ಬಿಸಿ ಬಿಸಿ ಸುದ್ದಿ

ಯಾಳಗಿಯಲ್ಲಿ ಗ್ರಾಮ ದೇವತೆ ಜಾತ್ರೆ

ಯಾದಗಿರಿ: ಸುರಪುರ ತಾಲೂಕಿನ ಯಾಳಗಿ ಗ್ರಾಮದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ಗ್ರಾಮ ದೇವತೆಯ ಜಾತ್ರೆ ಶುಕ್ರವಾರ ಅದ್ದೂರಿಯಾಗಿ ಜರುಗಿತು. ಬೆಳಗಿನ ಜಾವ ಸಕಲ ವಾದ್ಯ ಮೇಳಗಳ ಮೆರವಣಿಗೆಯಲ್ಲಿ ದೇವಿಯನ್ನು ಗಂಗಾಸ್ಥಳಕ್ಕೆ ಕರೆದುಕೊಂಡು ವಿಶೇಷ ಪೂಜೆ ನೆರವೇರಿಸಿ, ಅಭಿಷೇಕವನ್ನು ಮಾಡಿ, ಗ್ರಾಮ ದೇವತೆಯನ್ನು ಶೃಂಗಾರಗೋಳಿಸಿ ಸಕಲ ವಾದ್ಯ, ವೈಭವಗಳೊಂದಿಗೆ ಅಲಂಕೃತ ಭವ್ಯವಾದ ರಥದಲ್ಲಿ ಮೆರವಣಿಗೆ ಮೂಲಕ ಕರೆತರಲಾಯಿತು.

ಗ್ರಾಮದೇವತೆ ಶ್ರೀದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದಲ್ಲಿ ಹಬ್ಬದ ವಾತಾವರಣ ಕಂಡುಬಂದಿತು. ದೇವಸ್ಥಾನವನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು.

ಗ್ರಾಮದ ಭಕ್ತರು ದೇವಿಗೆ ಉಡಿ ತುಂಬುವ ಮೂಲಕ ಭಕ್ತಿ ಸಮರ್ಪಿಸಿದರು. ಯಾಳಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ‌ ವಿವಿಧ ಕಲಾ ತಂಡಗಳಿಂದ ಡೊಳ್ಳು ಕುಣಿತ, ಹಾಡಿಕೆ ಪದಗಳು ಹಾಗೂ ರಸಮಂಜರಿ ಕಾರ್ಯಕ್ರಮಗಳು ಜರುಗಿದವು. ಅಹೋರಾತ್ರಿ ನಡೆದ ಡೊಳ್ಳು ಕುಣಿತ ಎಲ್ಲರ ಮೆಚ್ಚುಗೆ ಗಳಿಸಿತು. ಅದೇ ದಿನ ರಾತ್ರಿ ಬೈಲಾಟವನ್ನು ಕೂಡ ಹಮ್ಮಿಕೊಳ್ಳಲಾಗಿದೆ.

emedialine

Recent Posts

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

49 mins ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

52 mins ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

56 mins ago

ಕನ್ನಡ ದೀಪೋತ್ಸವ: ವಿಜಯೀಭವ ಕೃತಿ ಜನಾರ್ಪಣೆ 24 ರಂದು

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…

1 hour ago

ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಿಂದ ವಿಭಾಗಿಯ ಮಟ್ಟಕ್ಕೆ ಆಯ್ಕೆ

ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…

1 hour ago

ಅಭಿವೃದ್ಧಿ ಪರ ಚಿಂತನೆಯಳ್ಳ ಪ್ರಬುದ್ದ ರಾಜಕಾರಣಿ ಪ್ರಿಯಾಂಕ್ ಖರ್ಗೆ

ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…

1 hour ago