ಬಿಸಿ ಬಿಸಿ ಸುದ್ದಿ

ನೇಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ನೇಕಾರರ ಮಕ್ಕಳ ವಿದ್ಯಾನಿಧಿ ಯೋಜನೆಗೆ 46 ಸಾವಿರ ನೇಕಾರ ಕುಟುಂಬಗಳ ವಿದ್ಯಾರ್ಥಿಗಳಿಗೆ ಗುರುತಿಸಲಾಗಿದ್ದು, ಶೀಘ್ರವಾಗಿ ವಿದ್ಯಾನಿಧಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಡಿಬಿಟಿ ಮೂಲಕ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿ ಮಾತನಾಡಿದ ಸನ್ಮಾನ್ಯ ಮುಖ್ಯಮಂತ್ರಿಗಳು 46 ಸಾವಿರ ನೇಕಾರ ಕುಟುಂಬದ ವಿದ್ಯಾರ್ಥಿಗಳ ದಾಖಲೆಗಳನ್ನು ಹದಿನೈದು ದಿನದೊಳಗೆ ಪಡೆದು  ಪಟ್ಟಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ವಿದ್ಯಾರ್ಥಿಗಳಿಗೆ ಕೂಡಲೇ ವಿದ್ಯಾನಿಧಿಯನ್ನು  ಬಿಡುಗಡೆ ಮಾಡುವುದಾಗಿ ಹಾಗೂ ಮಕ್ಕಳಿಂದ ಯಾವುದೇ ರೀತಿಯ ಅರ್ಜಿಯನ್ನು ಪಡೆಯುವುದಿಲ್ಲ. ವಿದ್ಯಾನಿಧಿ ಮಕ್ಕಳ ಹಕ್ಕು ಎಂದು ತಿಳಿಸಿದರು.

ನೇಕಾರರ ಕಸುಬನ್ನು ಉನ್ನತೀಕರಿಸಿ ಉಳಿಸುವುದು ಬಹಳ ಮುಖ್ಯ. ಬಹಳ ಗಂಟೆಗಳ ಕಾಲ ಹತ್ತಿಯ ಮಧ್ಯೆಯೆ ಕೆಲಸ ಮಾಡಬೇಕಾಗುವುದರಿಂದ ನೇಕಾರರಿಗೆ ಅಸ್ತಮಾ, ಟಿ ಬಿ ಯಂತಹ ಸಮಸ್ಯೆಗಳು ಕಾಡುತ್ತವೆ. ಆದ್ದರಿಂದ ಕೈಮಗ್ಗ ನೇಕಾರರ ಕಾಳಜಿ ವಹಿಸಲು ನೇಕಾರ ಸಮ್ಮಾನ್ ಯೋಜನೆ ಯಡಿ 2000 ರೂ.ಗಳ ಆರ್ಥಿಕ ನೆರವನ್ನು 5000 ರೂ.ಗಳಿಗೆ ಹೆಚ್ಚಿಸಲಾಗಿದೆ.  ಅವರ ಹತ್ತು ಹಲವಾರು ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ನಾಳೆ ವಿದ್ಯುತ್ಛಕ್ತಿ ಅಧಿಕಾರಿಗಳು ಮತ್ತು ಸಚಿವರೊಂದಿಗೆ ಸಭೆ ನಡೆಸಲಾಗುತ್ತಿದೆ. ಕೈಮಗ್ಗ ನೇಕಾರರಿಗೆ ಸಾಲ ಹಾಗೂ ಬಡ್ಡಿಮನ್ನಾ ಯೋಜನೆಗಳನ್ನು ಜಾರಿಯಲ್ಲಿವೆ. ನೇಕಾರರನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಲು ಕಾಯಕ ಯೋಜನೆಯಡಿ ಪ್ರತಿ ಕುಶಲಕರ್ಮಿಗೆ 50 ಸಾವಿರ ವರೆಗೆ ಧನಸಹಾಯ ನೀಡಲಾಗುತ್ತಿದೆ ಎಂದರು.

ನೇಕಾರ ಸಮ್ಮಾನ್ ಯೋಜನೆಯಡಿ 46,864 ಫಲಾನುಭವಿಗಳಿಗೆ 5000 ರೂ.ಗಳ ಆರ್ಥಿಕ ನೆರವನ್ನು ನೀಡಲಾಗುತ್ತಿದ್ದು, ಒಟ್ಟು 23.43 ಕೋಟಿ ರೂ.ಗಳು ನೇರವಾಗಿ ನೇಕಾರರ ಬ್ಯಾಂಕ್ ಖಾತೆಗೆ ವರ್ಗಾವಣೆಗೆ ಇಂದು ಚಾಲನೆ ನೀಡಲಾಗಿದೆ ಎಂದರು.

ಅತಿ ಹೆಚ್ಚು ಉದ್ಯೋಗವನ್ನು ಸೃಷ್ಟಿ ಮಾಡಿದ್ದು ನೇಕಾರ ವೃತ್ತಿ. ಸ್ವಾತಂತ್ರ್ಯ ಹೋರಾಟವನ್ನು ಗಟ್ಟಿಗೊಳಿಸಿದ್ದು ನೇಕಾರರು. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಸ್ವದೇಶಿ ಉಡುಪುಗಳನ್ನೇ ಧರಿಸಬೇಕೆಂಬ ಗುರಿ ಸಾಧಿಸಲು ನೇಕಾರರು ಮಹತ್ವದ ಪಾತ್ರ ವಹಿಸಿದ್ದರು. ಸ್ವಾತಂತ್ರ್ಯ ದೊರೆತ ನಂತರ ಜವಳಿ ಉದ್ಯಮ ಬೆಳೆದಿರದಿದ್ದ ಸಂದರ್ಭದಲ್ಲಿ ದೇಶದಲ್ಲಿ ನೇಕಾರರ ಕೊಡುಗೆ ಮಹತ್ತರವಾದ ಸ್ಥಾನಮಾನವಿದೆ. ನೇಕಾರಿಕೆ ಎಂಬುದು ಕಲಾಕೌಶಲ್ಯವನ್ನೊಳಗೊಂಡ ವೃತ್ತಿ. ವಂಶಪಾರಂಪರ್ಯವಾಗಿ ಬಂದ ಕರಕುಶಲ ಕಲೆಯನ್ನು ಇಂದಿಗೂ ಪೆÇೀಷಿಸಿಕೊಂಡು ಬಂದಿದ್ದಾರೆ. ಈಗ ತಂತ್ರಜ್ಞಾನವನ್ನು ಬಳಸಿಕೊಂಡು ಅದ್ಭುತವಾದ ಕೌಶಲ್ಯವನ್ನು ತಮ್ಮ ವೃತ್ತಿಯಲ್ಲಿ ಪ್ರದರ್ಶಿಸುತ್ತಾರೆ. ತಂತ್ರಜ್ಞಾನ ಬದಲಾವಣೆಯಿಂದ ಜವಳಿ ಉದ್ಯಮೂ ಸಾಕಷ್ಟು ಬದಲಾವಣೆಗಳನ್ನು ಕಂಡಿದೆ ಎಂದರು.

ಈ ಸಂದರ್ಭದಲ್ಲಿ ಸಕ್ಕರೆ ಜವಳಿ ಮತ್ತು ಕೈಮಗ್ಗ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕಿ ಪೂರ್ಣಿಮಾ ಹಾಗೂ ಇಲಾಖೆ ಅಧಿಕಾರಿಗಳು  ಉಪಸ್ಥಿತರಿದ್ದರು.

emedialine

Recent Posts

ಮಕ್ಕಳ ಸೃಜನಶೀಲತೆ ಅನಾವರಣಗೊಳಿಸಿದ ಮಣ್ಣೆತ್ತಿನ ಸ್ಪರ್ಧೆ

ರಾವೂರ: ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಮಣ್ಣೆತ್ತಿನ ಸ್ಪರ್ಧೆಯ ಅಂಗವಾಗಿ ಹಮ್ಮಿಕೊಂಡಿದ್ದ ಮಣ್ಣೇತ್ತು ಮಾಡುವ ಸ್ಪರ್ಧೆಯಲ್ಲಿ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡು…

