ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ತಾನದ ವಿದೇಶಾಂಗ ಸಚಿವರ ಅವಹೇಳನಕಾರಿ ಹೇಳಿಕೆ ಪಾಕಿಸ್ತಾನದ ನ್ಯೂನತೆಯನ್ನು ಬಹಿರಂಗಪಡಿಸಿದೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಟೀಕಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ಪಾಕಿಸ್ತಾನ ಭಯೋತ್ಪಾದಕರ ತಾಣವಾಗಿದೆ.ಮೋದಿ ಬಗ್ಗೆ ಅಂಥ ದೇಶದ ಸಚಿವರು ಮಾತನಾಡಿ ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ ಎಂದು ಟೀಕಿಸಿದರು.ನಮ್ಮ ಸೈನಿಕರು ಚೀನಾವನ್ನು ಹಿಮ್ಮೆಟ್ಟಿಸುತ್ತಿದ್ದಾರೆ.ಆದರೆ ರಾಹುಲ ಗಾಂಧಿ ನಮ್ಮ ಸೈನಿಕರ ಶೌರ್ಯವನ್ನು ಅಣಕಿಸುವ ಮಾದರಿಯಲ್ಲಿ ವ್ಯಂಗ್ಯವಾಡುತ್ತಿರುವುದು ಖಂಡನೀಯ ಎಂದು ಅವರು ತಿಳಿಸಿದರು.
ಅಲ್ಪಸಂಖ್ಯಾತರ ಮತಕ್ಕಾಗಿ ಕಾಂಗ್ರೆಸ ನಾಯಕರು ಪ್ರತಿಯೊಂದು ವಿಚಾರದಲ್ಲೂ ಭಯೋತ್ಪಾದಕರ ಪರ ನಿಂತಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕುಕ್ಕರ್ ಬಾಂಬ್ ಪ್ರಕರಣದ ಆರೋಪಿಯ ಪರ ವಹಿಸಿ ಮಾತನಾಡುವ ಹೀನ ಪರಿಸ್ಥಿತಿಗೆ ತಲುಪಿಸಿದ್ದಾರೆ.ಸಿದ್ದರಾಮಯ್ಯ ಕೂಡ ಟಿಪ್ಪು ಓಲೈಕೆ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಕೂಡಲೇ ಪಾಕಿಸ್ತಾನದ ವಿದೇಶಾಂಗ ಸಚಿವರು ಪ್ರಧಾನಿ ಮೋದಿ ಅವರ ಕ್ಷಮೆಯಾಚಿಸಬೇಕು.ಡಿ.ಕೆ.ಶಿವಕುಮಾರ ಅವರು ಜನತೆ, ಪೋಲಿಸರ ಮತ್ತು ದೇಶದ ರಕ್ಷಣಾ ಇಲಾಖೆಯ ಇಲಾಖೆಯ ಕ್ಷಮೆ ಕೇಳಬೇಕು ಎಂದು ಅವರು ಆಗ್ರಹಿಸಿದರು.