ಕಲಬುರಗಿ: ಪ್ರತಿ ವರ್ಷದಂತೆ ಈ ವರ್ಷವು ಕೂಡ ನಗರದ ಮೆಹತಾ ಶಾಲೆಯಲ್ಲಿ 2022-23ನೇ ಸಾಲಿನ ವಾರ್ಷಿಕ ಕ್ರೀಡಾಕೂಟಗಳ ಸಮಾರಂಭವನ್ನು ಡಿಸಿಪಿ ಅಡ್ಡೂರು ಶ್ರೀನಿವಾಸಲು ಉದ್ಘಾಟಿಸಿದರು.
ನಂತರ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಕ್ರೀಡೆಯು ಅಭ್ಯಾಸದ ಒಂದು ಮಹತ್ವರವಾದ ಭಾಗವಾಗಿದೆ ಎಂದು ಹೇಳಿದರು.
ಕೃಷಿ ಮಹಾವಿದ್ಯಾಲಯ ದೈಹಿಕ ಶಿಕ್ಷಣ ಇಲಾಖೆಯ ಮುಖ್ಯಸ್ಥರಾದ ಡಾ. ರಾಜಕುಮಾರ ಕರ್ವೆ ಮಾತನಾಡಿ ಕ್ರೀಡೆಯಿಂದ ಮಾನಸಿಕ ಮತ್ತು ದೈಹಿಕ ಸ್ವಾಸ್ಥ್ಯ ಹೆಚ್ಚಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಶಾಲೆಯ ಪ್ರಾಚಾರ್ಯರಾದ ಪ್ರೀತಿ ಮೆಹತಾ ಅವರು ವಹಿಸಿಕೊಂಡಿದ್ದರು, ಶಾಲೆಯ ಮ್ಯಾನೆಜಿಂಗ್ ಟ್ರಸ್ಟಿಗಳಾದ ಚಕೋರ ಮೆಹತಾ, ರಂಜನ ಮೆಹತಾ ಮತ್ತು ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.