ಒಳ ಮೀಸಲಾತಿಗಾಗಿ ನಡೆಸುತ್ತಿದ್ದ ಹೋರಾಟಗಾರ ಮೇಲೆ ಪೋಲೀಸ್ ಧಾಳಿ: ಸಿಪಿಐಎಂ ಆಕ್ರೋಶ

0
37

ಕಲಬುರಗಿ: ಪರಿಶಿಷ್ಟ ಜಾತಿ ಸಮುದಾಯಗಳ ನಡುವೆ ಒಳ ಮೀಸಲಾತಿಯನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಸುತ್ತಿದ್ದ ಹೋರಾಟಗಾರರ ಜೊತೆ ಸರಕಾರ ಮಾತುಕತೆ ನಡೆಸಿ ಸದಾಶಿವ ಆಯೋಗದ ವರದಿಯ ಕುರಿತು ಸರಕಾರದ ಅಭಿಪ್ರಾಯವೇನೆಂದು ಪ್ರಕಟಿಸುವ ಬದಲು ಹೋರಾಟ ನಿರತರ ಮೇಲೆ ಪೋಲೀಸ್ ಧಾಳಿಗೆ ಕ್ರಮವಹಿಸಿ ದೌರ್ಜನ್ಯ ನಡೆಸಿರುವುದನ್ನು ಸಿಪಿಐಎಂ ಪಕ್ಷ ಖಂಡಿಸಿದೆ. ತಕ್ಷಣವೇ ಬಂಧಿತರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು ಮತ್ತು ಗಾಯಾಳುಗಳಿಗೆ ಸೂಕ್ತ ಪರಿಹಾರ ಮತ್ತು ಉಚಿತ ಆರೋಗ್ಯ ಸೇವೆಯನ್ನು ನೀಡಬೇಕು ಎಂದು ಸಿಪಿಐಎಂ ರಾಜ್ಯ ಸರಕಾರವನ್ನು ಒತ್ತಾಯಿಸುತ್ತದೆ.

ಈ ಕುರಿತು ಪಕ್ಷದ ಕಲಬುರಗಿ ಕಾರ್ಯದರ್ಶಿ ಕೆ ನೀಲಾ ಪತ್ರಿಕಾ ಪ್ರಕಟಣೆ ನೀಡಿ ಪರಿಸದಿಷ್ಠ ಜಾತಿ ಸಮುದಾಯದ ಮೀಸಲಾತಿಯಲ್ಲಿ ಹಿಂದುಳಿದಿರುವಿಕೆಯ ಕಾರಣದಿಂದ ವಂಚನೆಗೊಳಗಾದವರಿಗೆ ಒಳ ಮೀಸಲಾತಿ ನೀಡಬೇಕೆಂಬ ಒತ್ತಾಯ ಹಲವಾರು ವರ್ಷಗಳಿಂದ ಕೇಳಿ ಬರುತ್ತಿದೆ. ಈ ಕುರಿತಂತೆ ನ್ಯಾ .ಸದಾಶಿವ ಆಯೋಗವು ವರದಿಯನ್ನು ನೀಡಿ ಹಲವು ವರ್ಷಗಳೇ ಕಳೆದಿವೆ. ಇದುವರೆಗೆ ರಾಜ್ಯ ಸರಕಾರ ಆ ವರದಿಯನ್ನು ಸಾರ್ವಜನಿಕರಿಗೆ ಬಿಡುಗಡೆ ಮಾಡಿಲ್ಲ ಮತ್ತು ಸರಕಾರ ಶ ಕುರಿತು ತನ್ನ ನಿಲುಮೆ ಏನೆಂದು ಪ್ರಕಟಿಸದಿರುವುದು ಅಕ್ಷಮ್ಯವಾಗಿದೆ. ಈ ಕೂಡಲೇ ನ್ಯಾ. ಸದಾಶಿವ ಆಯೋಗದ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು ಮತ್ತು ಸರಕಾರ ಆ ಕುರಿತು ತನ್ನ ನಿಲುಮೆ ಏನೆಂಬುದನ್ನು ಬಿಡುಗಡೆ ಮಾಡ ಬೇಕೆಂದು ಒತ್ತಾಯಿಸಿದ್ದಾರೆ.

Contact Your\'s Advertisement; 9902492681

ಒಳ ಮೀಸಲಾತಿಗಾಗಿ ಹೋರಾಟದಲ್ಲಿ ತೊಡಗಿರುವವರ ಮೇಲೆ ಪೋಲೀಸ್ ದಾಳಿಯ ಮೂಲಕ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುವ ಮೂಲಕ ಸರಕಾರ ಒಳ ಮೀಸಲಾತಿಯನ್ನು ವಿರೋಧಿಸುವ ಇಂಗಿತ ವ್ಯಕ್ತ ಪಡಿಸಿದೆಯೇ ಎಂದು ಸಿಪಿಐಎಂ ಮುಖ್ಯ ಮಂತ್ರಿಗಳನ್ನು ಪ್ರಶ್ನಿಶಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here