ಬಿಸಿ ಬಿಸಿ ಸುದ್ದಿ

ಶರಣರ ಜಾನಪದ ಗಾಯನ ಮತ್ತು ಭಾಷಣ ಸ್ಪರ್ಧೆ ಉದ್ಘಾಟನೆ

ಭಾಲ್ಕಿ: ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರ 133ನೇ ಜಯಂತ್ಯುತ್ಸವ ಭಾಗವಾಗಿ ಬಸವಾದಿ ಶರಣರ ವಿಷಯ ಕುರಿತಾದ ಲಿಂಗೈಕ್ಯ ಎಸ್.ಎಸ್.ತರಡಿ ಪ್ರಾಯೋಜಿತ ಜಾನಪದ ಗಾಯನ ಸ್ಪರ್ಧೆ ಮತ್ತು ಪೂಜ್ಯ ಶ್ರೀ ಡಾ.ಚನ್ನಬಸವ ಪಟ್ಟದ್ದೇವರ ಜೀವನ ಸಾಧನೆ ಕುರಿತಾದ ಭಾಷಣ ಸ್ಪರ್ಧೆ ರವಿವಾರರಂದು ಹಿರೇಮಠ ಸಂಸ್ಥಾನ ಭಾಲ್ಕಿಯಲ್ಲಿ ಏರ್ಪಡಿಸಲಾಗಿತ್ತು. ಸ್ಪರ್ಧೆಯ ಉದ್ಘಾಟನಾ ಸಮಾರಂಭದ ದಿವ್ಯಸನ್ನಿಧಾನ ಪೂಜ್ಯ ಶ್ರೀ ಬಸವಲಿಂಗ ಪಟ್ಟದ್ದೇವರು ವಹಿಸಿ, ಜಾನಪದ ನಮ್ಮ ನೆಲಮೂಲ ಸಂಸ್ಕøತಿಯ ಕನ್ನಡಿಯಾಗಿದೆ.

ಮಕ್ಕಳಲ್ಲಿ ಜಾನಪದ ಸಂಸ್ಕøತಿಯ ಪ್ರಜ್ಞೆ ಹೆಚ್ಚಾಗಬೇಕು. ಈ ವಯಸ್ಸಿನಲ್ಲಿ ನಾವು ಯಾವ ಚಿಂತನೆಗಳನ್ನು ಮಾಡುತ್ತೇವೆಯೊ ಅದನ್ನೆ ನಮ್ಮ ಜೀವನದುದ್ದಗಲಕ್ಕೂ ಇರುತ್ತವೆ. ಅದಕ್ಕಾಗಿ ನಮ್ಮ ವ್ಯಕ್ತಿತ್ವದ ಸರ್ವಾಂಗೀಣ ವಿಕಸನಕ್ಕೆ ಇಂತಹ ಸ್ಪರ್ಧೆಗಳು ಪೂರಕವಾಗಿರುತ್ತವೆ ಎಂದು ಆಶೀರ್ವದಿಸಿದರು. ಪೂಜ್ಯ ಶ್ರೀ ಗುರುಬಸವ ಪಟ್ಟದ್ದೇವರು ಮಕ್ಕಳಲ್ಲಿ ಸಂಸ್ಕಾರ ತಂದೆ ತಾಯಿಯ ಕುರಿತು ಗೌರವ ಹೆಚ್ಚಾಗಬೇಕು. ಶಿಕ್ಷಣದ ಜೊತೆ ಸಂಸ್ಕಾರವು ಬಹಳ ಪ್ರಮುಖ ಎನಿಸುತ್ತದೆ. ಮಾನವೀಯ ಮೌಲ್ಯಗಳು ಅಳವಡಿಸಿಕೊಂಡರೆ ನಮ್ಮ ಜೀವನ ಸುಖಿಯಾಗುತ್ತದೆ. ಅದಕ್ಕಾಗಿಯೇ ಇಂತಹ ಸ್ಪರ್ಧೆಗಳು ಆಯೋಜಿಸಲಾಗುತ್ತವೆ ಎಂದು ನುಡಿದರು. ಪೂಜ್ಯ ಶ್ರೀ ಶ್ರೀದೇವಿತಾಯಿ ಜಮಖಂಡಿ ಅವರು ಸಮ್ಮುಖ ವಹಿಸಿದ್ದರು.

ಡಾ.ಸಂಜುಕುಮಾರ ಜುಮ್ಮಾ ಅವರಿಂದ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು. ಶರಣ ಬಂಡೆಪ್ಪ ಎಂ. ಅಧ್ಯಕ್ಷತೆ ವಹಿಸಿದ್ದರು. ಶರಣ ಸಿಖರೇಶ್ವರ ಶೆಟಕಾರ ಅವರಿಂದ ಬಸವಗುರುಪೂಜೆ ನೆರವೇರಿಯಿತು. ವಸಂತ ಹುಣಸನಾಳೆ, ಡಾ.ಎಂ.ಮಕ್ತಂಬಿ, ಶ್ರೀದೇವಿ ವಿಜಯಕುಮಾರ ಪಾಟೀಲ, ವೀರಣ್ಣ ಕುಂಬಾರ, ಹಣಮಂತಪ್ಪ ಚಿದ್ರಿ, ಶಾಂತಯ್ಯ ಸ್ವಾಮಿ, ರಾಮಚಂದ್ರ ಯರನಾಳೆ ಮುಂತಾದವರು  ನಿರ್ಣಾಯಕರಾಗಿದ್ದರು. ಶರಣ ಕಿರಣ ಖಂಡ್ರೆ, ವಿಶ್ವನಾಥ ಹುಗ್ಗೆ, ಮುಂತಾದವರು ಉಪಸ್ಥತರಿದ್ದರು. ದೀಪಕ ಥಮಕೆ ನಿರೂಪಿಸಿದರು. ಯಲ್ಲನಗೌಡ ಬಾಗಲಕೋಟ ವಚನ ಸಂಗೀತ ನಡೆಸಿದರು.

emedialine

Recent Posts

ಎಂ.ಎಸ್ ಇರಾಣಿ ವಿದ್ಯಾರ್ಥಿಗೆ ದ್ವೀತಿಯ ಸ್ಥಾನ

ಕಲಬುರಗಿ: ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸರ್ಕಾರಿ ಪದವಿ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಹಾನಗರ ಪಾಲಿಕೆ,ಸಮಾಜ ಕಲ್ಯಾಣ ಇಲಾಖೆ, ಕನ್ನಡ…

5 hours ago

ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮ

ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿ ಹಾಗೂ ಸಿ.ಆರ್.ಸಿ ಸ್ನೇಹ ಬಳಗ ಕಲಬುರಗಿ ಮತ್ತು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ…

5 hours ago

ಸ್ಲಂ ಜನಾಂದೋಲನ ಜಿಲ್ಲಾ ಘಟಕದಿಂದ ಹಕ್ಕು ಪತ್ರ ನೊಂದಣಿ ಖಾತ ಪ್ರತಿ ವಿತರಣೆ

ಕಲಬುರಗಿ: ಸುವರ್ಣ ಭವನ (ಕನ್ನಡ ಭವನ)ದಲ್ಲಿ  ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ  ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ…

5 hours ago

ಸಂವಿಧಾನ ದಿನಾಚರಣೆ

ಕಲಬುರಗಿ : ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿಯಲ್ಲಿ ಎನ್.ಎಸ್.ಎಸ್, ರೆಡ್‍ಕ್ರಾಸ್, ಸ್ಕೌಟ್ಸ್ ಆಂಡ್ ಗೈಡ್ಸ್, ಐ.ಕ್ಯೂ.ಎ.ಸಿ ಮತ್ತು ಸಾಂಸ್ಕøತಿಕ ಘಟಕಗಳ…

5 hours ago

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಪೆÇೀಲೀಸ್ ಇಲಾಖೆಗೆ ಅಭಿನಂದನೆ

ಕಲಬುರಗಿ; ಶಿಶು ಮಗುವಿಗೆ ಅಪಹರಣಕಾರರನ್ನು ಬಂಧಿಸಿದ ಕಲಬುರಗಿ ಪೆÇೀಲೀಸ್ ಇಲಾಖೆಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಅಭಿನಂದನೆ ವ್ಯಕ್ತಪಡಿಸಿದೆ.…

5 hours ago

ಲೋಕೋಪಯೋಗಿ ಕಚೇರಿ ಮುಂದೆ ನಮ್ಮ ಕರ್ನಾಟಕ ಸೇನೆಯಿಂದ ಧರಣಿ ಸತ್ಯಾಗ್ರಹ

ಕಲಬುರಗಿ; ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ, ಯಡ್ರಾಮಿ, ಅಫಜಲಪೂರ, ಸೇಡಂ, ಆಳಂದ, ಚಿಂಚೋಳಿ  ತಾಲೂಕಿನಲ್ಲಿ ಜಂಗಲ್ ಕಟಿಂಗ್ ಹಾಗೂ ಮೆಂಟನೆನ್ಸ್…

5 hours ago