ಚಿತ್ತಾಪುರ: ಕಲಬುರಗಿ ಜಿಲ್ಲೆ ವಾಣಿಜ್ಯ ಬೆಳೆ ತೊಗರಿ ನಾಡು ಎಂದು ಕರೆಯಲಾಗುತ್ತದೆ. ಆದರೆ ಇಂತಹ ನಾಡಿನಲ್ಲಿ ತೊಗರಿ ಬೆಳೆಗಾರರಿಗೆ ಯಾವುದೇ ರಕ್ಷಣೆ ಇಲ್ಲದಂತಾಗಿದೆ. ಈ ಬಾರಿ ತಾಲ್ಲೂಕಿನಲ್ಲಿ ತೊಗರಿ ಬೆಳೆಗೆ ನೆಟೆ ರೋಗ ತಗುಲಿ. ಸಾವಿರಾರು ಹೆಕ್ಟೇರ್ ತೊಗರಿ ಬೆಳೆ ನಷ್ಟವಾಗಿದೆ. ಇದರಿಂದ ಬೆಳಗಾವಿ ಅಧಿವೇಶನದಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ಅವರು ತೊಗರಿ ಬೆಳೆಗಾರರ ಸಮಸ್ಯೆ ಕುರಿತು ಮಾತನಾಡಿ, ಸರಕಾರದ ಗಮನ ಸೆಳೆಯಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಸಮಿತಿ ಜಂಟಿ ಕಾರ್ಯದರ್ಶಿ ಡಾ.ಸಾಯಬಣ್ಣಾ ಗುಡುಬಾ ಒತ್ತಾಯಿಸಿದ್ದಾರೆ.
ತೊಗರಿ ಬೆಳೆಗಾರರು ಪ್ರತಿವರ್ಷ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸುತ್ತಾರೆ. ಆದರೂ ಸರಕಾರದಿಂದ ಯಾವುದೇ ನೆರವು ಸಿಗುವುದಿಲ್ಲ. ಪ್ರತಿ ವರ್ಷ ತೊಗರಿ ಬೆಳೆಗಾರರು ಬೆಲೆ ಕುಸಿತದ ಭೀತಿ ಎದುರಿಸುತ್ತಾರೆ.
ತೊಗರಿ ಬೆಳೆಗೆ ನೆಟೆ ರೋಗ ತಗುಲಿ, ತೊಗರಿ ಗಿಡ ಸಂಪೂರ್ಣ ಒಣಗಿ ಹೋಗಿದೆ. ರೈತರ ಬದುಕು ಬೀದಿಗೆ ಬಿದ್ದಿದೆ. ಆದರೂ ಸರಕಾರ ರೈತರ ಬಗ್ಗೆ ಕಾಳಜಿ ತೊರಿಸುತ್ತಿಲ್ಲ. ತೊಗರಿ ಬೆಳೆಗಾರರು ಸಾಲದ ಸುಳಿಗೆ ಸಿಲುಕಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ತೊಗರಿ ಬೆಳೆಗಾರರ ಸಂರಕ್ಷಣೆ ಮಾಡಬೇಕು.
ತೊಗರಿ ಬೆಳೆಗಾರರ ಹಿತಕಾಡಲು ಅಸ್ತಿತ್ವಕ್ಕೆ ಬಂದಿರುವ ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ತೊಗರಿ ಖರೀದಿಯೂ ನಡೆಸದೇ ಹೊಸ ತಳಿ ಅಭಿವೃದ್ಧಿ ಮಾಡದೆ ಮಂಡಳಿ ಇದ್ದೂ ಇಲ್ಲದಂತಾಗಿದೆ. ಕಲಬುರಗಿಯ ಆರ್ಥಿಕತೆ ನಿರ್ಧಾರವಾಗುವುದೇ ತೊಗರಿ ಮೇಲೆ, ಬಂಪರೆ ಬೆಳೆ ಬಂದರೆ ಮಾತ್ರ ಅನ್ನದಾತರ ಮೊಗದಲ್ಲಿ ಮಂದಹಾಸ ಕಾಣಲು ಸಾಧ್ಯ. ಆದರೆ ಈ ಬಾರಿ ಒಂದೆಡೆ ಬರ, ಇನ್ನೊಂದೆಡೆ ನೆರೆ. ಆದರೆ ಎರಡು ಪಾರಾಗಿ ಬಂದರೆ ಮಾರುಕಟ್ಟೆಯಲ್ಲಿ ತೊಗರಿಗೆ ಸೂಕ್ತ ಬೆಲೆ ಸಿಗದೆ ರೈತ ಕಂಗಾಲಾಗುತ್ತಾನೆ.
