ಕ್ರೀಡೆ ಮನುಷ್ಯನ ನಡುವೆ ಉತ್ತಮ ಬಾಂಧವ್ಯ ಬೆಳೆಸುತ್ತದೆ

0
161

ಶಹಾಬಾದ : ಕ್ರೀಡೆ ಎಂಬುದು ಮನುಷ್ಯನ ನಡುವೆ ಉತ್ತಮ ಬಾಂಧವ್ಯ ಬೆಳೆಸುವ ಮೂಲಕ ಉತ್ತಮ ಸಮಾಜದ ನಿರ್ಮಾಣಕ್ಕೆ ಸಹಕಾರಿಯಾಗಲಿ ಎಂದು ಡಿವಾಯ್‍ಎಸ್‍ಪಿ ಉಮೇಶ ಚಿಕ್ಕಮಠ ಹೇಳಿದರು.

ಅವರು ರವಿವಾರ ನಗರದ ಜಿಇ ಕಾರ್ಖಾನೆಯ ಆಟದ ಮೈದಾನದಲ್ಲಿ ಪೊಲೀಸ್ ಇಲಾಖೆಯ ಶಹಾಬಾದ ವಿಭಾಗದ ವತಿಯಿಂದ ಪೊಲೀಸರಿಗೆ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Contact Your\'s Advertisement; 9902492681

ತಮ್ಮ ಆರೋಗ್ಯವನ್ನು ಲೆಕ್ಕಿಸದೇ ಜನರ ರಕ್ಷಣೆ ಶಾಂತಿ ಸುವ್ಯವಸ್ಥೆ ಕಾರ್ಯದಲ್ಲಿ ತೊಡಗಿರುವುದರಿಂದ ಅವರಿಗೆ ತಮ್ಮ ಒತ್ತಡದ ಜೀವನದ ಮಧ್ಯೆಯೇ ಪೊಲೀಸರು ಇಂತಹ ಪಂದ್ಯಾವಳಿಯಲ್ಲಿ ಭಾಗವಹಿಸುವುದರಿಂದ ಒತ್ತಡ ನಿವಾರಣೆಯಾಗುತ್ತದೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿರುವ ಇಂದಿನ ಬಹುತೇಕ ಯುವಕರು ಮೊಬೈಲ್‍ಗೆ ಹೆಚ್ಚು ಆದ್ಯತೆ ಕೊಡುತ್ತಿರುವುದು ಆತಂಕಕಾರಿ ಸಂಗತಿ. ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸಾಧ್ಯ ಎಂದರು.ಕ್ರೀಡೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವುದು ಬಹಳ ಮುಖ್ಯ ಎಂದು ತಿಳಿಸಿದರು.

ನಗರ ಪೊಲೀಸ್ ಠಾಣೆಯ ಪಿಐ ರಾಘವೇಂದ್ರ.ಎಸ್.ಹೆಚ್ ಮಾತನಾಡಿ, ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ, ಮಾನಸಿಕ ಆರೋಗ್ಯದ ಜೊತೆಗೆ ನಾಯಕತ್ವ ಗುಣ ರೂಪುಗೊಳ್ಳುತ್ತದೆ. ಇತ್ತೀಚಿನ ದಿನಗಳಲ್ಲಿ ಕ್ರೀಡೆಗಿಂತ ತಂತ್ರಜ್ಞಾನದೊಂದಿಗೆ ಹೆಚ್ಚು ತೊಡಗಿಸಿಕೊಂಡಿದ್ದಾರೆ ಮೊಬೈಲ್, ಕಂಪ್ಯೂಟರ್ ಮೂಲಕ ವಿವಿಧ ರೀತಿಯ ಆಟಗಳನ್ನು ಆಡುತ್ತಿದ್ದಾರೆ. ಆದರೆ ಇದು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಇದು ಪೂರಕವಾಗಲ್ಲ. ಇದನ್ನು ಮೊದಲು ಬಿಡಬೇಕು. ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕ್ರೀಡೆಗಳಲ್ಲಿ ಹೆಚ್ಚು ಭಾಗವಹಿಸಬೇಕು ಎಂದು ಹೇಳಿದರು.

ವಾಡಿ ಪಿಎಸ್‍ಐ ಮಹಾಂತೇಶ ಪಾಟೀಲ ಮಾತನಾಡಿ, ಕ್ರೀಡೆಗಳಲ್ಲಿ ಸೋಲು ಗೆಲುವು ಸಾಮಾನ್ಯವಾಗಿರುತ್ತವೆ ಎಲ್ಲಾ ಕ್ರೀಡಾ ಪಟುಗಳು ಸ್ಪೂರ್ತಿಯಿಂದ ಆಟಗಳನ್ನು ಆಡಬೇಕು ಎಂದರು.ಚಿತ್ತಾಪೂರ ಸಿಪಿಐ ಪ್ರಕಾಶ ಯಾತನೂರ, ಕಾಳಗಿ ಸಿಪಿಐ ವಿನಾಯಕ, ಮಾಡಬೂಳ ಪಿಎಸ್‍ಐ ವಿಜಯಕುಮಾರ, ಚಿತ್ತಾಪೂರ ಪಿಎಸ್‍ಐ ಚೇತನ, ಹರೀಶ ಕರಣಿಕ್ ಇತರರು ಇದ್ದರು.

ಶಹಾಬಾದ ,ವಾಡಿ, ಚಿತ್ತಾಪೂರ, ಮಾಡಬೂಳ ಹಾಗೂ ಕಾಳಗಿ ಪೊಲೀಸ್ ಠಾಣೆ ವ್ಯಾಪ್ತಿಯ ಐದು ಕ್ರಿಕೇಟ್ ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದವು. ಫೈನಲ್ ಪಂದ್ಯಾಟದಲ್ಲಿ ಶಹಾಬಾದ ಪೊಲೀಸ್ ಠಾಣೆಯ ತಂಡ ವಾಡಿ ಪೊಲೀಸ್ ತಂಡವನ್ನು ಸೋಲಿಸಿ, ಭರ್ಜರಿ ಗೆಲುವು ಸಾಧಿಸಿದೆ. ಈ ಸಂದರ್ಭದಲ್ಲಿ ಮಧುಮೋಹನ ಬಿರಾದಾರ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here