ಸುರಪುರ: ಇದೆ 27 ರಂದು ಸುರಪುರ ಮತ್ತು ಹುಣಸಗಿ ತಾಲೂಕಿನ ಸಮಗ್ರ ಜನರ ಹಿತದೃಷ್ಟಿಯಿಂದ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ರಾಜುಗೌಡ ತಿಳಿಸಿದರು.
ತಾಯಿ ತಿಮ್ಮಮ್ಮ ಮೆಮೊರೆಬಲ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ರಾಜಾನಂದ ನಗರದಲ್ಲಿ ಹಮ್ಮಿಕೊಂಡಿರುವ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಆಯೋಜನೆಯ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿ,ಯುನೈಟೆಡ್ ಆಸ್ಪತ್ರೆ ಕಲಬುರಗಿಯ ಎಲ್ಲಾ ವೈದ್ಯರು ಭಾಗವಹಿಸಲಿದ್ದು ಮೇಳದಲ್ಲಿ ಎಲ್ಲಾ ವಿಧದ ಕಾಯಿಲೆಗಳ ಪರೀಕ್ಷೆ,ಔಷಧಿ ವಿತರಣೆ ಅಗತ್ಯವಿದ್ದಲ್ಲಿ ಶಸ್ತ್ರ ಚಿಕಿತ್ಸೆಯನ್ನೂ ನಂತರದಲ್ಲಿ ಮಾಡಿಸಲಾಗುವುದು ಎಂದು ತಿಳಿಸಿದರು.
ಜೊತೆಗೆ ರಕ್ತ ದಾನ ಶಿಬಿರವು ನಡೆಯಲಿದೆ ಹಾಗೂ ಸಂಜೆ 7 ಗಂಟೆಯಿಂದ ಮೆಘಾ ಸ್ಯಾಂಡಲ್‍ವುಡ್ ಮ್ಯೂಸಿಕಲ್ ನೈಟ್ ಕಾರ್ಯಕ್ರಮ ನಡೆಯಲಿದೆ. ಚಿತ್ರನಟರಾದ ಲವ್ಲಿಸ್ಟಾರ್ ಪ್ರೇಮ್, ಶರಣ್ ಸೇರಿದಂತೆ ಗುರು ಶಿಷ್ಯರು ಚಿತ್ರ ತಂಡವೂ ಭಾಗವಹಿಸಲಿದೆ.ಜೊತೆಗೆ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಅವರ ನೇತೃತ್ವದಲ್ಲಿ ರಸಮಂಜರಿ ಕಾರ್ಯಕ್ರಮವೂ ನಡೆಯಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಅಧ್ಯಕ್ಷರಾದ ರಾಜಾ ಹನುಮಪ್ಪ ನಾಯಕ (ತಾತಾ),ಡಿವೈಎಸ್ಪಿ ಮಂಜುನಾಥ ಟಿ,ಪಿಐ ಆನಂದ ವಾಘಮೊಡೆ, ಮುಖಂಡರಾದ ಬಸನಗೌಡ ಹಳ್ಳಿಕೋಟಿ,ಶಂಕರ ನಾಯಕ,ರಾಜಾ ರಂಗಪ್ಪ ನಾಯಕ,ಶ್ರೀನಿವಾಸ ನಾಯಕ ದರಬಾರಿ,ರಾಜಾ ಜೈರಾಮ ನಾಯಕ,ಅಂಬ್ರೇಶ ನಾಯಕ ಡೊಣ್ಣಿಗೇರ,ರಂಗನಗೌಡ ಪಾಟೀಲ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…