ಬಿಸಿ ಬಿಸಿ ಸುದ್ದಿ

ಆನ್‍ಲೈನ್‍ನಲ್ಲಿ ಸಾರಿಗೆ ಸೇವೆಗಳು – ಹೊಸ ಆರ್‍ಟಿಓ ಕಚೇರಿಗಳ ಸ್ಥಾಪನೆ ಇಲ್ಲ: ಸಚಿವ ಬಿ.ಶ್ರೀರಾಮುಲು

ಬೆಂಗಳೂರು/ಬೆಳಗಾವಿ ಸುವರ್ಣಸೌಧ: ಸಾರ್ವಜನಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆಯು ಬಹುತೇಕ ಕಡೆಗಳಲ್ಲಿ ಸಾರಿಗೆ ಶಿಬಿರಗಳನ್ನು ನಡೆಸುತ್ತಿದೆ.ಸುಮಾರು 30 ಸೇವೆಗಳನ್ನು ಆನ್‍ಲೈನ್ ಮೂಲಕವೇ ಒದಗಿಸಲಾಗುತ್ತಿದೆ.ಸಾರ್ವಜನಿಕರು ಕಚೇರಿಗಳಿಗೆ ಭೇಟಿ ನೀಡದೇ ಸಂಪರ್ಕ ರಹಿತವಾಗಿ ಸೇವೆಗಳನ್ನು ಪಡೆಯುವ ಸೌಲಭ್ಯಗಳಿರುವುದರಿಂದ ರಾಜ್ಯದಲ್ಲಿ ಹೊಸದಾಗಿ ಪ್ರಾದೇಶಿಕ ಸಾರಿಗೆ (ಆರ್‍ಟಿಓ)ಕಚೇರಿಗಳನ್ನು ಸ್ಥಾಪಿಸುವುದಿಲ್ಲ ಎಂದು ಸಾರಿಗೆ ಮತ್ತು ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿಂದು ಬೈಂದೂರು ಶಾಸಕ ಸುಕುಮಾರಶೆಟ್ಟಿ ಬಿ.ಎಂ.ಅವರ ಪ್ರಶ್ನೆಗೆ ಉತ್ತರಿಸುತ್ತ ಈ ಮಾಹಿತಿ ನೀಡಿದರು.

ಉಡುಪಿ ಜಿಲ್ಲೆಯ ಕುಂದಾಪುರ , ಬೈಂದೂರು ತಾಲೂಕುಗಳು ಮತ್ತು ಸುತ್ತಮುತ್ತಲಿನ ಸಾರ್ವಜನಿಕರ ಅನುಕೂಲಕ್ಕಾಗಿ ಕುಂದಾಪುರದಲ್ಲಿ ಪ್ರತಿ ಮಂಗಳವಾರ ಸಾರಿಗೆ ಶಿಬಿರ ನಡೆಯುತ್ತಿದೆ.ರಾಜ್ಯದ ಇತರೆಡೆಗಳಲ್ಲಿಯೂ ಅವಶ್ಯಕತೆಗೆ ಅನುಗುಣವಾಗಿ ನಿಯಮಿತವಾಗಿ ಸಾರಿಗೆ ಶಿಬಿರಗಳು ನಡೆಯುತ್ತಿವೆ.

ಕುಂದಾಪುರದಲ್ಲಿ ನೂತನ ಪ್ರಾದೇಶಿಕ ಸಾರಿಗೆ ಕಚೇರಿ ಸ್ಥಾಪಿಸಬೇಕೆಂಬ ಪ್ರಸ್ತಾವ ಸರ್ಕಾರದ ಗಮನಕ್ಕೆ ಬಂದಿದ್ದು,ಅಲ್ಲಿ ಕಚೇರಿ ಸ್ಥಾಪನೆಗೆ ಮಾನದಂಡಗಳು ಪೂರೈಕೆಯಾಗಿಲ್ಲ ಎಂಬ ಎಂದು ಉಡುಪಿ ಆರ್‍ಟಿಓ ವರದಿ ಸಲ್ಲಿಸಿದ್ದಾರೆ.

