ಶಹಾಬಾದ: ಕಳೆದ ಹಲವು ದಶಕಗಳಿಂದ ಗ್ರಾಮಲೆಕ್ಕಾಧಿಕಾರಿಗಳಿಂದೇ ಕರೆಯಲ್ಪಡುತ್ತಿದ್ದ ಗ್ರಾಮಲೆಕ್ಕಾಧಿ ಕಾರಿಗಳನ್ನು ಇನ್ನು ಮುಂದೆ ಗ್ರಾಮ ಆಡಳಿತಾಧಿಕಾರಿ ಎಂದು ಸರಕಾರ ಪದನಾಮ ಬದಲಾಯಿಸಿರುವುದು ಸ್ವಾಗತಾರ್ಹವಾಗಿದೆ ಎಂದು ಗ್ರಾಮ Áಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಹಣಮಂತರಾವ ಪಾಟೀಲ ತಿಳಿಸಿದರು.
ಪರ್ತಕರ್ತರೊಂದಿಗೆ ಮಾತನಾಡಿ, ಗ್ರಾಮಲೆಕ್ಕಾಧಿಕಾರಿಗಳ ಬಹುದಿನಗಳ ಬೇಡಿಕೆಯನ್ನು ಕಂದಾಯ ಸಚಿವ ಆರ್.ಅಶೋಕ್ ಹಾಗೂ ಸರ್ಕಾರ ಗಣನೆಗೆ ತೆಗೆದುಕೊಂಡು ಇನ್ನು ಮುಂದೆ ಗ್ರಾಮಲೆಕ್ಕಾಧಿಕಾರಿಗಳನ್ನು ಗ್ರಾಮ ಆಡಳಿತಾಧಿಕಾರಿಗಳು ಎಂದು ಬದಲಾಯಿಸಿ ಆದೇಶ ಹೊರಡಿಸಿರುವುದು ಎಲ್ಲಾ ಗ್ರಾಮಲೆಕ್ಕಾಧಿಕಾರಿಗಳಿಗೆ ಸಂತಸ ತಂದಿದೆ ಎಂದರು.
ನಮ್ಮ ಇನ್ನು ಹಲವಾರು ಬೇಡಿಕೆಗಳಿದ್ದು, ಅವುಗಳನ್ನು ಬೆಳಗಾವಿಯಲ್ಲಿ ನಡೆಯುವ ವಿಧಾನಸಭಾ ಅಧಿವೇಷನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ಸರ್ಕಾ ರದ ಮುಖ್ಯ ಕಾರ್ಯದರ್ಶಿಗಳಿಗೆ, ಕಂದಾಯ ಇಲಾಖೆ ಕಾರ್ಯದರ್ಶಿಗಳಿಗೆ ಸಂಘದ ರಾಜ್ಯಾಧ್ಯಕ್ಷರು ಹಾಗೂ ಪದಾಧಿಕಾರಿಗಳ ಮೂಲಕ ಸಲ್ಲಿಸಲಾಗುವುದು ಎಂದರು.
ರಾಜ್ಯದ ಗ್ರಾಮಲೆಕ್ಕಾಧಿಕಾರಿಗಳ ಸಮಸ್ಯೆಗಳ ಮತ್ತು ಬೇಡಿಕೆಗಳ ಈಡೇರಿಕೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಸಂಘದ ರಾಜ್ಯಾಧ್ಯಕ್ಷ ದೊಡ್ಡಬಸಪ್ಪರೆಡ್ಡಿ ಮತ್ತು ಪದಾಧಿಕಾರಿಗಳಿಗೆ ಶಹಾಬಾದ ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಅಭಿನಂದಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಶ್ರೀಮಂತ.ಎಚ್.ಆರ್, ಖಜಾಂಚಿ ಶಿವಾನಂದ ಹೂಗಾರ,ಉಪಾಧ್ಯಕ್ಷ ಜಾನ್ ಜಾರ್ಜ, ಜಿಲ್ಲಾ ಪರಿಷತ್ ಸದಸ್ಯ ಇಮ್ರಾನ್.ಟಿ. ತಾವರಗೆರೆ, ಗೌರವಾಧ್ಯಕ್ಷ ರೇವಣಸಿದ್ದಪ್ಪ ಪಾಟೀಲ,ಸಂಸ್ಕøತಿ ಮತ್ತು ಕ್ರೀಡಾ ಕಾರ್ಯದರ್ಶಿ ಮಹ್ಮದ್ ಬಿಲಾಲ್, ಮಹಿಳಾ ಪದಾಧಿಕಾರಿ ಪಾರ್ವತಿ ಇತರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…