ಕಲಬುರಗಿ: ಜಿಲ್ಲೆ ಕಾಳಗಿ ತಾಲೂಕಿನ ರೈತರು ಬೆಳೆದ ತೊಗರಿ ಬೆಳೆ ನೆಟೆ ರೋಗಕ್ಕೆ ತುತ್ತಾಗಿ ಸಂಪೂರ್ಣ ನಾಶವಾಗಿದ್ದು, ಪ್ರತಿ ಎಕರೆಗೆ ಇಪ್ಪತುಸಾವಿರ ರೂಪಾರಿ ಪರಿಹಾರ ಧನ ನೀಡಬೇಕೆಂದು,ಹಾಗೂ ರೈತರ ವಿವಿಧ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾಳಗಿ ತಾಲೂಕ ವತಿಯಿಂದ ಕಾಳಗಿ ಬಸ್ ನಿಲ್ದಾಣದಿಂದ ಅಂಬೇಡ್ಕರ್ ವೃತ್ತದ ವರೆಗೆ ಬೃಹತ್ ಮಟ್ಟದ ಹೋರಾಟ ಹಮ್ಮಿಕೊಂಡು, ಸಂವಿಧಾನ ಶಿಲ್ಪಿ ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಲಾರ್ಪಣೆ ಮಾಡುವ ಮೂಲಕ, ತಹಸೀಲ್ದಾರರು ಮುಖಾಂತರ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಶಾಂವೀರಪ್ಪ ಪೊಲೀಸ್ ಪಾಟೀಲ್, ಜಿಲ್ಲಾ ಕಾರ್ಯಧ್ಯಕ್ಷರಾದ ಸಿದ್ರಾಮ ಪಾಟೀಲ್ ಮಂಗಲಗಿ, ಕಾಳಗಿ ತಾಲೂಕಾ ಅಧ್ಯಕ್ಷರಾದ ಅಮರಾನಾಥ ಸೂರ್ಯವಂಶಿ, ಸೇರಿದಂತೆ ಅನೇಕ ರೈತ ಮುಖಂಡರು ಹಾಗೂ ತಾಲೂಕಿನ ವಿವಿಧ ಗ್ರಾಮಗಳ ರೈತರು ಹೋರಾಟದಲ್ಲಿ ಭಾಗವಹಿಸಿದರು.