ಬಿಸಿ ಬಿಸಿ ಸುದ್ದಿ

ತೊಗರಿಗೆ ನೆಟೆರೋಗ: 25 ಸಾವಿರ ಪರಿಹಾರಕ್ಕೆ ಭರತ್ ಎನ್. ಚವ್ಹಾಣ್ ಆಗ್ರಹ

ಕಮಲಾಪುರ: ವಾಣಿಜ್ಯಕ ಬೆಳೆಯಾದ ತೊಗರಿ ನೆಟೆರೋಗದಿಂದ ಸಂಪೂರ್ಣ ಹಾನಿಯಾಗಿದ್ದು, ಸಂತ್ರಸ್ತ ರೈತರಿಗೆ ಪ್ರತಿ ಎಕರೆಗೆ 25000ರೂ.ಗಳ ಪರಿಹಾರವನ್ನು ರಾಜ್ಯ ಸರ್ಕಾರವು ತ್ವರಿತಗತಿಯಲ್ಲಿ ಕೊಡಬೇಕು ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿ ಭರತ್ ಎನ್. ಚವ್ಹಾಣ್ ಅವರು ಒತ್ತಾಯಿಸಿದರು.

ಶನಿವಾರ ತಹಸಿಲ್ದಾರ್ ಕಚೇರಿ ಮುಂದೆ ಯುವ ಮುಖಂಡ ವಿಜಯಕುಮಾರ್ ಜಿ. ರಾಮಕೃಷ್ಣ ಅವರ ನೇತೃತ್ವದಲ್ಲಿ ಹಮ್ಮಿಕೊಂಡ ಬೃಹತ್ ಪ್ರತಿಭಟನಾ ಮೆರವಣಿಗೆಯ ನಂತರ ಹೇಳಿಕೆಯನ್ನು ಬಿಡುಗಡೆ ಮಾಡಿದ ಅವರು, ರೈತರು ಸಾಲ, ಸೋಲ ಮಾಡಿ ತೊಗರಿ ಬಿತ್ತನೆ ಮಾಡಿದ್ದರು. ಈ ಹಿಂದೆ ಅತಿವೃಷ್ಟಿಯಿಂದ ಹಾನಿಗೀಡಾದ ಬೆಳೆಯು ಈಗ ನೆಟೆರೋಗದಿಂದ ಶೇಕಡಾ 80ರಷ್ಟು ಬೆಳೆ ಹಾನಿಯಾಗಿದೆ. ಪ್ರತಿ ಎಕರೆಗೆ ಆರೇಳು ಸಾವಿರ ರೂ.ಗಳನ್ನು ವೆಚ್ಚ ಮಾಡಿ ಬಿತ್ತಿದ ಬೆಳೆ ಹಾನಿಯಾಗಿದ್ದರಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮುನ್ನ ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಹೇಳಿ ಅಧಿಕಾರಕ್ಕೆ ಬಂತು. ಡಾ. ಸ್ವಾಮಿನಾಥನ್ ವರದಿಯನ್ನು ಅನುಷ್ಠಾನಕ್ಕೆ ತರುವುದಾಗಿಯೂ ಘೋಷಿಸಿದ್ದರು. ಆದಾಗ್ಯೂ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 7 ವರ್ಷಗಳಾದರೂ ಸಹ ರೈತರ ಆದಾಯ ದುಪ್ಪಟ್ಟು ಆಗಿಲ್ಲ. ಬದಲಾಗಿ ರೈತರ ಆತ್ಮಹತ್ಯೆಗಳು ದುಪ್ಪಟ್ಟಾಗಿವೆ ಎಂದು ಅವರು ತೀವ್ರ ಕಳವಳ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ತೊಗರಿ ಬಿತ್ತನೆ ವರ್ಷದಿಂದ ವರ್ಷಕ್ಕೆ ಕಡಿಮೆ ಆಗುತ್ತಿದೆ. ಕಳೆದ ಮೂರು ವರ್ಷಗಳ ಹಿಂದೆ ಐದು ಲಕ್ಷ ಹೆಕ್ಟೆರ್‍ಗೂ ಅಧಿಕ ಬಿತ್ತನೆ ಆಗುತ್ತಿತ್ತು. ಕೋವಿಡ್ ಕಾರಣದಿಂದಾಗಿ ಕಳೆದ ಎರಡು ವರ್ಷಗಳಲ್ಲಿ ಬಿತ್ತನೆ ಅತ್ಯಂತ ಕಡಿಮೆ ಆಗಿದೆ. ಇನ್ನು ಈ ಬಾರಿ ನೆಟೆರೋಗದಿಂದ ಸುಮಾರು ಶೇಕಡಾ 80ರಷ್ಟು ತೊಗರಿ ಬೆಳೆ ನಾಶವಾಗಿದೆ. ಆದಾಗ್ಯೂ, ರಾಜ್ಯ ಸರ್ಕಾರವು ಗಮನ ಕೊಡುತ್ತಿಲ್ಲ. ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಈ ಕುರಿತು ರಾಜ್ಯ ಸರ್ಕಾರವು ಘೋಷಣೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

3 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

3 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

22 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago