ದೇಹ ಮಣ್ಣಾಗುವ ಬದಲು ಇನ್ನೊಬ್ಬರ ಬಾಳಿಗೆ ಬೆಳಕಾಗಬೇಕು : ಶಿವಾನಂದ ಹೂಗಾರ

0
46

ಹುಮನಾಬಾದ : ದೇಹ ಮಣ್ಣಾಗುವ ಬದಲು ಇನ್ನೊಬ್ಬರ ಬಾಳಿಗೆ ಬೆಳಕಾಗಬೇಕು ಎಂದು ರಾಷ್ಟ್ರೀಯ ದೇಹಾಂಗದಾನ ಜಾಗೃತಿ ಸಮಿತಿ ಅಧ್ಯಕ್ಷ ಶಿವಾನಂದ ಹೂಗಾರ ರವರು ನುಡಿದರು.

ನಗರದ ನಾಗೇಶ್ವರಿ ಹೋಟೆಲ್ ಸಭಾಂಗಣದಲ್ಲಿ ರಾಷ್ಟ್ರೀಯ ದೇಹಾಂಗದಾನ ಜಾಗೃತಿ ಸಮಿತಿ ಬೀದರ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡ ಉಪನ್ಯಾಸ ಗೋಷ್ಠಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಅವರು ಅಂಗಾಂಗಗಳ ದಾನಗಳ ಮೂಲಕ ಇನ್ನೊಬ್ಬರ ಜೀವನಕ್ಕೆ ಬೆಳಕು ಆಗಬೇಕಾಗಿದೆ.

Contact Your\'s Advertisement; 9902492681

ಈ ನಿಟ್ಟಿನಲ್ಲಿ ರಾಷ್ಟ್ರೀಯ ದೇಹಾಂಗದಾನ ತನ್ನ ಕೆಲಸವನ್ನು ನಿಸ್ವಾರ್ಥದಿಂದ ಮಾಡುತ್ತಿದೆ.ವ್ಯಕ್ತಿಯ ಮರಣದ ನಂತರವೂ ಸಮಾಜದ ಸೇವೆ ಮಾಡಬೇಕು ಎನ್ನುವ ಮಹದಾಸೆ ಹೊಂದಿರುವ ಜನರು ದೇಹಾಂಗದಾನಕ್ಕೆ ಮುಂದಾಗಿ, ಇನ್ನೊಬ್ಬರಿಗೆ ಮಾದರಿಯಾಗುವ ಕೆಲಸ ಮಾಡಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ, ಸಾಹಿತಿ,ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಎನ್ ಜವಾದಿ ಯವರು ಮಾತನಾಡಿ ವ್ಯಕ್ತಿಯ ಮರಣದ ನಂತರವೂ ಅವರ ದೇಹ ಎಂಟು ರೀತಿಯ ವಿವಿಧ ಅಂಗಗಳು ಇನ್ನೊಬ್ಬರ ಬಾಳಿಗೆ ನೇರವಾಗುತ್ತವೆ.ಈ ರೀತಿ ಒಬ್ಬ ವ್ಯಕ್ತಿ ತನ್ನ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಎಂಟು ಜೀವಗಳನ್ನು ಉಳಿಸಬಹುದು.

ಚರ್ಮದಿಂದ ಹಿಡಿದು ಎಲ್ಲ ಅಂಗಗಳನ್ನು ದಾನ ಮಾಡಬಹುದು.ಅಂಗಾಂಗ ದಾನ ಮಾನವೀಯತೆಯ ಕೆಲಸ. ಅಂಗಾಂಗಗಳನ್ನು ದಾನಕ್ಕೆ ಸಂಕಲ್ಪ ಮಾಡುವ ಮುಖಾಂತರ ಸಾವಿನ ನಂತರವೂ ಬದುಕು ನೀಡುವ ಸಾರ್ಥಕ ಕಾರ್ಯ ಮಾಡಬಹುದಾಗಿದೆ. ನಮ್ಮ ಸಾವಿನ ನಂತರ ಅಂಗಾಂಗಗಳನ್ನು ನೀಡುವ ಮೂಲಕ ಇತರರ ಜೀವವನ್ನು ಬದುಕಿಸಬಹುದಾಗಿದೆ .ಅಂಗಾಂಗಗಳನ್ನು ದಾನ ಮಾಡುವ ಮೂಲಕ ದೊಡ್ಡ ಗುಣವನ್ನು ಮೆರೆಯುವ ಔದಾರ್ಯತೆ ತೋರಬೇಕು ಎಂದು ಹೇಳಿದರು.

ಸಂಚಾಲಕ ಶೇಖರಪ್ಪ ಕಟ್ಟಿಮನಿ ಯವರು ಮಾತನಾಡಿ ದೇಹದಾನ ಮಾಡುವ ಮೂಲಕ ಇನ್ನೊಬ್ಬರ ಜೀವನಕ್ಕೆ ಜೀವ ವಾಗುವ ಕೆಲಸ ರಾಷ್ಟ್ರೀಯ ದೇಹಾಂಗದಾನ ಜಾಗೃತಿ ಸಮಿತಿ ಯಶಸ್ವಿಯಾಗಿ ಕೆಲಸ ನಿರ್ವಹಿಸುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ದೇಹಾಂಗದಾನ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ನೀಲಾಂಬಿಕಾ ರವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ದೇಹಾಂಗದಾನ ಜಾಗೃತಿ ಸಮಿತಿಯ ಜಿಲ್ಲಾ ಪದಾಧಿಕಾರಿಗಳು, ಗಣ್ಯರು, ಸಾಹಿತಿಗಳು,ಶಿಕ್ಷಕರು, ಮಾತೆಯರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here