ಬಿಸಿ ಬಿಸಿ ಸುದ್ದಿ

ಮದರ್ ತೆರೆಸಾ ಶಾಲೆಯಲ್ಲಿ ಗಣಿತ ವಸ್ತು ಪ್ರದರ್ಶನ

ಕಲಬುರಗಿ: ನಗರದ ಗೋದುತಾಯಿ ನಗರದಲ್ಲಿರುವ ಮದರ್ ತೆರೆಸಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಖ್ಯಾತ ಗಣಿತಜ್ಞ ಶ್ರೀನಿವಾಸ ರಾಮಾನುಜನ್ ಅವರ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಗಣಿತ ದಿನಾಚರಣೆ ಆಯೋಜಿಸಲಾಯಿತು. ಶನಿವಾರ 17, ಹಾಗೂ 18 ರವಿವಾರ ಗಣಿತ ವಸ್ತು ಪ್ರದರ್ಶನ ನಡೆಯಲಿದೆ.

ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಯುವರಾಜ್ ಗಾಡಿ ಉದ್ಘಾಟಿಸಿ ಮಾತನಾಡುತ್ತಾ ಮಕ್ಕಳು ಸ್ವಯಂ ಪ್ರೇರಣೆಯಿಮದ ಗಣಿತದ ಚಟುವಟಿಕೆಗಳಲ್ಲಿ ಆಸಕ್ತಿಯುತವಾಗಿ ತಮ್ಮನು ತಾವು ತೊಡಗಿಸಿಕೊಂಡಿರುವುದು ಬಹಳ ಸಂತಸದ ವಿಷಯ ಎಂದು ವ್ಯಕ್ತಪಡಿಸಿದರು.

ಮುಖ್ಯಗುರು ಎನ್.ಎಸ್ ಮಠ ಇವರು ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ರಾಮಾನುಜನ್ ಅಡಗಿರುತ್ತಾನೆ ಮಕ್ಕಳ ಪ್ರತಿಭೆಗಳನ್ನು ಹೊರಹಾಕಲು ಈ ಗಣಿತ ವಸ್ತು ಪ್ರದರ್ಶನ ಸೂಕ್ತ ವೇದಿಕೆಯಾಗಿದೆ ಎಂದು ಹೇಳಿದರು.

ಗಣಿತ ಶಿಕ್ಷಕ ವಿಶ್ವನಾಥ ಕಟ್ಟಿಮನಿ ಮಾತನಾಡಿ “ಗಣಿತ ವಿಷಯ ಎಲ್ಲಾ ವಿಷಯಗಳ ತಂದೆ ಎಂದು ಉದಾಹರಣೆಗಳೊಂದಿಗೆ ಮಕ್ಕಳಿಗೆ ಮಾಹಿತಿ ನೀಡಿದರು.

ಗಣಿತ ವಸ್ತು ಪ್ರದರ್ಶನವನ್ನು ವಿಕ್ಷೀಸಲು ಸಾರ್ವಜನಿಕರಿಗೆ ಮುಕ್ತವಾಗಿ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಅಪಾರ ಸಂಖ್ಯೆಯಲ್ಲಿ ಗಣಿತ ವಸ್ತು ಪ್ರದರ್ಶನವನ್ನು ವಿಕ್ಷೀಸಲು ಮಹಿಳೆಯರು, ಬೇರೆ ಬೇರೆ ಶಾಲೆಯಿಂದ ಮಕ್ಕಳು ಹಾಗೂ ಪೋಷಕರು, ವಿಷಯ ತಜ್ಞರು ಆಗಮಿಸಿ ಮಕ್ಕಳು ಮಾಡಿದ ಮಾಡಲ್‍ಗಳನ್ನು ನೋಡಿ ಮೂಕ ವಿಸ್ಮಿತರಾಗಿ ಮಕ್ಕಳಲ್ಲಿರುವ ಪ್ರತಿಭೆಗೆ ತುಂಬು ಮನಸ್ಸಿನಿಂದ ಪ್ರಶಂಶಿಸಿದರು.

ಆಡಳಿತ ಮಂಡಳಿಯ ಬಸವರಾಜ ಭೀಮಳ್ಳಿ, ಅಧ್ಯಕ್ಷರು ಹಾಗೂ ಶಾಸಕ ಎಂ.ವಾಯ್. ಪಾಟೀಲ್, ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿಗಳಾದ ಶಿವಪುತ್ರಪ್ಪ ಡೆಂಕಿ ಅವರು ಗಣಿತ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿದ ಎಲ್ಲ ಮಕ್ಕಳಿಗೆ ಶುಭ ಕೋರಿದರು.
ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ನಾಗೇಂದ್ರ ಎಂ ಬಡಿಗೇರ್, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

emedialine

Recent Posts

ಯತ್ನಾಳ ಹೋರಾಟಕ್ಕೆ ಬೆಂಬಲವಿಲ್ಲ : ಆನಂದ ಕಣಸೂರ

ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…

2 mins ago

ವಕ್ಫ್ ಮಸೂದೆ ತಿದ್ದುಪಡಿಗೆ ಮುಸ್ಲೀಮ ವೈಯಕ್ತಿಕ ಕಾನೂನು ಮಂಡಳಿ ವಿರೋಧ

ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…

14 mins ago

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

23 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago