೇಂದ್ರ – ರಾಜ್ಯ ಸರ್ಕಾರ ಹಮ್ಮಿಕೊಂಡ ಕಾರ್ಯಕ್ರಮಗಳ ಸದುಪಯೋಗ ಕಟ್ಟಕಡೆಯ ಜನಸಾಮಾನ್ಯನೂ ಪಡೆಯುವಂತೆ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಕೇಂದ್ರ ಸಚಿವ ಭಗವಂತ ಖೂವಾ ಅವರು ಹೇಳಿದರು.

ಶನಿವಾರ ಆಳಂದ ಪಟ್ಟಣದ ಎ ವಿ ಪಾಟೀಲ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಆಳಂದ ಮಂಡಲ ಭಾರತೀಯ ಜನತಾ ಪಾರ್ಟಿ ಕಾರ್ಯಕಾರಣಿ ಸಭೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಸಭೆಯಲ್ಲಿ ಆಳಂದ ಶಾಸಕ ಸುಭಾಷ ಆರ್ ಗುತ್ತೇದಾರ ಮಾತನಾಡಿ, ನಿಸ್ವಾರ್ಥ ಸೇವೆಯನ್ನು ಸಲ್ಲಿಸುವ ಕಾರ್ಯಕರ್ತರ ಪರಿಶ್ರಮದಿಂದ ಭಾರತೀಯ ಜನತಾ ಪಾರ್ಟಿ ಗ್ರಾಮ ಮಟ್ಟದಿಂದ ರಾಷ್ಟ್ರ ಮಟ್ಟದವರೆಗೆ ಬೆಳೆದು ಇಂದು ವಿಶ್ವದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಹೇಳಿದರು.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು ದೇಶದ ಪ್ರಧಾನಿಗಳಾದ ನರೇಂದ್ರ ಮೋದಿ, ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೋಮ್ಮಯಿ ಅವರ ನೇತೃತ್ವದಲ್ಲಿ ಸಾಕಷ್ಟು ಸಾಧನೆಗಳನ್ನು ಬಿಜೆಪಿ ಸರ್ಕಾರ ಮಾಡಿದ್ದು ಈ ಸಾಧನೆಯನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದು ಕರೆ ನೀಡಿದರು.

ಅμÉ್ಟೀ ಅಲ್ಲಾ ಇವತ್ತು ಕೇಂದ್ರ ಮತ್ತು ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಎಲ್ಲಾ ರಂಗದಲ್ಲಿ ಯಶಸ್ವಿ ದಾರಿಯಲ್ಲಿ ಕಾರ್ಯಗಳನ್ನು ಮಾಡುತ್ತಿದ್ದು. ಒಳ್ಳೆಯ ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ನಾವುಗಳು ಈ ಯೋಜನೆಗಳ ಬಗ್ಗೆ ಜನರಿಗೆ ತಿಳಿ ಹೇಳದಿದ್ದಲಿ ನಮ್ಮಷ್ಟಕೆ ನಾವು ವಂಚನೆ ಮಾಡಿಕೊಂಡ ಹಾಗೆ ಆಗುತ್ತದೆ ಎಂದು ಅಭಿಪ್ರಾಯಪಟ್ಟರು.

ನರೇಂದ್ರ ಮೋದಿಯವರು ವಿಶ್ವ ಮೆಚ್ಚಿದ ನಾಯಕರಾಗಿದ್ದು ಅವರ ನೇತೃತ್ವದ ಭಾರತೀಯ ಜನತಾ ಪಕ್ಷದಲ್ಲಿ ನಾವುಗಳು ಸದಸ್ಯರಾಗಿರುವದು ನಮಗೆ ಗೌರವದ ಸಂಗತಿ ಆಗಿದೆ. ಇವತ್ತು ನಾವು ದೇಶದ ರಕ್ಷಣೆಗಾಗಿ ಯಾವುದೇ ಪ್ರಾಣ ತ್ಯಾಗ ಬಲಿದಾನ ಮಾಡುವ ಅವಶ್ಯಕತೆಗಳಿಲ್ಲ ಡಾ.ಬಾಬಾ ಸಾಹೆಬ ಅಂಬೇಡ್ಕರ್ ಅವರು ನಮಗೆ ನೀಡಿರುವಂತಹ ಅಧಿಕಾರವನ್ನು ಬಳಕೆ ಮಾಡಿಕೊಂಡು ನಮ್ಮ ಮತವನ್ನು ಸರಿಯಾದ ನಿಟ್ಟಿನಲ್ಲಿ ಚಲಾಯಿಸುವ ಮೂಲಕ ಈ ದೇಶವನ್ನು ಸುರಕ್ಷಿತವಾಗಿಡಲು ನಾವುಗಳು ಪಣ ತೋಡಬಹುದು ಎಂದು ನುಡಿದರು.

ವಿಭಾಗೀಯ ಸಂಘಟನಾ ಸಹ ಪ್ರಭಾರಿ ಈಶ್ವರಸಿಂಗ ಠಾಕೂರ, ಜಿ.ಪಂ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತ್ತೇದಾರ ಮಾತನಾಡಿದರು. ಆಳಂದ ಮಂಡಲ ಅಧ್ಯಕ್ಷ ಆನಂದರಾವ ಪಾಟೀಲ ಕೋರಹಳ್ಳಿ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರ.ಕಾಯದರ್ಶಿ ಶರಣು ಕುಮಸಿ ನಿರೂಪಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಅಶೋಕ ಬಗಲಿ, ಸಂತೋಷ ಹಾದಿಮನಿ, ಶ್ರೀಶೈಲ ಪಾಟೀಲ, ಸುಜ್ಞಾನಿ ಪೊದ್ದಾರ, ಬಸವರಾಜ ಬಿರಾದಾರ, ಪುರಸಭೆ ಅಧ್ಯಕ್ಷೆ ರಾಜಶ್ರೀ ಖಜೂರಿ, ಉಪಾಧ್ಯಕ್ಷ ಚಂದ್ರಕಾಂತ ಹತ್ತರಕಿ ವೇದಿಕೆಯ ಮೇಲಿದ್ದರು.

ಸಭೆಯಲ್ಲಿ ಜೆಸ್ಕಾಂ ನಿರ್ದೇಶಕ ವೀರಣ್ಣ ಮಂಗಾಣೆ, ಹಿರಿಯ ಮುಖಂಡರಾದ ಮಲ್ಲಣ್ಣಾ ನಾಗೂರೆ, ಹಣಮಂತರಾವ ಮಾಲಾಜಿ, ಸಿ ಕೆ ಪಾಟೀಲ, ಅಶೋಕ ಗುತ್ತೇದಾರ, ಸುರೇಶ ನಂದೇಣಿ, ಅಶೋಕ ಹತ್ತರಕಿ ಸೇರಿದಂತೆ ಪಕ್ಷದ ವಿವಿಧ ಸ್ಥರಗಳಲ್ಲಿ ಜವಾಬ್ದಾರಿ ಹೊಂದಿರುವ ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು, ಶಕ್ತಿ ಕೇಂದ್ರದ ಪದಾಧಿಕಾರಿಗಳು ಭಾಗವಹಿಸಿದ್ದರು.

emedialine

Recent Posts

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀಕುಟುಂಬಕ್ಕೆ ಒಂದೆಡೆ ದುಃಖ, ತಳವಳ, ಕಳವಳ, ಸಂಕಟ, ಮತ್ತೊಂದೆಡೆಸಂತಸ,…

30 mins ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

14 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

14 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

16 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

16 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

16 hours ago