ನಿಖಿಲ್ ಕುಮಾರಸ್ವಾಮಿ ರಾಜಕೀಯ ಭವಿಷ್ಯ ಜನರೇ ನಿರ್ಣಯಿಸುತ್ತಾರೆ: ಹೆಚ್.ಡಿ.ಕುಮಾರಸ್ವಾಮಿ

0
28

ಬೆಂಗಳೂರು: ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ರಾಜಕೀಯ ಭವಿಷ್ಯವನ್ನು ನನಗೆ ರಾಜಕೀಯವಾಗಿ ಜನ್ಮ ಕೊಟ್ಟ ಜನರೇ ತಿರ್ಮಾನ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು ರಾಮನಗರದಿಂದ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧೆ‌ ಮಾಡುತ್ತಾರೆಯೇ ಎನ್ನುವ ಪ್ರಶ್ನೆಗೆ ಮೇಲಿನಂತೆ ಉತ್ತರ ನೀಡಿದರು.

Contact Your\'s Advertisement; 9902492681

ನಿಖಿಲ್ ಕುಮಾರಸ್ವಾಮಿ ಅವರು ಈಗಾಗಲೇ ಸಕ್ರಿಯ ರಾಜಕಾರಣದಲ್ಲಿದ್ದಾರೆ. ಅವರ ಹೆಸರನ್ನು ಘೋಷಣೆ ಮಾಡುವುದಕ್ಕೆ ನನಗೆ ಯಾವುದೇ ಅಂಜಿಕೆ ಇಲ್ಲ. ನನಗೆ ನಿಖಿಲ್‌ ಅವರನ್ನು ಹೇಗಪ್ಪ ದಡ ಸೇರಿಸೋದು ಎಂಬ ಚಿಂತೆ ಇಲ್ಲ. ನನಗೆ ಇರೋದು ನಾಡಿನ ಜನರ ಚಿಂತೆ ಎಂದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here