ನರೇಂದ್ರ ಮೋದಿಯವರು ಪ್ರಧಾನಿಯಾಗದಿದ್ದರೆ ದೇಶದ ಪರಸ್ಥಿತಿ ಹೇಗಿರುತ್ತಿತ್ತು

0
8

ಸುರಪುರ: ಕೇಂದ್ರ ಸರಕಾರದ ಸಂವಹನ ಇಲಾಖೆ ಕಲಬುರ್ಗಿ ಧಾರವಾಡ ವತಿಯಿಂದ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ 5 ದಿನಗಳ ಕಾಲ ಹಮ್ಮಿಕೊಂಡಿರುವ ಛಾಯಾ ಚಿತ್ರ ಪ್ರದರ್ಶನ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ರಾಜುಗೌಡ ಮಾತನಾಡಿ,ಇಂದು ಈ ದೇಶದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರು ಇರದಿದ್ದರೆ ದೇಶದ ಪರಸ್ಥಿತಿ ಹೇಗಿರುತ್ತಿತ್ತು ಎಂದು ಯೋಚಿಸಬೇಕಿದೆ ಎಂದರು.ಉಕ್ರೇನ ರಷ್ಯ ಯುದ್ಧ ಮಾಡುವಾಗ ಎರಡೂ ದೇಶದ ಅಧ್ಯಕ್ಷರನ್ನು ಒಟ್ಟಾಗಿಸಿ ಮಾತನಾಡುವ ತಾಕತ್ತು ಕೇವಲ ನರೇಂದ್ರ ಮೋದಿಯವರಿಗಿದೆ.ಇಂದು ದೇಶದ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಕೊಡಬೇಕು ಎನ್ನುವ ಉದ್ದೇಶ ದಿಂದ ಜಲ ಜೀವನ ಮಿಷನ್ ಯೋಜನೆ ಜಾರಿಗೊಳಿಸಿ ಪ್ರತಿ ಗ್ರಾಮಕ್ಕೆ ಕುಡಿಯುವ ನೀರು ಒದಗಿಸುತ್ತಿದ್ದಾರೆ.ಅನೇಕ ಒಳ್ಳೆಯ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ದೇಶದ ಸಮಗ್ರ ಅಭಿವೃಧ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು.

Contact Your\'s Advertisement; 9902492681

ನಾನು ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಅಧ್ಯಕ್ಷನಾದ ಮೇಲೆ ಸುಮಾರು ಎಂಟು ನೂರು ಕೋಟಿ ರೂಪಾಯಿಗಳಷ್ಟು ಅನುದಾನ ತಂದು ಸುರಪುರ,ಶಹಾಪುರ,ಕೆಂಭಾವಿ,ಹುಣಸಗಿ ಹೀಗೆ ಎಲ್ಲಕಡೆಗೂ ಕುಡಿಯುವ ನೀರಿನ ಕಾಮಗಾರಿಗಳಿಗೆ ಬೇಕಾದಷ್ಟು ಅನುದಾನ ನೀಡುವ ಮೂಲಕ ಅಭಿವೃಧ್ಧಿ ಮಾಡುತ್ತಿರುವೆ,ಸುರಪುರ ನಗರಕ್ಕೆ 210 ಕೋಟಿ ರೂಪಾಯಿಗಳ ಅನುದಾನದಲ್ಲಿ ನೀರು ಸರಬರಾಜು ಕಾಮಗಾರಿ ಪೂರ್ಣಗೊಂಡಿದ್ದು ಇನ್ನು ಪ್ರತಿಶತ 10 ರಷ್ಟು ಕೆಲಸ ಉಳಿದಿದ್ದು ಶೀಘ್ರದಲ್ಲಿಯೇ ಕಾಮಗಾರಿ ಮುಗಿಸಿ ಪ್ರತಿ ಮನೆಗೆ 24 ಗಂಟೆ ಶುದ್ಧ ಕುಡಿಯುವ ನೀರು ಒದಗಿಸಲಾಗುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಅಧಿಕಾರಿ ಶೃತಿ ಎಸ್,ಚಿಂತಕ ಲಕ್ಷ್ಮೀಕಾಂತ ದೇವರಗೋನಾಲ ಮಾತನಾಡಿದರು.ನಂತರ ಕಾರ್ಯಕ್ರಮದ ಅಂಗವಾಗಿ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ಅಲ್ಲದೆ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.ಕಾರ್ಯಕ್ರಮದಲ್ಲಿ ನಡೆಸಲಾದ ಛಾಯಾ ಚಿತ್ರ ಪ್ರದರ್ಶನದಲ್ಲಿ ವಿವಿಧ ಶಾಲಾ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಭಾಗವಹಿಸಿ ಅಗತ್ಯ ಮಾಹಿತಿಗಳನ್ನು ವೀಕ್ಷಿಸಿ ನೋಟ್ ಮಾಡಿಕೊಂಡರು.ನಗರಸಭೆ ಅಧ್ಯಕ್ಷೆ ಸುಜಾತಾ ವಿ.ಜೇವರ್ಗಿ ಅಧ್ಯಕ್ಷತೆ ವಹಿಸಿದ್ದರು.

ಜಿ.ಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ),ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ,ನಗರಸಭೆ ಉಪಾಧ್ಯಕ್ಷ ಮಹೇಶ ಪಾಟೀಲ್,ಕ್ಷೇತ್ರ ಸಮನ್ವಯಾಧಿಕಾರಿ ಪಂಡೀತ ನಿಂಬೂರ,ಉಪನ್ಯಾಸಕ ಬಸರವರಾಜ ಇನಾಂದಾರ,ರಾಜಾ ರಂಗಪ್ಪ ನಾಯಕ ವೇದಿಕೆ ಮೇಲಿದ್ದರು.ಉಪನ್ಯಾಸಕ ಶರಣು ನಾಯಕ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.ಆರೋಗ್ಯ ಇಲಾಖೆ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳಿಂದ ಮಾಹಿತಿ ಮಳಿಗೆಯನ್ನು ತೆರೆಯಲಾಗಿತ್ತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here