ಮಾರುಕಟ್ಟೆಯಲ್ಲಿ ತೊಗರಿಗೆ ಬೆಲೆ ಕುಸಿತವಾಗ ಮಂಡಳಿ ಮಾರುಕಟ್ಟೆ ಪ್ರವೇಶಿಸಿ ತೊಗರಿ ಖರೀದಿಸುತ್ತಿತ್ತು. ಆದರೆ ಕ್ರಮೇಣ ತೊಗರಿ ಖರೀದಿ ಏಜೆನ್ಸಿಯಾಗಿ ನಾಫೆಡ್ ಗೆ ಜವಾಬ್ದಾರಿ ನೀಡಿದ್ದರಿಂದ ಮಂಡಳಿ ಇದ್ದು ಇಲ್ಲದಂತಾಗಿದೆ. ಹೆಸರಿಗೆ ಮಾತ್ರ ಉಪ ಏಜೆನ್ಸಿಯಾಗಿ ಕೆಲಸ ಮಾಡುತ್ತಿದೆ.
ಅತಿವೃಷ್ಟಿಗೆ ತೊಗರಿ ಬೆಳೆಗಾರರು ಕಂಗಾಲು.
ಈ ಬಾರಿ ಸರಾಸರಿಗಿಂತ ಅಧಿಕ ಮಳೆಯಾಗಿ ರಾಜ್ಯದಲ್ಲಿ ಅತಿವೃಷ್ಟಿಯಾಗಿದೆ.
ಇದರಿಂದ ಈ ಬಾರಿ ತೊಗರಿ 4,80,645 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಆದರೆ
ಅತಿವೃಷ್ಟಿ ಮಳೆಯಿಂದ ಜಿಲ್ಲೆಯಲ್ಲಿ 180000 ಹೆಕ್ಟೇರ್ ತೊಗರಿ ಬೆಳೆ ಹಾನಿಯಾಗಿದೆ. ತೊಗರಿ ಬೆಳೆಗಾರರ ಬದುಕು ಬಿದಿಗೆ ಬಿದ್ದಂತಾಗಿದೆ. ಶೇ. ತೊಗರಿ ಬೆಳೆ ಗೊಡ್ಡು, ನೆಟೆ ರೋಗಕ್ಕೆ ಶೇ.50,000 ಸಾವಿರ ಹೆಕ್ಟೇರ್ ಬೆಳೆ ತುತ್ತಾಗಿದೆ. ಹೀಗಾಗಿ ತೊಗರಿ ಬೆಳೆಗಾರರ ರೈತರ ಮೇಲೆ ಬರೆ ಬಿದ್ದಂತಾಗಿದೆ.
ತೊಗರಿ ಬೆಳೆಗಾರರ ಸಂರಕ್ಷಣೆ ಮಾಡುವ ಸಲುವಾಗಿ
ಅತಿವೃಷ್ಟಿ ಹಾಗೂ ನೆಟೆ ರೋಗದಿಂದ ಬೆಳೆ ನಷ್ಟ ಅನುಭವಿಸಿರುವ ತೊಗರಿ ಬೆಳೆಗಾರರಿಗೆ ಬೆಳೆ ನಷ್ಟ ಪರಿಹಾರ ಎಕರೆಗೆ 25000 ಸಾವಿರ ರೂಪಾಯಿ ಪರಿಹಾರ ನೀಡಬೇಕು.