ಹೊಸ ಆರ್‍ಟಿಓ ಅಥವಾ ಎಆರ್‍ಟಿಓ ಕಚೇರಿಗಳನ್ನು ತೆರೆಯಲು ನಿಗದಿಪಡಿಸಿರುವ ಮಾನದಂಡಗಳನ್ನು ಪರಿಷ್ಕರಿಸುವ ಕುರಿತು ಪರಿಶೀಲಿಸಿ ವರದಿ ನೀಡಲು ಅಪರ ಸಾರಿಗೆ ಆಯುಕ್ತರು ಹಾಗೂ ರಾಜ್ಯ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ರಚಿಸಿದ್ದ ಸಮಿತಿಯು, ಇಲಾಖೆಯು ಸಾರ್ವಜನಿಕರ ಅನುಕೂಲಕ್ಕಾಗಿ ಸಾರಿಗೆ ಶಿಬಿರಗಳನ್ನು ನಡೆಸುತ್ತಿದೆ,ಸುಮಾರು 30 ಸೇವೆಗಳನ್ನು ಆನ್‍ಲೈನ್ ಸೇವೆಗಳನ್ನಾಗಿ ಮಾರ್ಪಡಿಸಲಾಗಿದೆ.ಸಾರ್ವಜನಿಕರು ಕಚೇರಿಗಳಿಗೆ ಭೇಟಿ ನೀಡದೇ ಸಂಪರ್ಕರಹಿತವಾಗಿ ಸೇವೆಗಳನ್ನು ಪಡೆಯಲು ಅವಕಾಶಗಳಿರುವದರಿಂದ ಹೊಸ ಆರ್‍ಟಿಓ ಕಚೇರಿಗಳ ಸ್ಥಾಪನೆಯ ಪ್ರಶ್ನೆ ಉದ್ಭವಿಸುವುದಿಲ್ಲ ಎಂಬ ಅಭಿಪ್ರಾಯ ನೀಡಿದೆ.

ಸಾರ್ವಜನಿಕರಿಗೆ ವಾಹನ ಅನುಜ್ಞಾ ಪತ್ರ,ವಾಹನ ನೋಂದಣಿಯ ಸ್ಮಾರ್ಟ್ ಕಾರ್ಡ್‍ಗಳನ್ನು ಅವರ ಮನೆಯ ವಿಳಾಸಗಳಿಗೆ ಅಂಚೆ ಮೂಲಕ ತಲುಪಿಸಲಾಗುತ್ತಿದೆ.ವಾಹನ-4,ಸಾರಥಿ-4 ಮತ್ತು ಇ-ಪೇಮೆಂಟ್ ಆಫ್ ಟ್ಯಾಕ್ಸ್‍ನಂತಹ ಆನ್‍ಲೈನ್ ಸೇವೆಗಳನ್ನು ರಾಜ್ಯದ ಎಲ್ಲಾ ಕಚೇರಿಗಳಲ್ಲಿ ಜಾರಿಗೊಳಿಸಲಾಗಿದೆ.ಕರ್ನಾಟಕ -1,ಬೆಂಗಳೂರು -1 ಮತ್ತು ಮೊಬೈಲ್-1 ಆ್ಯಪ್‍ಗಳ ಮೂಲಕವೂ ವಾಹನಗಳ ಮಾಹಿತಿ,ವಿವರಗಳನ್ನು ಪಡೆಯಬಹುದಾಗಿದೆ.ಇ-ಆಡಳಿತ ಇಲಾಖೆಯ ಗ್ರಾಮ ಒನ್ ಮತ್ತು ಜನಸೇವಕ ಯೋಜನೆಗಳಡಿಯೂ ಸಾರಿಗೆ ಇಲಾಖೆಯ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸಲಾಗುತ್ತಿದೆ.ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ಪ್ರಸ್ತುತ ಸಾರಿಗೆ ಇಲಾಖೆಯಲ್ಲಿ ಯಾವುದೇ ಹೊಸ ಕಚೇರಿಗಳನ್ನು ಪ್ರಾರಂಭಿಸುವ ಅವಶ್ಯಕತೆ ಉದ್ಭವಿಸುವುದಿಲ್ಲ ಎಂದು ಸಚಿವ ಬಿ.ಶ್ರೀರಾಮುಲು ಸದನದಲ್ಲಿ ವಿವರಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

12 mins ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

10 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

10 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

10 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago