ಕಲಬುರಗಿ: ನಗರದ ಸಿದ್ಧಾರ್ಥ ಕಾನೂನು ಮಹಾವಿದ್ಯಾಲಯದಲ್ಲಿ ಕರ್ನಾಟಕ ಪೀಪಲ್ಸ್ ಎಜುಕೇಷನ್ ಸೊಸೈಟಿಸ್ ಸಿದ್ಧಾರ್ಥ ಕಾನೂನು ಮಹಾವಿದ್ಯಾಲಯ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ಘಟಕದ 2022-23 ಸಾಲಿನ ಕಾರ್ಯ ಚಟುವಟಿಕೆಗಳಿಗೆ ಗುವಿವಿ ಜೈವಿಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ರಮೇಶ ಲಂಡನಕರ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ನಿವೃತ್ತ ಪ್ರಶುಪಾಲರು ಹಾಗೂ ರಾಷ್ಟ್ರೀಯ ಸೇವಾಯೋಜನೆಯ ರಾಜ್ಯಪ್ರಶಸ್ತಿ ವಿಜೇತರಾದ ನರೇಂದ್ರ ಬಡಶೇಷಿ, ಕರ್ನಾಟಕ ಪೀಪಲ್ಸ್ ಎಜುಕೇಷನ್ ಸೊಸೈಟಿ ಪ್ರಧಾನ ಕಾರ್ಯದರ್ಶಿ ಶಾಂತಪ್ಪ ಸುರನ, ಆಡಳಿತಾಧಿಕಾರಿ ಡಾ. ಚಂದ್ರಶೇಖರ ಶಿಲವಂತ, ಸಂಯೋಜಕಿ ಡಾ. ಅಪರ್ಣಾ, ಕಾರ್ಯಕ್ರಮ ಅಧಿಕಾರಿ ಡಾ. ತಿಪ್ಪೆಸ್ವಾಮಿ ಎಸ್, ಪ್ರಾಂಶುಪಾಲ ಡಾ. ಎಸ್. ಚಂದ್ರಶೇಖರ್ ಸೇರಿದಂತೆ ಇನ್ನಿತರರಿದ್ದರು.