ತೊಗರಿ ಬೋರ್ಡ್ ನ್ನು ದ್ವಿದಳ ಧಾನ್ಯ ಬೋರ್ಡ್ ಮಾಡಿದ್ದು ಕೈಬಿಟ್ಟು, ತೊಗರಿ ಬೋರ್ಡ್ ಬಲ ವರ್ಧನೆಗೆ ಸರಕಾರ ಕನಿಷ್ಟ 25 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಬೇಕು.
ಡಾ. ಎಮ್.ಎಸ್.ಸ್ವಾಮಿನಾಥನ್ ಆಯೋಗದ ವರದಿ ಪ್ರಕಾರ ತೊಗರಿಗೆ ಬೆಳೆಗೆ ಎಮ್.ಎಸ್.ಪಿ ಕಾನೂನು ಜಾರಿ ಮಾಡಬೇಕು. ಕ್ವಿಂಟಾಲ್ ತೊಗರಿಗೆ ಕನಿಷ್ಟ 12000 ರೂಪಾಯಿ ಬೆಂಬಲ ಬೆಲೆ ಜಾರಿ ಮಾಡಬೇಕು.
ಪಂಚಾಯತಿ ಗೊಂದು ತೊಗರಿ ಖರೀದಿ ಕೇಂದ್ರ ತೆರೆಯಬೇಕು. ಅಕ್ಷರ ದಾಸೋಹ ಅಡಿ ತೊಗರಿ ಬೆಳೆ ಪೂರೈಕೆಯಾಬೇಕು. ರಾಜ್ಯದ ನ್ಯಾಯಬೆಲೆ ಅಂಗಡಿಗಳಿಗೆ ತೊಗರಿ ಬೆಳೆ ಪಾಕಿಟ್ ಪೂರೈಸುವಂತೆ ಸರಕಾರ ಕ್ರಮವಹಿಸಬೇಕು. ತೊಗರಿ ಬೆಳೆ ಸಂರಕ್ಷಣೆ ಮಾಡಲು ತೊಗರಿ ಹೆಚ್ಚಿನ ಸಂಶೋಧನೆಯಾಗಬೇಕು. ಉತ್ಪಾದನೆಯಲ್ಲಿ ಹೊಸ ತಂತ್ರಜ್ಞಾನ ಜಾರಿಯಾಬೇಕು.
ಮೊಜಾಂಬಿಕ್-2.86 ಲಕ್ಷ ಟನ್, ತಾಂಜಾನಿಯ 1.9ಲಕ್ಷ ಟನ್, ಮ್ಯಾನಮರ್ 1.7 ಲಕ್ಷ ಟನ್, ಮಾಲ್ವಾ .55 ಲಕ್ಷ ಟನ್ ವಿದೇಶದಿಂದ ತೊಗರಿ ಬೆಳೆಯನ್ನು ಭಾರತ ಆಮದು ಮಾಡಿಕೊಳ್ಳುತ್ತಿದೆ. ಇದರಿಂದ ತಕ್ಷಣ ಆಮದು ಮಾಡಿಕೊಳ್ಳುತ್ತಿರುವುದನ್ನು ನಿರ್ಭಂದಿಸಬೇಕು ಹಾಗೂ ಅಮದು ಸುಂಕವನ್ನು ಕನಿಷ್ಠ ಶೇ.100ಕ್ಕೆ ಹೆಚ್ಚಿಸಬೇಕು.
ರೈತರ, ತೊಗರಿ ಬೆಳೆಗಾರರ ಸಂರಕ್ಷಣೆ ಕುರಿತು ಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ಮಾತನಾಡಿ, ಸರಕಾರಕ್ಕೆ ಕಲಬುರಗಿ ತೊಗರಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸರಕಾರದ ಗಮನ ಸೆಳೆದು ರೈತರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಸಮಿತಿ ಜಂಟಿ ಕಾರ್ಯದರ್ಶಿ ಡಾ.ಸಾಯಬಣ್ಣಾ ಗುಡುಬಾ ಪತ್ರಿಕೆ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…