ಬಿಸಿ ಬಿಸಿ ಸುದ್ದಿ

ಕಲಬುರಗಿ: ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ನಾಮನಿರ್ದೇಶನ ಆಹ್ವಾನ

ಕಲಬುರಗಿ: ಕೃಷಿ ಇಲಾಖೆಯಿಂದ 2022-23ನೇ ಸಾಲಿನ ಆತ್ಮ ಯೋಜನೆಯಡಿಯಲ್ಲಿ ಪ್ರಗತಿಪರ ರೈತರ ಮತ್ತು ರೈತ ಗುಂಪುಗಳ ಸಾಧನೆಗಳನ್ನು ಗುರುತಿಸಿ ಜಿಲ್ಲಾ ಮಟ್ಟದಲ್ಲಿ ಶ್ರೇಷ್ಠ ಗುಂಪು ಪ್ರಶಸ್ತಿ, ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳಿಗೆ ನಾಮನಿರ್ದೇಶನ ಆಹ್ವಾನಿಸಲಾಗಿದೆ.

ಕೃಷಿ ವಲಯದಲ್ಲಿ ತಮ್ಮದೇ ಆದ ಅಮೂಲ್ಯ ಅನ್ವೇಷಣೆ/ ವಿಶಿಷ್ಟ ಸಾಧನೆಗೈದವರನ್ನು ಮತ್ತು ರೈತ ಗುಂಪುಗಳಿಗೆ ನಗದು ಬಹುಮಾನದೊಂದಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಕೃಷಿ ಮಹಿಳೆಯರಿಗೆ ಪ್ರಥಮಾಧ್ಯತೆ ನೀಡಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ತಿಳಿಸಿದ್ದಾರೆ.

ಶ್ರೇಷ್ಠ ಗುಂಪು ಪ್ರಶಸ್ತಿಗೆ ನಾಮನಿರ್ದೇಶನ ಸಲ್ಲಿಸಬಯಸುವ ರೈತ ಗುಂಪುಗಳು ಕಳೆದ 3 ವರ್ಷಗಳಿಂದ ನಿರಂತರವಾಗಿ ರೈತರ ಉನ್ನತಿಗಾಗಿ ಕೆಲಸ ಮಾಡುತ್ತಿರಬೇಕು, ಈ ಅವಧಿಯಲ್ಲಿ ಕೃಷಿ ಇಲ್ಲವೇ ಕೃಷಿ ಸಂಬಂಧಿತ ಇಲಾಖೆಗಳಿಂದ ಸಂಯೋಜಿತವಾಗಿ ಅವುಗಳ ಸವಲತ್ತುಗಳನ್ನು ಪಡೆದುಕೊಂಡಿರಬೇಕು ಹಾಗೂ ಯಾವುದೇ ರೀತಿಯ ರಾಜ್ಯ ಮಟ್ಟದ ಇಲ್ಲವೇ ಜಿಲ್ಲಾ ಮಟ್ಟದ ಪ್ರಶಸ್ತಿಗಳನ್ನು ಸ್ವೀಕರಿಸಿರಬಾರದು.

ಇನ್ನು ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ನಾಮನಿರ್ದೇಶನ ಸಲ್ಲಿಸಲು ಇಚ್ಛಿಸುವ ರೈತರು ಕೃಷಿ ಕ್ಷೇತ್ರದಲ್ಲಿ ಗಮನಾರ್ಹ/ ವಿಶಿಷ್ಟ ಸಾಧನೆಯನ್ನು ಮಾಡಿರಬೇಕು. ಸಂಶೋಧನೆ/ ಸಾಧನೆಗಳು ವ್ಯಾಪಕವಾಗಿ ಅಳವಡಿಸಲು ಕೃಷಿ ಕ್ಷೇತ್ರದ ಏಳಿಗೆಗೆ ಪೂರಕವಾಗಿರಬೇಕು. ಸಾಧನೆಯು ಮೂಲ ಸ್ವರೂಪವಾಗಿದ್ದು, ಬೇರೆಯವರು ಮಾಡಿರುವ ಸಾಧನೆಗಿಂತ ಭಿನ್ನವಾಗಿರಬೇಕು. ರೈತ/ರೈತ ಮಹಿಳೆ ಕೃಷಿ ಹಾಗೂ ಸಂಬಂಧಿತ ಚಟುವಟಿಕೆಗಳಲ್ಲಿ ತೊಡಗಿಕೊಡಗಿರಬೇಕು. ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನು ಸಾಗಾಣಿಕೆ, ರೇಷ್ಮೆ ಬೇಸಾಯ, ಹೈಟೆಕ್ ಹಸಿರು ಮನೆ ಅಳವಡಿಕೆ, ಕೃಷಿ ಸಂಸ್ಕರಣೆ ಹಾಗೂ ಅರಣ್ಯ ಕೃಷಿಗಳಾದ ಆಡು ಕುರಿ, ಮೊಲ, ಇತ್ಯಾದಿ ಸಾಕಾಣಿಕೆ ಚಟುವಟಿಕೆಗಳನ್ನು ಮಾಡುತ್ತಿರಬೇಕು. ಕಂದಾಯ ಇಲಾಖೆಯ ದಾಖಲೆ ಪ್ರಕಾರ ಜಮೀನು (ಖಾತೆ) ಹೊಂದಿರುವ ಹಾಗೂ ಸ್ವಂತ ಕ್ರೀಯಾಶೀಲ ಕೃಷಿಕರಾಗಿರಬೇಕು.

ರಾಜ್ಯ-ಕೇಂದ್ರ ಸರ್ಕಾರದ ವಿವಿಧ ಇಲಾಖೆ ಮತ್ತು ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ ಮತ್ತು ನಿರ್ವಹಿಸುತ್ತಿರುವ ಅಭ್ಯರ್ಥಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ ಎಂದಿರುವ ಜಂಟಿ ಕೃಷಿ ನಿರ್ದೇಶಕರು, ಪ್ರಶಸ್ತಿಗೆ ಆಯ್ಕೆ ಮಾಡುವಲ್ಲಿ ಜಿಲ್ಲಾ ಹಾಗೂ ತಾಲ್ಲೂಕ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಆಯ್ಕೆ ಸಮಿತಿಯ ನಿರ್ಣಯವೇ ಅಂತಿಮವಾಗಿರುತ್ತದೆ ಎಂದು ತಿಳಿಸಿದ್ದಾರೆ.

ರೈತ/ರೈತ ಮಹಿಳೆ ಹಾಗೂ ರೈತ ಗುಂಪುಗಳು ನಿಗದಿತ ನಾಮ ನಿರ್ದೇಶನಗಳ ಅರ್ಜಿ ನಮೂನೆಯನ್ನು ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರುಗಳ ಕಛೇರಿಯಿಂದ ಪಡೆದು ಭರ್ತಿ ಮಾಡಿ ಅದರೊಂದಿಗೆ ಪಹಣಿ ಸೇರಿದಂತೆ ಅಗತ್ಯ ದಾಖಲೆಗಳು ಲಗತ್ತಿಸಿ ಇದೇ ಕಚೇರಿಗಳ ಸಹಾಯಕ ನಿರ್ದೇಶಕರು ಅಥವಾ ತಾಲೂಕು ತಾಂತ್ರಿಕ ಅಧಿಕಾರಿಗಳಿಗೆ ಡಿಸೆಂಬರ್ 31 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿ, ತಾಲೂಕ ತಾಂತ್ರಿಕ ವ್ಯವಸ್ಥಾಪಕರುಗಳಲ್ಲದೆ ಆಳಂದ: ಸಂಜಯಕುಮಾರ ಸವದಿ-9481880805, ಅಫಜಲಪೂರ: ಅನೀತಾ-8095094038, ಜೇವರ್ಗಿ: ಬಸವರಾಜ-9902182092, ಕಲಬುರಗಿ: ಶಿವರಾಯ-9900383618, ಸೇಡಂ: ಬಾಲರಾಜ-9480294584, ಚಿತ್ತಾಪೂರ: ಶರಣ ಪಾಟೀಲ-7411171837 ಹಾಗೂ ಚಿಂಚೋಳಿ: ವೀರಶೆಟ್ಟಿ-9686152201 ಅವರನ್ನು ಸಂಪರ್ಕಿಸಲು ಕೋರಿದೆ.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

3 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

4 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

4 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

4 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

5 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

5 hours ago