ಬಿಸಿ ಬಿಸಿ ಸುದ್ದಿ

ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗೆ ಆಗ್ರಹಿಸಿ ಗ್ರಾ.ಪಂಗಳ ಮುಂದೆ ಪ್ರತಿಭಟನೆ

ಕಲಬುರಗಿ: ನೆಟೆ ರೋಗಕ್ಕೆ ತೊಗರಿ ನಾಶವಾಗಿರುವ ಎಕರೆಗೆ ರೂ.25000 ಪರಿಹಾರ ಧನ ನೀಡಬೇಕು ಮತ್ತು ಪ್ರದಾನಮಂತ್ರಿ ವಿಮಾ ಫಸಲ ಯೋಜನೆಯಲ್ಲಿ ರೈತರು ಕಟ್ಟಿದ ಹಣ ಪಾವತಿ, ರೈತರ ಬ್ಯಾಂಕ್ ಸಾಲ ಮನ್ನಾ ಸೇರಿದಂತೆ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘಟನೆ,  ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಮತ್ತು ಸಿಐಟಿಯು ನೇತೃತ್ವದಲ್ಲಿ ಕಮಲಾಪುರ ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯತಿ ಗಳ ಮುಂದೆ ಪ್ರತಿಭಟನೆ ಜರುಗಿತು.

ತಾಲ್ಲೂಕಿನಾದ್ಯಂತ ಕರ್ನಾಟಕ ಪ್ರಾಂತ ರೈತ ಸಂಘಟನೆ, ಕಮಲಾಪುರ ತಾಲ್ಲೂಕು ಸಮಿತಯ ಕಾರ್ಯದರ್ಶಿ ಕಾ.ಮೆಹಬೂಬ ಶಾ ಕುರಿಕೋಟಾ, ಸಿಐಟಿಯು, ಕಮಲಾಪುರ ತಾಲ್ಲೂಕು ಸಮಿತಿಯ ಕಾರ್ಯದರ್ಶಿ  ಭೀಮಣ್ಣಾ ಕಲ್ಕುಟಗಿ, ಜನವಾದಿ ಮಹಿಳಾ ಸಂಘಟನೆ, ತಾಲ್ಲೂಕು ಸಮಿತಿಯ ಕಾರ್ಯದರ್ಶಿ, ಜಯಶ್ರೀ ಕಮಲಾಪುರ, ತಾಲ್ಲೂಕು ಅಧ್ಯಕ್ಷರಾದ ವಿರುಪಾಕ್ಷಪ್ಪ ತಡಕಲ್, ಶ್ರೀಮಂತ ಬಿರಾದಾರ, ಸುಧಾಮ ಧನ್ನಿ, ಪಾಂಡುರಂಗ ಮಾವಿನಕರಗ, ಬಾಬು ಹಿರಮಶೆಟ್ಟಿ, ರೇವಣಸಿದ್ದಪ್ಪ ಕುದಮೂಡ್, ವೀರಭದ್ರ ಕಲಬುರಗಿ, ಶಿವ ವಿ ಕೆ ಸಲಗರ್, ರ್ಯಾವಪ್ಪ, ಸುಭಾಷ, ಮಮತಾ ಕಮಲಾಪುರ, ನಿರ್ಮಲಾ, ಬಾಬು ವಿ ಕೆ ಸಲಗರ್ ಮುಂತಾದವರು ಗ್ರಾಮ ಪಂಚಾಯತಿಗಳ ಮುಂದೆ ನಡೆದ ಹೋರಾಟಗಳ ನೇತೃತ್ವ ವಹಿಸಿದರು.

ಪ್ರತಿಭಟನೆಯಲ್ಲಿ ಎಲ್ಲೆಡೆ ಕೂಡಲೆ ಉದ್ಯೋಗ ಖಾತ್ರಿ ಆರಂಭಿಸಬೇಕು. 200 ದಿನಗಳಿಗೆ ಕೆಲಸ ವಿಸ್ತರಿಸಿ ರೂ.600 ಕೂಲಿ ನೀಡಬೇಕೆಂದು ಹೋರಾಟ ನೀರತ ಪ್ರತಿಭಟನಾಕಾರರು ಆಗ್ರಹಿಸಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

14 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

16 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

23 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

23 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

24 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago