ಕಲಬುರಗಿ: ನೋಂದಾಯಿತ ಕಟ್ಟಡ ಮತ್ತು ಇತರೆ ಕಾರ್ಮಿಕರಿಗೆ ಉಚಿತ ಬಸ್ ಪಾಸ್‍ಗಳನ್ನು ನೀಡಲಾಗುತ್ತಿದ್ದು, ಡಿ.21 ರಿಂದ ಕರ್ನಾಟಕ ಒನ್, ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಬಸ್ ಪಾಸ್ ಪಡೆದುಕೊಳ್ಳುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಲಬುರಗಿ ವಿಭಾಗ-2ರ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಜಿ.ಗಂಗಾಧರ ತಿಳಿಸಿದ್ದಾರೆ.
ಆನ್‍ಲೈನ್ ಅರ್ಜಿ ಸಲ್ಲಿಕೆಗೆ ಕಟ್ಟಡ ಕಾರ್ಮಿಕರು ಆಧಾರ್ ಕಾರ್ಡ್, ಕಟ್ಟಡ ಕಾರ್ಮಿಕರ ನೋಂದಾಯಿತ ಗುರುತಿನ ಚೀಟಿ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರದ ಜೊತೆಗೆ ಆಧಾರ್ ಸಂಖ್ಯೆಗೆ ಜೋಡಣೆಯಾದ ಮೋಬೈಲ್ ತೆಗೆದುಕೊಂಡು ಸೇವಾ ಕೇಂದ್ರಕ್ಕೆ ಹೋಗಬೇಕು. ಇದಲ್ಲದೆ ಹೆಬ್ಬೆಟ್ಟಿನ ಗುರುತು ಸಹ ನೀಡಬೇಕು ಎಂದು ಅವರು ತಿಳಿಸಿದ್ದಾರೆ.
ಉಚಿತ ಬಸ್ ಪಾಸ್ ಪಡೆದ ಕಾರ್ಮಿಕರು ವಾಸ ಸ್ಥಳದಿಂದ 45. ಕಿ.ಮೀ ವ್ಯಾಪ್ತಿಯಲ್ಲಿ ನಿಗಮದ ನಗರ, ಸಾಮಾನ್ಯ, ವೇಗದೂತ ಹಾಗೂ ಹೊರವಲಯ ಸಾರಿಗೆಗಳಲ್ಲಿ ಮಾತ್ರ ಪ್ರಯಾಣಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಇಲಾಖೆಯ ಉಚಿತ ಸಹಾಯವಾಣಿ ಸಂಖ್ಯೆ-155214 ಹಾಗೂ ಸಾರಿಗೆ ಇಲಾಖೆಯ ವಿಭಾಗೀಯ ಸಂಚಾರ ಅಧಿಕಾರಿಗಳ ಮೊ.ಸಂಖ್ಯೆ-7760984086ಗೆ ಸಂಪರ್ಕಿಸಬಹುದಾಗಿದೆ.