2 hours ago

ವಾಡಿ: ಕುಸ್ತಿ ಪಂದ್ಯಾವಳಿ: 50ಗ್ರಾಂ.ಬೆಳ್ಳಿ ಕಡಗ ವಿಜೇತ ಮಂಜುನಾಥ

ಇಂಗಳಗಿ ಹಜರತ್ ಸೈಯದ್ ಶೇರ್.ಖಾನ್.ವಲಿ ದುರ್ಗಾದ 621ನೇ ಜಾತ್ರಾ ಮಹೋತ್ಸವ ವಾಡಿ: ಪಟ್ಟಣ ಸಮೀಪದ ಇಂಗಳಗಿ ಗ್ರಾಮದ ಹಜರತ್ ಸೈಯದ್…

2 hours ago

ಹಿರಿಯ ನಾಗರಿಕರ ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ ಅಗತ್ಯ: ಅರ್ಥಶಾಸ್ತ್ರಜ್ಞ ವಿಜಯ್ ದೇಶಮುಖ್

ಕಲಬುರಗಿ: ದೇಶದ ಹಿರಿಯ ನಾಗರಿಕರನ್ನು ರಾಷ್ಟ್ರೀಯ ಸಂಪತ್ತು ಎಂದು ಘೋಷಿಸಿ ಅವರ ಕಲ್ಯಾಣಕ್ಕಾಗಿ ಕೇಂದ್ರ ಸರಕಾರವು ಹಿರಿಯ ನಾಗರಿಕರ ಸಚಿವಾಲಯವನ್ನು…

5 hours ago

ಪ್ರಣವ್ ಮೆಂಡನ್ ಫಿಸಿಯೋಥೆರಪಿ ಪದವಿ ಪ್ರದಾನ

ಕಲಬುರಗಿ : ಜಿಲ್ಲಾ ಹೋಟೆಲ್ ಅಸೋಸಿಯೇಷನ್ ನ ಕಾರ್ಯದರ್ಶಿ ಹಾಗೂ ವಿಮಾನ ನಿಲ್ದಾಣ ಪ್ರಾಧಿಕಾರದ ಸದಸ್ಯರಾದ ನರಸಿಂಹ ಮೆಂಡನ್ ಅವರ…

5 hours ago

ಕನ್ನಡ ಸಾಹಿತ್ಯಕ್ಕೆ ಕಮಲ ಹಂಪನಾ ಕೊಡುಗೆ ಅಪಾರ: ಹಣಮಂತ್ರಾಯ ಕಾಳನೂರ

ಯಾದಗಿರಿ : ಆಧುನಿಕ ಸಾಹಿತ್ಯದ ಪ್ರಕಾರಗಳಾದ ನವ್ಯ,ನವೋದಯ,ಪ್ರಗತಿಶೀಲ,ದಲಿತ ಬಂಡಾಯದ ಕಾವ್ಯ,ಕಥೆ,ಕಾದಂಬರಿ ಹಾಗೂ ನಾಟಕ ಮುಂತಾದ ಪ್ರಕಾರಗಳಲ್ಲಿ ಸ್ತ್ರೀ ಸಂವೇದನೆಗೆ ವಿಶೇಷವಾದ…

6 hours ago

ನಾಡೋಜ ಪಾಟೀಲ್ ಪುಟ್ಟಪ್ಪ ಸ್ಮಾರಕ ಮಾಧ್ಯಮ ಪ್ರಶಸ್ತಿ ಪ್ರದಾನ: ಜುಲೈ 7ರಂದು

ಬೆಂಗಳೂರು: ಜಗತ್ತಿನ ಪ್ರಚಲಿತ ವಿದ್ಯಮಾನಗಳ ಮಾಹಿತಿ ನೀಡುವ ಪತ್ರಕರ್ತರು ಹಗಲುರಾತ್ರಿ ಎನ್ನದೇ ಕಷ್ಟವಾದರೂ ಇಷ್ಟಪಟ್ಟು ವರದಿ ಮಾಡುವ ಮಾಧ್ಯಮ ಮಿತ್ರರಿಗೆ,…

10 hours ago