ಬಿಸಿ ಬಿಸಿ ಸುದ್ದಿ

17ನೇ ಶಕ್ತಿ ಸಂಭ್ರಮ ಅಂತರ್ ಕಾಲೇಜು ಮಹಿಳಾ ಯುವಜನೋತ್ಸವ

ಕಲಬುರಗಿ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ  17ನೇ ಶಕ್ತಿ ಸಂಭ್ರಮ ಅಂತರ್ ಕಾಲೇಜು ಮಹಿಳಾ ಯುವಜನೋತ್ಸವ 12 ರಿಂದ 14ರ ವರೆಗೆ ಬಾಗಲಕೋಟದ ಅಕ್ಕಮಹಾದೇವಿ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಲಯದಲ್ಲಿ ಜರುಗಿತು.

ಈ ಉತ್ಸವದಲ್ಲಿ ರಾಜ್ಯದ 32 ಕಾಲೇಜುಗಳು ಭಾಗವಹಿಸಿದ್ದವು. ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಿಂದ ವಿವಿಧ ಸ್ಪರ್ಧೆಯಲ್ಲಿ 25 ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ಪಾಶ್ಚಾತ್ಯ ಸಂಗೀತದಲ್ಲಿ ತೃತೀಯ ಬಹುಮಾನ,ಸಾಮೂಹಿಕ ನೃತ್ಯದಲ್ಲಿ ದ್ವಿತೀಯ ಬಹುಮಾನ,ಮಿಮಿಕ್ರಿಯಲ್ಲಿ ತೃತೀಯ ಬಹುಮಾನ, ನಾಟಕದಲ್ಲಿ ಪ್ರಥಮ ಬಹುಮಾನ ಮತ್ತು ಪೇಂಟಿಂಗ್ ನಲ್ಲಿ ತೃತೀಯ ಬಹುಮಾನ ಪಡೆದಿದ್ದಾರೆ.ಥೇಟರ್ ಇವಂಟ್ ನಲ್ಲಿ ರನ್ನಪ್ಪ ವಿಜೇತರಾಗಿದ್ದಾರೆ.

ವಿದ್ಯಾರ್ಥಿ ಸಂಘದ ಸಲಹೆಗಾರರಾದ  ಉಮಾ ರೇವೂರ ಅವರ ಮಾರ್ಗದರ್ಶನ ಮಾಡಿದ್ದರು, ಡಾ.ಮಹೇಶ ಗಂವಾರ, ಡಾ.ಪ್ರೇಮಚಂದ ಚವ್ಹಾಣ, ಡಾ.ರೇಣುಕಾ ಹೆಚ್, ಡಾ.ಮುಖಿಮ್ ಮಿಯಾ, ಉಮಾ ಪಾಟೀಲ್, ಶುಷ್ಮಾ ಕುಲಕರ್ಣಿ ಇವರು ಸಹಕರಿಸಿದ್ದರು.

ಶಕ್ತಿ ಸಂಭ್ರಮದಲ್ಲಿ ಭಾಗವಹಿಸಿ ಬಹುಮಾನ ಪಡೆದ ವಿದ್ಯಾರ್ಥಿನಿಯರನ್ನು ಹೈದ್ರಾಬಾದ  ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಸೋಮನಾಥ ಸಿ.ನಿಗ್ಗುಡಗಿ ಮತ್ತು ಕಾಲೇಜಿನ ಪ್ರಾಂಶುಪಾಲರಾದ ಡಾ.ರಾಜೇಂದ್ರ ಬಿ.ಕೊಂಡಾ ಅವರು ವಿಜೇತ ವಿದ್ಯಾರ್ಥಿನಿಯರನ್ನು ಬರಮಾಡಿಕೊಂಡು  ಅವರನ್ನು  ಮೆಚ್ಚುಗೆಯ ಮಾತನಾಡಿ ಗೌರವಿಸಿದರು.

ವಿದ್ಯಾರ್ಥಿನಿಯರ ಸಾಧನೆ ಕಂಡು  ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಭೀಮಾಶಂಕರ ಸಿ.ಬಿಲಗುಂದಿಯವರು ಅಭಿನಂದಿಸಿದ್ದಾರೆ.

emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

47 mins ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

55 mins ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

3 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

3 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

3 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

4 hours ago